Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್: ಕಂಬಕ್ಕೆ ಡಿಕ್ಕಿ ಹೊಡೆದು ಕಣಿವೆಗೆ ಉರುಳಿದ ಬಸ್, ಮೂವರು ಸಾವು, 25 ಜನರಿಗೆ ಗಾಯ

ಗುಜರಾತ್‌ನ ಬನಸ್ಕಾಂತ ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಕಂಬಕ್ಕೆ ಡಿಕ್ಕಿ ಹೊಡೆದು ಗುಡ್ಡಗಾಡು ರಸ್ತೆಯಿಂದ ಪಲ್ಟಿಯಾಗಿ ಕಣಿವೆಗೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ ಮತ್ತು 25 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ವಾಹನದಲ್ಲಿ ಸುಮಾರು 50 ಯಾತ್ರಿಕರು ಪ್ರಯಾಣಿಸುತ್ತಿದ್ದರು.

ಗುಜರಾತ್: ಕಂಬಕ್ಕೆ ಡಿಕ್ಕಿ ಹೊಡೆದು ಕಣಿವೆಗೆ ಉರುಳಿದ ಬಸ್, ಮೂವರು ಸಾವು, 25 ಜನರಿಗೆ ಗಾಯ
ಬಸ್Image Credit source: India Today
Follow us
ನಯನಾ ರಾಜೀವ್
|

Updated on: Oct 07, 2024 | 3:05 PM

ಗುಜರಾತ್‌ನ ಬನಸ್ಕಾಂತ ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಕಂಬಕ್ಕೆ ಡಿಕ್ಕಿ ಹೊಡೆದು ಗುಡ್ಡಗಾಡು ರಸ್ತೆಯಿಂದ ಪಲ್ಟಿಯಾಗಿ ಕಣಿವೆಗೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ ಮತ್ತು 25 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ವಾಹನದಲ್ಲಿ ಸುಮಾರು 50 ಯಾತ್ರಿಕರು ಪ್ರಯಾಣಿಸುತ್ತಿದ್ದರು.

ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ಅಕ್ಷಯ್ ರಾಜ್ ಮೊದಲು ಹೇಳಿದ್ದರು, ಬಳಿಕ ಅವರು ಸಾವಿನ ಸಂಖ್ಯೆ ಮೂರು ಎಂದು ಅಂಕಿಅಂಶವನ್ನು ಸರಿಪಡಿಸಿದರು.

ಖೇಡಾ ಜಿಲ್ಲೆಯಿಂದ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಅಂಬಾಜಿ ದೇವಸ್ಥಾನದಿಂದ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಪಲ್ಟಿಯಾಗಿ ಗುಡ್ಡದಿಂದ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು  ಓದಿ: ತೆಲಂಗಾಣದಲ್ಲಿ ಎರಡು ಪ್ರತ್ಯೇಕ ಅಪಘಾತ, 9 ಮಂದಿ ಸಾವು

ಬಸ್‌ನಲ್ಲಿ ಸುಮಾರು 50 ಯಾತ್ರಾರ್ಥಿಗಳು ಖೇಡಾ ಜಿಲ್ಲೆಯ ಕತ್ಲಾಲ್‌ಗೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸುತ್ತಮುತ್ತಲಿನ ಜನರು ರಕ್ಷಣಾ ಕಾರ್ಯಾಚರಣೆಯಲ್ಲಿ ಪೊಲೀಸರು ಮತ್ತು ರಕ್ಷಕರಿಗೆ ಸಹಾಯ ಮಾಡಿದರು. ಪೊಲೀಸರು ಸ್ಥಳದಲ್ಲಿ ಹಾಜರಿದ್ದು, ಅಪಘಾತದ ಕುರಿತು ಪರಿಶೀಲನೆ ನಡೆಸಿದ್ದಾರೆ.

ಮತ್ತೊಂದು ಘಟನೆ

ಭೀಕರ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು, 28 ಮಂದಿಗೆ ಗಾಯ ಜಮ್ಮು ಕಾಶ್ಮೀರದಲ್ಲಿ ಪುಲ್ವಾಮಾದಿಂದ ಬದ್ಗಾಮ್‌ಗೆ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧರನ್ನು ಸಾಗಿಸುತ್ತಿದ್ದ ಬಸ್‌ ಅಪಘಾತದಲ್ಲಿ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು 28 ಮಂದಿ ಗಾಯಗೊಂಡಿದ್ದಾರೆ. 2ನೇ ಹಂತದ ಚುನಾವಣಾ ನಿಯೋಜನೆಗಾಗಿ ತೆರಳುತ್ತಿದ್ದ ವೇಳೆ ಬಸ್ ಅಪಘಾತಕ್ಕೀಡಾಗಿದೆ. ಗಾಯಾಳುಗಳ ನೆರವಿಗೆ ತಕ್ಷಣದ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಬಸ್ಸಿನಲ್ಲಿ ಸುಮಾರು 35 ಯೋಧರಿದ್ದರು ಎಂದು ಹೇಳಲಾಗುತ್ತಿದೆ. ಗಾಯಗೊಂಡ ಯೋಧರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಗಾಯಗೊಂಡ ಸೈನಿಕರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಖಾನ್ಸಾಹಿಬ್ ಮತ್ತು ಬದ್ಗಾಮ್ ಆಸ್ಪತ್ರೆಗಳಿಗೆ ವರ್ಗಾಯಿಸಲಾಗಿದೆ. ಅಪಘಾತದ ಸುತ್ತಲಿನ ಸಂದರ್ಭಗಳ ಬಗ್ಗೆ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ