Madhya Pradesh: ಮಧ್ಯಪ್ರದೇಶದ ಬೇತುಲ್‌ನಲ್ಲಿ ಕಾರಿಗೆ ಬಸ್ ಡಿಕ್ಕಿ, 11 ಮಂದಿ ಸಾವು

| Updated By: ಅಕ್ಷಯ್​ ಪಲ್ಲಮಜಲು​​

Updated on: Nov 04, 2022 | 12:10 PM

ಕಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 11 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶದ ಬೇತುಲ್‌ನ ಜಲ್ಲಾರ್ ಪೊಲೀಸ್ ಠಾಣೆ ಬಳಿ ಕಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 11 ಜನರು ಸಾವನ್ನಪ್ಪಿದ್ದಾರೆ.

Madhya Pradesh: ಮಧ್ಯಪ್ರದೇಶದ ಬೇತುಲ್‌ನಲ್ಲಿ ಕಾರಿಗೆ ಬಸ್ ಡಿಕ್ಕಿ, 11 ಮಂದಿ ಸಾವು
Bus collides with car, 11 people die
Follow us on

ಬೆತುಲ್: ಕಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 11 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶದ ಬೇತುಲ್‌ನ ಜಲ್ಲಾರ್ ಪೊಲೀಸ್ ಠಾಣೆ ಬಳಿ ಕಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 11 ಜನರು ಸಾವನ್ನಪ್ಪಿದ್ದಾರೆ. ಒಬ್ಬ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬೆತುಲ್ ಎಸ್ಪಿ ಸಿಮಲಾ ಪ್ರಸಾದ್ ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.

ಮಧ್ಯಪ್ರದೇಶದ ಬೇತುಲ್‌ನಲ್ಲಿ ಬಸ್ ಮತ್ತು ಎಸ್‌ಯುವಿ ನಡುವೆ ಡಿಕ್ಕಿ ಸಂಭವಿಸಿದೆ. ಈ ಘಟನೆಯಿಂದ 11 ಜನರು ಸಾವನ್ನಪ್ಪಿದ್ದಾರೆ. ಗುಡ್ಗಾಂವ್ ಮತ್ತು ಭೈಸ್ದೇಹಿ ನಡುವೆ ಅಪಘಾತ ಸಂಭವಿಸಿದೆ. ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ಮೂಲಗಳ ಪ್ರಕಾರ, ಪೊಲೀಸ್ ಸಿಬ್ಬಂದಿ ಮತ್ತು ಜಿಲ್ಲಾಧಿಕಾರಿ ಸ್ಥಳಕ್ಕೆ ಧಾವಿಸಿದರು.

ಈ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ, 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದರು. ಈ ಬಗ್ಗೆ ಟ್ವಿಟರ್‌ನಲ್ಲಿ, ಪ್ರಧಾನಿ ನರೇಂದ್ರ ಮೋದಿಯವರ ಕಚೇರಿ ಹಂಚಿಕೊಂಡಿದ್ದು, ಬೆತುಲ್‌ನಲ್ಲಿ ಸಂಭವಿಸಿದ ಅಪಘಾತದಿಂದ ಪ್ರಾಣಹಾನಿಯಿಂದ ನೋವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ. ಪರಿಹಾರ ಮೃತರ ಸಂಬಂಧಿಕರಿಗೆ ನೀಡಲಾಗುವುದು, ಗಾಯಗೊಂಡವರಿಗೆ 50,000 ರೂ. ನೀಡಲಾಗುವುದು ಎಂದು ಹೇಳಲಾಗಿದೆ.

 

Published On - 9:54 am, Fri, 4 November 22