Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ವಿರುದ್ಧ ಪ್ರತಿಭಟನೆಗೆಂದು ಟಿಎಂಸಿ ನಾಯಕರನ್ನು ದೆಹಲಿಗೆ ಹೊತ್ತೊಯ್ಯುತ್ತಿದ್ದ ಬಸ್​ ಅಪಘಾತ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಭಾನುವಾರ ದೆಹಲಿಗೆ ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪಶ್ಚಿಮ ಬಂಗಾಳದ ಆಡಳಿತ ಪಕ್ಷ ಹೇಳಿದ್ದು, ಬಸ್ ಅನ್ನು ರಾಜ್ಯಕ್ಕೆ ಹಿಂತಿರುಗಿಸಲು ಆದೇಶಿಸಲಾಗಿದೆ. ವಾಹನದಲ್ಲಿ ಬಂಗಾಳದ ಪುರುಲಿಯಾ ಜಿಲ್ಲೆಯ ಬೆಂಬಲಿಗರು ತೆರಳುತ್ತಿದ್ದರು. ಈ ಘಟನೆಯು ಬಂಗಾಳದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಮತ್ತು ಸಂಸದ ಸುಕಾಂತ ಮಜುಂದಾರ್ ಅವರು ಎಕ್ಸ್​ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಟಿಎಂಸಿಯನ್ನು ಟೀಕಿಸಿದ್ದಾರೆ.

ಅಪಘಾತ
Follow us
ನಯನಾ ರಾಜೀವ್
|

Updated on: Oct 01, 2023 | 2:56 PM

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಭಾನುವಾರ ದೆಹಲಿಗೆ ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪಶ್ಚಿಮ ಬಂಗಾಳದ ಆಡಳಿತ ಪಕ್ಷ ಹೇಳಿದ್ದು, ಬಸ್ ಅನ್ನು ರಾಜ್ಯಕ್ಕೆ ಹಿಂತಿರುಗಿಸಲು ಆದೇಶಿಸಲಾಗಿದೆ. ವಾಹನದಲ್ಲಿ ಬಂಗಾಳದ ಪುರುಲಿಯಾ ಜಿಲ್ಲೆಯ ಬೆಂಬಲಿಗರು ತೆರಳುತ್ತಿದ್ದರು. ಈ ಘಟನೆಯು ಬಂಗಾಳದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಮತ್ತು ಸಂಸದ ಸುಕಾಂತ ಮಜುಂದಾರ್ ಅವರು ಎಕ್ಸ್​ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಟಿಎಂಸಿಯನ್ನು ಟೀಕಿಸಿದ್ದಾರೆ.

ಪೋಸ್ಟ್‌ನಲ್ಲಿ ಮಹಿಳೆಯ ಜೊತೆಗೆ ಹಾನಿಗೊಳಗಾದ ಬಸ್‌ನ ಚಿತ್ರಗಳಿವೆ, ಆಕೆಯ ಮೂಗಿನ ಭಾಗದಿಂದ ರಕ್ತಸ್ರಾವವಾಗುತ್ತಿತ್ತು. ಯಾವುದೇ ಸಹಾಯ ಬೇಕಿದ್ದಲ್ಲಿ ಸಂಕೋಚವಿಲ್ಲದೆ ಕೇಳಿ ಎಂದು ಮಜುಂದಾರ್ ಬರೆದುಕೊಂಡಿದ್ದಾರೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯಿದೆ (MGNREGA) ಅಡಿಯಲ್ಲಿ ಬಂಗಾಳಕ್ಕೆ ಹಣವನ್ನು ತಡೆಹಿಡಿಯಲಾಗಿದೆ ಎಂದು ಆರೋಪಿಸಿ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ಅಕ್ಟೋಬರ್ 2-3 ರಂದು ಪಕ್ಷದ ಪ್ರತಿಭಟನೆಗಾಗಿ TMC ಬೆಂಬಲಿಗರು ದೆಹಲಿಗೆ ತೆರಳಿದ್ದಾರೆ.

ಪೂರ್ವ ರೈಲ್ವೆಯು ತನ್ನ ಬೆಂಬಲಿಗರನ್ನು ನಿಗದಿತ ಪ್ರತಿಭಟನೆಗೆ ಕರೆದೊಯ್ಯಲು ವಿಶೇಷ ರೈಲಿನ ಪಕ್ಷದ ಮನವಿಯನ್ನು ಶುಕ್ರವಾರ ತಿರಸ್ಕರಿಸಿದ ನಂತರ ಬಸ್ ಸೌಕರ್ಯವನ್ನು ಕಲ್ಪಿಸಲಾಗಿತ್ತು. ಟಿಎಂಸಿ ಪ್ರಕಾರ, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಜಾಬ್ ಕಾರ್ಡ್ ಹೊಂದಿರುವವರನ್ನು ರಾಷ್ಟ್ರ ರಾಜಧಾನಿಗೆ ಕರೆದೊಯ್ಯಲು ರೈಲು ಕೋಚ್‌ಗಳನ್ನು ಕಾಯ್ದಿರಿಸಲಾಗಿದೆ.

ಮತ್ತಷ್ಟು ಓದಿ: ರಾಜ್ಯದಲ್ಲಿ ಹೆಚ್ಚಾದ ಕಾವೇರಿ ಕಿಚ್ಚು; ಇಂದು ಕೂಡ ಹಲವೆಡೆ ಪ್ರತಿಭಟನೆ, ಎಲ್ಲೆಲ್ಲಿ ಎಂಬ ವಿವರ ಇಲ್ಲಿದೆ

ಪಕ್ಷದ ಸಂಸದ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಪೂರ್ವ ರೈಲ್ವೆಗೆ ಠೇವಣಿ ಇರಿಸಿದ್ದ ಹಣವನ್ನು ಹಿಂತಿರುಗಿಸಲಾಗಿದೆ ಎಂದು ಹೇಳಿದರು. ಪ್ರತಿಭಟನೆಗೆ 50 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವರದಿಯಾಗಿದೆ.

ಇದಕ್ಕೂ ಮುನ್ನ ಮಾತನಾಡಿದ ಟಿಎಂಸಿ ಸಂಸದ ಶಂತನು ಸೇನ್, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಸ್‌ಗಳ ಮೇಲೆ ದಾಳಿ ನಡೆಸುವ ಭೀತಿ ಪಕ್ಷಕ್ಕೆ ಇದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ

ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು

50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು

‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್

4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್

ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ

ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ

ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ

ಶಾಸಕರಾದ ಪೊನ್ನಣ್ಣ, ಮಂಥರ್​ಗೌಡ ಹೆಸರು ನಾಪತ್ತೆಯಾಗಿವೆ: ವಿನಯ್ ಸಹೋದರ

ಬ್ಯಾಂಕಾಕ್‌ನ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಮೋದಿ- ನೇಪಾಳದ ಪ್ರಧಾನಿ ಭೇಟಿ