AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ-ಪುಣೆ ಹೆದ್ದಾರಿಯಲ್ಲಿ ಕಮರಿಗೆ ಬಿದ್ದ ಬಸ್, 12 ಜನ ಸಾವು, 27 ಮಂದಿಗೆ ಗಾಯ

ಬಸ್ಸೊಂದು ಕಮರಿಗೆ ಬಿದ್ದ 12 ಜನ ಸ್ಥಳದಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಹಳೆಯ ಮುಂಬೈ-ಪುಣೆ ಹೆದ್ದಾರಿಯಲ್ಲಿ ಇಂದು (ಏ.15) ಮುಂಜಾನೆ ನಡೆದಿದೆ.

ಅಕ್ಷಯ್​ ಪಲ್ಲಮಜಲು​​
|

Updated on:Apr 15, 2023 | 12:19 PM

Share

ಮುಂಬೈ: ಬಸ್ಸೊಂದು ಕಮರಿಗೆ ಬಿದ್ದ 12 ಜನ ಸ್ಥಳದಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ (Maharashtra) ರಾಯಗಢ ಜಿಲ್ಲೆಯ ಹಳೆಯ ಮುಂಬೈ-ಪುಣೆ (Pune Mumbai) ಹೆದ್ದಾರಿಯಲ್ಲಿ ಇಂದು (ಏ.15) ಮುಂಜಾನೆ ನಡೆದಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ 12 ಜನ ಸಾವನ್ನಪ್ಪಿದ್ದಾರೆ. 27 ಜನಕ್ಕೆ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಬಸ್ಸು ಮುಂಬೈನ ಪ್ರಸಿದ್ಧ ಸಂಗೀತ ತಂಡದ ಸದಸ್ಯರನ್ನು ಹೊತ್ತ ಪುಣೆಯಿಂದ ಮುಂಬೈಗೆ ಹೋಗುತ್ತಿದ್ದಾಗ ಹೆದ್ದಾರಿಯ ಶಿಂಗ್ರೋಬಾ ದೇವಸ್ಥಾನದ ಬಳಿ ಬೆಳಿಗ್ಗೆ 4:50ರ ಸುಮಾರಿಗೆ ಬಸ್​​ ಕಮರಿಗೆ ಬಿದ್ದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಅಪಘಾತ ಖೋಪೋಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಮುಂಬೈನ ಗೋರೆಗಾಂವ್‌ನಿಂದ ಬಾಜಿ ಪ್ರಭು ವಾಡಕ್ ಸಂಗೀತ ತಂಡದ ಸದಸ್ಯರು ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್‌ವಾಡ್​​ದಲ್ಲಿ ಕಾರ್ಯಕ್ರಮ ಮುಗಿಸಿ ಗೋರೆಗಾಂವ್‌ಗೆ ಹಿಂತಿರುಗುತ್ತಿದ್ದರು. ಬಸ್​​ ಶನಿವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಸ್ಥಳದಿಂದ ಬಿಟ್ಟಿದೆ. ಪುಣೆ – ಮುಂಬೈ ಹೆದ್ದಾರಿಯ ಶಿಂಗ್ರೋಬಾ ದೇವಸ್ಥಾನದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದು 12 ಜನರು ಸ್ಥಳದಲೇ ಸಾವನ್ನಪ್ಪಿದ್ದಾರೆ ಮತ್ತು 27 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಗಾಯಗೊಂಡವರನ್ನು ಮತ್ತು ಮೃತಪಟ್ಟವರನ್ನು ಮುಂಬೈನ ಸಿಯಾನ್ ಮತ್ತು ಗೋರೆಗಾಂವ್, ನೆರೆಯ ಪಾಲ್ಘರ್ ಜಿಲ್ಲೆಯ ವಿರಾರ್‌ಗೆ ಸೇರಿದವರು ಎಂದು ರಾಯಗಢ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸೋಮನಾಥ್ ಘರ್ಗೆ ತಿಳಿಸಿದ್ದಾರೆ.

ಇದನ್ನೂ ಓದಿ: Tumakuru: ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವು

ಗಾಯಾಳುಗಳನ್ನು ಖೋಪೋಲಿ ಗ್ರಾಮಾಂತರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಮೃತರು ಮತ್ತು ಗಾಯಗೊಂಡವರು 18 ರಿಂದ 25 ವರ್ಷ ವಯಸ್ಸಿನವರು ಎಂದು ಹೆಚ್ಚುವರಿ ಎಸ್ಪಿ ಅತುಲ್ ಝೆಂಡೆ ತಿಳಿಸಿದ್ದಾರೆ. ಸ್ಥಳೀಯ ಪೊಲೀಸರ ತಂಡ ಮತ್ತು ಚಾರಣಿಗರ ತಂಡ ರಕ್ಷಣಾ ಕಾರ್ಯಾಚರಣೆವನ್ನು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಸರಣಿ ಭೀಕರ ಅಪಘಾತದಲ್ಲಿ 11 ಜನ ಸಾವು

ಖಾಸಗಿ ಬಸ್ ಡಿಕ್ಕಿಯಾಗಿ (accident) ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿರುವಂತಹ ಘಟನೆ ತುಮಕೂರಿನ ಹಿರೇಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಶಿರಾದಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಖಾಸಗಿ ಬಸ್​, ಬೆಂಗಳೂರಿನಿಂದ ತುಮಕೂರು ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ. ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಕ್ಯಾತ್ಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಮತ್ತೊಂದು ಪ್ರಕರಣದಲ್ಲಿ ಸರ್ಕಾರಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ 6 ಜನರು ಸಾವನ್ನಪ್ಪಿರುವಂತಹ ದುರ್ಘಟನೆ ಕೊಡಗು ಜಿಲ್ಲೆಯ ಮಡಿಕೇರಿ-ಮಂಗಳೂರು ನಡುವಿನ ಹೆದ್ದಾರಿಯಲ್ಲಿ ನಡೆದಿದೆ. ಮಡಿಕೇರಿ ತಾಲೂಕಿನ ಸಂಪಾಜೆ ಬಳಿ ಬಸ್​ಗೆ ಕಾರು ಅಪ್ಪಳಿಸಿದೆ. ಪರಿಣಾಮ ಕಾರಿನಲ್ಲಿ ತೆರಳುತ್ತಿದ್ದ 6 ಜನರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮೂವರು ಸಾವನ್ನಪ್ಪಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:19 am, Sat, 15 April 23

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ