Kannada News National ಪೌರತ್ವ ತಿದ್ದುಪಡಿ ಕಾಯ್ದೆಗೆ ತೀವ್ರ ವಿರೋಧ, ದೆಹಲಿಯಲ್ಲಿ 4 ಬಸ್‌ಗಳಿಗೆ ಬೆಂಕಿ
ಪೌರತ್ವ ತಿದ್ದುಪಡಿ ಕಾಯ್ದೆಗೆ ತೀವ್ರ ವಿರೋಧ, ದೆಹಲಿಯಲ್ಲಿ 4 ಬಸ್‌ಗಳಿಗೆ ಬೆಂಕಿ
ದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ಜೋರಾಗಿ ನಡೆಯುತ್ತಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ದೆಹಲಿಯ ಭಾರತ್ ನಗರ ಬಳಿ ನಾಲ್ಕು ಬಸ್‌ಗಳಿಗೆ ಬೆಂಕಿಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉದ್ರಿಕ್ತರು ಪೊಲೀಸರ ಮೇಲೆ ಕಲ್ಲೆಸೆದಿದ್ದಾರೆ. ಘಟನೆಯಲ್ಲಿ ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ದೆಹಲಿಯಲ್ಲಿ ಮೂರು ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ.
Follow us on
ದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ಜೋರಾಗಿ ನಡೆಯುತ್ತಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ದೆಹಲಿಯ ಭಾರತ್ ನಗರ ಬಳಿ ನಾಲ್ಕು ಬಸ್‌ಗಳಿಗೆ ಬೆಂಕಿಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉದ್ರಿಕ್ತರು ಪೊಲೀಸರ ಮೇಲೆ ಕಲ್ಲೆಸೆದಿದ್ದಾರೆ. ಘಟನೆಯಲ್ಲಿ ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ದೆಹಲಿಯಲ್ಲಿ ಮೂರು ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ.