ಜಮ್ಮು ಕಾಶ್ಮೀರ: ಬಸ್ ಪಲ್ಟಿಯಾಗಿ ಕಂದಕಕ್ಕೆ ಬಿದ್ದು ,38 ಮಂದಿ ದುರ್ಮರಣ
ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಬಸ್ ಕಂದಕಕ್ಕೆ ಬಿದ್ದ ಪರಿಣಾಮ 38 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಟೋಟೆ-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಟ್ರುಂಗಲ್-ಅಸ್ಸಾರ್ ಬಳಿ ಬಸ್ ಸ್ಕಿಡ್ ಆಗಿ 300 ಅಡಿ ಕೆಳಕ್ಕೆ ಬಿದ್ದಾಗ 40 ಪ್ರಯಾಣಿಕರು ಬಸ್‌ನಲ್ಲಿದ್ದರು ಎಂದು ಜಮ್ಮು ವಿಭಾಗೀಯ ಆಯುಕ್ತ ರಮೇಶ್ ಕುಮಾರ್ ತಿಳಿಸಿದ್ದಾರೆ.

ಗಾಯಾಳುಗಳನ್ನು ಕಿಶ್ತ್ವಾರ್ ಮತ್ತು ದೋಡಾದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಕೆಲವರ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಾಳುಗಳನ್ನು ಸಾಗಿಸಲು ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ಗಾಯಗೊಂಡವರನ್ನು ಅಗತ್ಯಕ್ಕೆ ಅನುಗುಣವಾಗಿ ಜಿಲ್ಲಾ ಆಸ್ಪತ್ರೆ ಕಿಶ್ತ್ವಾರ್ ಮತ್ತು ಜಿಎಂಸಿ ದೋಡಾಕ್ಕೆ ಸ್ಥಳಾಂತರಿಸಲಾಗಿದೆ. ಹೆಚ್ಚು ಗಾಯಗೊಂಡವರನ್ನು ಸ್ಥಳಾಂತರಿಸಲು ಹೆಲಿಕಾಪ್ಟರ್ ಸೇವೆಯನ್ನು ವ್ಯವಸ್ಥೆಗೊಳಿಸಲಾಗುವುದು. ಅಗತ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಲಾಗಿದೆ.
ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಕೆಲವು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
ಮತ್ತಷ್ಟು ಓದಿ:ಕಾರಿಗೆ ಅಡ್ಡ ಬಂದ ಪ್ರಾಣಿಯನ್ನು ತಪ್ಪಿಸಲು ಹೋಗಿ ಅಪಘಾತ, ಐವರು ಸಾವು
ದೋಡಾದ ಅಸ್ಸಾರ್‌ನಲ್ಲಿ ಸಂಭವಿಸಿದ ದುರಂತ ಬಸ್ ಅಪಘಾತದಲ್ಲಿ ಜೀವಹಾನಿಯಿಂದ ತೀವ್ರ ನೋವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪ, ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ತಿಳಿಸಿದ್ದಾರೆ. ದೋಡಾ ಜಿಲ್ಲೆಯಲ್ಲಿ ಒಂದು ವಾರದಲ್ಲಿ ನಡೆದ ಎರಡನೇ ರಸ್ತೆ ಅಪಘಾತ ಇದಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:47 pm, Wed, 15 November 23