ಮಧ್ಯಪ್ರದೇಶದಲ್ಲಿ ಕಂದಕಕ್ಕೆ ಉರುಳಿ ಬಿದ್ದ ಬಸ್; ಐವರು ದುರ್ಮರಣ, 25 ಮಂದಿಗೆ ಗಾಯ
ಇನ್ನೊಂದು ವಾಹನವನ್ನು ಬಸ್ ಚಾಲಕ ಓವರ್ ಟೇಕ್ ಮಾಡಲು ಯತ್ನಿಸಿದಾಗ ಈ ಅಪಘಾತ (Accident) ಸಂಭವಿಸಿದೆ ಎಂದು ಸಿಮ್ರಾಲ್ ಪೊಲೀಸ್ ಠಾಣೆಯ ಉಸ್ತುವಾರಿ ಆರ್ ಎಸ್ ಭದೋರಿಯಾ ಹೇಳಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಭೇರುಘಾಟ್‌ನಲ್ಲಿ ಸುಮಾರು 50 ಅಡಿ ಆಳವಿರುವ...
ಮಹು: ಗುರುವಾರ ಮಧ್ಯಾಹ್ನ ಮಧ್ಯಪ್ರದೇಶದ (Madhya pradesh) ಇಂದೋರ್ ಜಿಲ್ಲೆಯ ಭೇರುಘಾಟ್‌ನಲ್ಲಿ(Bherughat) ಬಸ್ಸೊಂದು 50 ಅಡಿ ಆಳದ ಕಂದಕಕ್ಕೆ ಉರುಳಿದ ಪರಿಣಾಮ ಐವರು ಸಾವಿಗೀಡಾಗಿದ್ದು 25 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇನ್ನೊಂದು ವಾಹನವನ್ನು ಬಸ್ ಚಾಲಕ ಓವರ್ ಟೇಕ್ ಮಾಡಲು ಯತ್ನಿಸಿದಾಗ ಈ ಅಪಘಾತ (Accident) ಸಂಭವಿಸಿದೆ ಎಂದು ಸಿಮ್ರಾಲ್ ಪೊಲೀಸ್ ಠಾಣೆಯ ಉಸ್ತುವಾರಿ ಆರ್ ಎಸ್ ಭದೋರಿಯಾ ಹೇಳಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಭೇರುಘಾಟ್‌ನಲ್ಲಿ ಸುಮಾರು 50 ಅಡಿ ಆಳವಿರುವ ಕಂದಕಕ್ಕೆ ಬಸ್ ಉರುಳಿ ಬಿದ್ದಿದೆ. ಈ ದಾರಿಯಾಗಿ ಸಾಗುತ್ತಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ ನಂತರ ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಯಾಣಿಕರನ್ನು ರಕ್ಷಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಐವರು ಪ್ರಯಾಣಿಕರು ಸ್ಥಳದಲ್ಲಿ ಸಾವಿಗೀಡಾಗಿದ್ದು , 25 ಮಂದಿಗೆ ಗಾಯಗೊಳಗಾಗಿದ್ದಾರೆ. ಗಾಯಗೊಂಡವರನ್ನು ಮಹು ಮತ್ತು ಇಂದೋರ್‌ನ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದರು. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ದುರಂತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದು , ಗಾಯಗೊಂಡ ಪ್ರಯಾಣಿಕರು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸಿದ್ದಾರೆ.
इंदौर के सिमरोल के पास हुई बस दुर्घटना में कई अनमोल जिंदगियों के असामयिक निधन का हृदय विदारक समाचार प्राप्त हुआ।
ईश्वर से दिवंगत आत्माओं को अपने श्रीचरणों में स्थान देने और परिजनों को यह वज्रपात सहन करने की शक्ति देने व घायलों के शीघ्र स्वस्थ होने की प्रार्थना करता हूं।
— Shivraj Singh Chouhan (@ChouhanShivraj) June 23, 2022
दु:ख की इस घड़ी में परिवार स्वयं को अकेला न समझे मैं और समस्त मध्यप्रदेश शोकाकुल परिवारों के साथ हैं।
मृतकों के परिजनों को 4-4 लाख रुपये और गंभीर रूप से घायलों को 50-50 हजार रुपये राशि प्रदान की जायेगी और सामान्य रूप से घायलों के इलाज की संपूर्ण व्यवस्था राज्य सरकार करेगी।
— Shivraj Singh Chouhan (@ChouhanShivraj) June 23, 2022
ಮೃತರ ಕುಟುಂಬಕ್ಕೆ ನಾಲ್ಕು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿಗಳನ್ನು ಸರ್ಕಾರ ಘೋಷಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.