Navjot Singh Sidhu ನಿರ್ಧಾರ ತೆಗೆದುಕೊಳ್ಳಲು ಅನುಮತಿಸದಿದ್ದರೆ ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸುವೆ: ನವಜೋತ್ ಸಿಂಗ್ ಸಿಧು

ಗುರುವಾರ ರಾತ್ರಿ ಅಮೃತಸರದ ವ್ಯಾಪಾರಿ ಮತ್ತು ಕೈಗಾರಿಕಾ ಸಂಘ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಸಿಧು ನಾನು ಎಂದಿಗೂ ರಾಜಿ ಮಾಡಿಕೊಂಡಿಲ್ಲ. ನಾನು ಜನರ ಭರವಸೆಯನ್ನು ಈಡೇರಿಸಿದರೆ ಮುಂದಿನ 20 ವರ್ಷಗಳ ಕಾಲ ಪಂಜಾಬ್‌ನಲ್ಲಿ ಕಾಂಗ್ರೆಸ್ ಆಡಳಿತವನ್ನು ಖಚಿತಪಡಿಸುತ್ತೇನೆ ಎಂದು ನಾನು ಪಕ್ಷದ ಹೈಕಮಾಂಡ್‌ಗೆ ಹೇಳಿದ್ದೇನೆ

Navjot Singh Sidhu ನಿರ್ಧಾರ ತೆಗೆದುಕೊಳ್ಳಲು ಅನುಮತಿಸದಿದ್ದರೆ ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸುವೆ: ನವಜೋತ್ ಸಿಂಗ್ ಸಿಧು
ನವಜೋತ್ ಸಿಂಗ್ ಸಿಧು
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Aug 28, 2021 | 11:30 AM

ದೆಹಲಿ: ನವಜೋತ್ ಸಿಂಗ್ ಸಿಧು ಅವರ ಸಲಹೆಗಾರ ಮಾಲ್ವಿಂದರ್ ಸಿಂಗ್ ಮಾಲಿ ಶುಕ್ರವಾರ ರಾಜೀನಾಮೆ ನೀಡಿದ ಬೆನ್ನಲ್ಲೇ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರು ರಾಜ್ಯಕ್ಕೆ ಒಳ್ಳೆಯ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ವಾತಂತ್ರ್ಯವನ್ನು ನಿರಾಕರಿಸುವ ಪ್ರಯತ್ನಗಳ ವಿರುದ್ಧ ಹೋರಾಡುವುದಾಗಿ ಘೋಷಿಸಿದ್ದಾರೆ. ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಮಾಲಿ ಹಾಕುತ್ತಿರುವ ವಿವಾದಾತ್ಮಕ ಪೋಸ್ಟ್‌ಗಳು ಪಂಜಾಬ್ ಕಾಂಗ್ರೆಸ್‌ನಲ್ಲಿ ಬಿರುಗಾಳಿಯನ್ನು ಹುಟ್ಟುಹಾಕಿದೆ.

ಗುರುವಾರ ರಾತ್ರಿ ಅಮೃತಸರದ ವ್ಯಾಪಾರಿ ಮತ್ತು ಕೈಗಾರಿಕಾ ಸಂಘ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಸಿಧು ನಾನು ಎಂದಿಗೂ ರಾಜಿ ಮಾಡಿಕೊಂಡಿಲ್ಲ. ನಾನು ಜನರ ಭರವಸೆಯನ್ನು ಈಡೇರಿಸಿದರೆ ಮುಂದಿನ 20 ವರ್ಷಗಳ ಕಾಲ ಪಂಜಾಬ್‌ನಲ್ಲಿ ಕಾಂಗ್ರೆಸ್ ಆಡಳಿತವನ್ನು ಖಚಿತಪಡಿಸುತ್ತೇನೆ ಎಂದು ನಾನು ಪಕ್ಷದ ಹೈಕಮಾಂಡ್‌ಗೆ ಹೇಳಿದ್ದೇನೆ . ಆದರೆ ನಿರ್ಧಾರಗಳನ್ನು ತೆಗೆದುಕೊಳ್ಳಲು ನೀವು ನನಗೆ ಅನುಮತಿಸದಿದ್ದರೆ ನಾನು ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸುವೆ. ಅಲಂಕೃತ ಕುದುರೆಯಾಗಿ ಕುಳಿತುಕೊಳ್ಳುವುದರಲ್ಲಿ ಅರ್ಥವಿಲ್ಲ ಎಂದಿದ್ದಾರೆ ಸಿಧು.

ಸಿದ್ದು ಹೇಳಿಕೆಗೆ ಪ್ರತಿಕ್ರಿಯೆ ಕೇಳಿದಾಗ ರಾಜ್ಯ ಉಸ್ತುವಾರಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್ ಅವರು, ಹೇಳಿಕೆ ನೀಡಿದ ಸಂದರ್ಭವನ್ನು ಅರಿತ ನಂತರವೇ ಪ್ರತಿಕ್ರಿಯೆ ನೀಡುವುದಾಗಿ ಹೇಳಿದರು.

“ಆದರೆ ಅವರು ನಮ್ಮ ಗೌರವಾನ್ವಿತ ಪಿಪಿಸಿಸಿ ಮುಖ್ಯಸ್ಥರು.ಪಿಸಿಸಿ ಮುಖ್ಯಸ್ಥರಿಗೆ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕಿಲ್ಲದಿದ್ದರೆ, ಯಾರು ಮಾಡುತ್ತಾರೆ?” ರಾವತ್ ದೆಹಲಿಯಲ್ಲಿ ಹೇಳಿದರು.

ಶುಕ್ರವಾರ ಮಾಲಿ ಸಿಧು ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಘೋಷಿಸಿದರು. ತನಗೆ ಏನಾದರೂ ಅಹಿತಕರ ಘಟನೆ ಸಂಭವಿಸಿದರೆ, ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್, ಎಸ್ಎಡಿ ಮುಖಂಡರಾದ ಬಿಕ್ರಮ್ ಸಿಂಗ್ ಮಜಿತಿಯಾ ಮತ್ತು ಸುಖಬೀರ್ ಸಿಂಗ್ ಬಾದಲ್, ಕಾಂಗ್ರೆಸ್ ಸಚಿವ ವಿಜಯ್ ಇಂದರ್ ಸಿಂಗ್ಲಾ, ಕಾಂಗ್ರೆಸ್ ಸಂಸದ ಮನೀಶ್ ತಿವಾರಿ, ಬಿಜೆಪಿ ನಾಯಕ ಸುಭಾಷ್ ಶರ್ಮಾ ಮತ್ತು ಎಎಪಿ ನಾಯಕರಾದ ಜರ್ನೈಲ್ ಸಿಂಗ್ ಮತ್ತು ರಾಘವ್ ಚಡ್ಡಾ ಜವಾಬ್ದಾರನಾಗಿರುತ್ತಾನೆ ಎಂದು ಅವರು ಪೋಸ್ಟ್ ನಲ್ಲಿ ಬರೆದಿದ್ದರು.

ಈ ನಾಯಕರು ಕಾಶ್ಮೀರ ಮತ್ತು ತಾಲಿಬಾನ್ ಕುರಿತು ವಿವಾದಾತ್ಮಕ ಹೇಳಿಕೆಗಳಿರುವ ಮಾಲಿ ಅವರ ಪೋಸ್ಟ್‌ಗಳನ್ನು ಟೀಕಿಸಿದ್ದರು. ಆದಾಗ್ಯೂ, ಮಾಲಿ ಆ ಪೋಸ್ಟ್ ಡಿಲೀಟ್ ಮಾಡಲು ನಿರಾಕರಿಸಿದ್ದರು.

ಕಾಂಗ್ರೆಸ್ ನಾಯಕತ್ವ ಮತ್ತು ರಾವತ್ ಅವರ ಹೆಸರನ್ನು ಉಲ್ಲೇಖಿಸದೇ ದಾಳಿ ಮಾಡಿದ ಮಾಲಿ, ದೆಹಲಿಯಲ್ಲಿ ಹೈಕಮಾಂಡ್‌ಗಳು ಮತ್ತು ಪಂಜಾಬ್ ಉಸ್ತುವಾರಿಗಳಿಗೆ ಪಂಜಾಬ್ ಚಿನ್ನದ ಗಣಿ ಆಗಿ ಮಾರ್ಪಟ್ಟಿದೆ ಎಂದಿದ್ದರು.

ಮಾಲಿಯ ರಾಜೀನಾಮೆಯನ್ನು “ಉತ್ತಮ” ಬೆಳವಣಿಗೆ ಎಂದು ರಾವತ್ ವಿವರಿಸಿದ್ದಾರೆ. ಅವರ ಪೋಸ್ಟ್‌ಗಳು ಅವರ ವೈಯಕ್ತಿಕ ಅಭಿಪ್ರಾಯ ಎಂದು ಮಾಲಿ ಈಗಾಗಲೇ ಫೇಸ್‌ಬುಕ್‌ನಲ್ಲಿ ಸ್ಪಷ್ಟಪಡಿಸಿದ್ದಾರೆ ಎಂದು ಅವರು ಹೇಳಿದರು. ಗುರುವಾರ, ರಾವತ್ ಅವರು ಸಿಧು ಅಂತಹ ಸಲಹೆಗಾರರನ್ನು ವಜಾಗೊಳಿಸಬೇಕು ಎಂದು ಹೇಳಿದ್ದರು. ಅವರು ಹಾಗೆ  ಮಾಡದಿದ್ದರೆ, ನಾನೇ ಮಾಲಿಯನ್ನು ವಜಾ ಮಾಡುತ್ತೇನೆ ಎಂದಿದ್ದರು.

ಪಕ್ಷದ ಉನ್ನತ ನಾಯಕತ್ವದ ಮಧ್ಯಸ್ಥಿಕೆಯ ನಂತರ ರಾಜೀನಾಮೆ ನೀಡುವಂತೆ ಸಿಧು ಮಾಲಿಗೆ ಸಲಹೆ ನೀಡಿದರು ಎಂದು ಮೂಲಗಳು ತಿಳಿಸಿವೆ. ರಾಜೀನಾಮೆಯನ್ನು ಸಿಧುಗೆ ಹಿನ್ನಡೆ ಎಂದು ಪರಿಗಣಿಸಲಾಗಿದೆ. ಈ ಹಿಂದೆ ಅವರ ಸಲಹೆಗಾರರಿಗೆ ವಾಕ್ ಸ್ವಾತಂತ್ರ್ಯ ಇತ್ತು ಎಂದು ಸಿಧುಹೇಳಿದ್ದರು.

ಇದನ್ನೂ ಓದಿ:  ವಿವಾದಾತ್ಮಕ ಹೇಳಿಕೆಗಳಿಂದ ಟೀಕೆಗೀಡಾಗಿದ್ದ ನವಜೋತ್ ಸಿಂಗ್ ಸಲಹೆಗಾರ ಮಲ್ವಿಂದರ್ ಸಿಂಗ್ ರಾಜೀನಾಮೆ

(But if you do not allow me to take decisions I will hit back strongly says Navjot Singh Sidhu)

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?