ಅಸ್ಸಾಂನ ದರ್ರಾಂಗ್ ಜಿಲ್ಲೆಯಲ್ಲಿ ಬಸ್ ಕೆರೆಗೆ ಬಿದ್ದ ಪರಿಣಾಮ ಕನಿಷ್ಠ 10 ಪ್ರಯಾಣಿಕರು ಗಾಯಗೊಂಡಿದ್ದಾರೆ.
ಜಿಲ್ಲೆಯ ಮರೋಯ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ-15ರಲ್ಲಿ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್‌ನ ಚಕ್ರಗಳು ರಾಷ್ಟ್ರೀಯ ಹೆದ್ದಾರಿ-15ರ ಸಮೀಪ ಕೆರೆಗೆ ಬಿದ್ದಿದೆ. ಅಪಘಾತದ ವೇಳೆ ಬಸ್ ಮಂಗಲ್ದೋಯಿಯಿಂದ ಗುವಾಹಟಿಗೆ ತೆರಳುತ್ತಿತ್ತು. ಸ್ಥಳೀಯರು ಮತ್ತು ಪೊಲೀಸರು ಪ್ರಯಾಣಿಕರನ್ನು ರಕ್ಷಿಸಿದ್ದಾರೆ.
ಗಾಯಾಳುಗಳ ಪೈಕಿ ನಾಲ್ವರನ್ನು ಉತ್ತಮ ಚಿಕಿತ್ಸೆಗಾಗಿ ಮಂಗಲ್ಡೊಯ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದರ್ರಾಂಗ್ ಜಿಲ್ಲೆಯ ಪೊಲೀಸ್ ಅಧೀಕ್ಷಕ ಪ್ರಕಾಶ್ ಸೋನೊವಾಲ್ ಸುದ್ದಿ ಸಂಸ್ಥೆ ANI ಗೆ ಮಾಹಿತಿ ನೀಡಿದ್ದಾರೆ.
ಮತ್ತಷ್ಟು ಓದಿ: Tamil Nadu Bus Accident: ಎರಡು ಖಾಸಗಿ ಬಸ್ಗಳ ನಡುವೆ ಭೀಕರ ಅಪಘಾತ, 4 ಮಂದಿ ಸಾವು, 70 ಪ್ರಯಾಣಿಕರಿಗೆ ಗಾಯ
ಇತ್ತೀಚೆಗೆ ನಡೆದ ಅಪಘಾತ
ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿದ್ದು ಈ ಅಪಘಾತ(Accident)ದಲ್ಲಿ ನಾಲ್ವರು ಮೃತಪಟ್ಟು 70ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿತ್ತು, ಕಡಲೂರು ಜಿಲ್ಲೆಯ ನೆಲ್ಲಿಕುಪ್ಪಂ ಬಳಿಯ ಪಟ್ಟಂಬಾಕ್ಕಂನಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಡಲೂರು ಮತ್ತು ಪನ್ರುತಿ ನಡುವೆ ಎರಡು ಖಾಸಗಿ ಬಸ್‌ಗಳು ಸಂಚರಿಸುತ್ತಿದ್ದವು. ಒಂದು ಬಸ್‌ನ ಮುಂಭಾಗದ ಟೈರ್ ಒಡೆದ ಪರಿಣಾಮ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಬಸ್‌ಗೆ ಡಿಕ್ಕಿ ಹೊಡೆದಿತ್ತು.
ಆಂಬ್ಯುಲೆನ್ಸ್ ಬರುವ ಮುನ್ನವೇ ಪ್ರಯಾಣಿಕರು ಗಾಯಾಳುಗಳನ್ನು ಕಡಲೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಮತ್ತು ಚಿಕಿತ್ಸೆ ಪಡೆಯುತ್ತಿರುವವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ