ಮುಗಿದಿಲ್ಲ ವಲಸೆ ಕಾರ್ಮಿಕರ ದುರಂತಗಳ ಸರಮಾಲೆ: ಬಸ್ ಹರಿದು 6 ಮಂದಿ ಸಾವು

ಲಕ್ನೋ: ಲಾಕ್​ಡೌನ್ ಹಿನ್ನೆಲೆಯಲ್ಲಿ ಹರಿಯಾಣದಿಂದ ಬಿಹಾರದಲ್ಲಿರುವ ತಮ್ಮ ಮನೆಗಳಿಗೆ ನಡೆದುಕೊಂಡೆ ತೆರಳುತ್ತಿದ್ದ 6 ಮಂದಿ ವಲಸೆ ಕಾರ್ಮಿಕರು ಬಸ್ ಹರಿದು ಮೃತಪಟ್ಟಿರುವ ಘಟನೆ ದೆಹಲಿ-ಸಹರಾನ್‌ಪುರ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಆರು ವಲಸೆ ಕಾರ್ಮಿಕರು ಮೃತಪಟ್ಟಿದ್ದು, ಐವರಿಗೆ ಗಂಭೀರವಾಗಿ ಗಾಯಗಳಾಗಿವೆ. ಇವರೆಲ್ಲರೂ ಪಂಜಾಬ್‌ನಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಅವರು ಹರಿಯಾಣದಿಂದ ಬಿಹಾರದಲ್ಲಿರುವ ತಮ್ಮ ಮನೆಗಳಿಗೆ ಹಿಂದಿರುಗುತ್ತಿದ್ದಾಗ ಗಲೀಲಿ ಚೆಕ್ ಪೋಸ್ಟ್ ಮತ್ತು ರೋಹನಾ ಟೋಲ್ ಪ್ಲಾಜಾ ನಡುವಿನ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಬಸ್‌ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ. ನಿನ್ನೆ ರಾತ್ರಿ […]

ಮುಗಿದಿಲ್ಲ ವಲಸೆ ಕಾರ್ಮಿಕರ ದುರಂತಗಳ ಸರಮಾಲೆ: ಬಸ್ ಹರಿದು 6 ಮಂದಿ ಸಾವು
ಸಾಧು ಶ್ರೀನಾಥ್​

Updated on: May 14, 2020 | 1:00 PM

ಲಕ್ನೋ: ಲಾಕ್​ಡೌನ್ ಹಿನ್ನೆಲೆಯಲ್ಲಿ ಹರಿಯಾಣದಿಂದ ಬಿಹಾರದಲ್ಲಿರುವ ತಮ್ಮ ಮನೆಗಳಿಗೆ ನಡೆದುಕೊಂಡೆ ತೆರಳುತ್ತಿದ್ದ 6 ಮಂದಿ ವಲಸೆ ಕಾರ್ಮಿಕರು ಬಸ್ ಹರಿದು ಮೃತಪಟ್ಟಿರುವ ಘಟನೆ ದೆಹಲಿ-ಸಹರಾನ್‌ಪುರ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಆರು ವಲಸೆ ಕಾರ್ಮಿಕರು ಮೃತಪಟ್ಟಿದ್ದು, ಐವರಿಗೆ ಗಂಭೀರವಾಗಿ ಗಾಯಗಳಾಗಿವೆ.

ಇವರೆಲ್ಲರೂ ಪಂಜಾಬ್‌ನಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಅವರು ಹರಿಯಾಣದಿಂದ ಬಿಹಾರದಲ್ಲಿರುವ ತಮ್ಮ ಮನೆಗಳಿಗೆ ಹಿಂದಿರುಗುತ್ತಿದ್ದಾಗ ಗಲೀಲಿ ಚೆಕ್ ಪೋಸ್ಟ್ ಮತ್ತು ರೋಹನಾ ಟೋಲ್ ಪ್ಲಾಜಾ ನಡುವಿನ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಬಸ್‌ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

Published On - 12:11 pm, Thu, 14 May 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us