ಬೆಂಗಳೂರಿನ ನಿವಾಸ ಹುಡುಕಿ ಬಂದ ಅಸ್ಸಾಂ ಪೊಲೀಸರು, ಬಂಧನದ ಭೀತಿಯಲ್ಲಿ ಯುವ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಶ್ರೀನಿವಾಸ್
ಕಾಂಗ್ರೆಸ್ ಪಕ್ಷದ ಯುವ ಘಟಕದ ರಾಷ್ಟ್ರಾಧ್ಯಕ್ಷ ಬಿ.ವಿ. ಶ್ರೀನಿವಾಸ್(BV Srinivas) ಅವರ ನಿವಾಸವನ್ನು ಹುಡುಕಿಕೊಂಡು ಅಸ್ಸಾಂ ಪೊಲೀಸರು ಬೆಂಗಳೂರಿಗೆ ಆಗಮಿಸಿದ್ದಾರೆ. ಇದೀಗ ಶ್ರೀನಿವಾಸ್ಗೆ ಬಂಧನ ಭೀತಿ ಕಾಡುತ್ತಿದೆ.
ಕಾಂಗ್ರೆಸ್ ಪಕ್ಷದ ಯುವ ಘಟಕದ ರಾಷ್ಟ್ರಾಧ್ಯಕ್ಷ ಬಿ.ವಿ. ಶ್ರೀನಿವಾಸ್(BV Srinivas) ಅವರ ನಿವಾಸವನ್ನು ಹುಡುಕಿಕೊಂಡು ಅಸ್ಸಾಂ ಪೊಲೀಸರು ಬೆಂಗಳೂರಿಗೆ ಆಗಮಿಸಿದ್ದಾರೆ. ಇದೀಗ ಶ್ರೀನಿವಾಸ್ಗೆ ಬಂಧನ ಭೀತಿ ಕಾಡುತ್ತಿದೆ. ಶ್ರೀನಿವಾಸ್ ಕಿರುಕುಳ ನೀಡಿದ್ದಾರೆ ಎಂದು ಅಸ್ಸಾಂ ಯುವ ಕಾಂಗ್ರೆಸ್ ಅಧ್ಯಕ್ಷೆ ಅಂಕಿತಾ ಆರೋಪ ಮಾಡಿದ್ದರು. ಈ ಕುರಿತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ(Rahul Gandhi) ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಶ್ರೀನಿವಾಸ್ ಬಿವಿ ಅವರು ಸತತವಾಗಿ ನನಗೆ ಕಿರುಕುಳ ನೀಡಿದ್ದಾರೆ. ಲಿಂಗ ತಾರತಮ್ಯ ಮಾಡಿದ್ದಾರೆ, ಹೆಣ್ಣು ಎಂಬ ಕಾರಣಕ್ಕೆ ನನಗೆ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಅಂಕಿತಾ ದೂರಿದ್ದಾರೆ. ನೀವು ಓಡ್ಕಾ ಕುಡಿಯುತ್ತೀರಾ ಎಂದು ವ್ಯಂಗ್ಯವಾಗಿ ಪ್ರಶ್ನೆಗಳನ್ನು ಕೇಳಿದ್ದಾಗಿ ಹೇಳಿಕೊಂಡಿದ್ದರು.
ಗುವಾಹಟಿಯ ಐಪಿಎಸ್ ಅಧಿಕಾರಿ ಪ್ರತೀಕ್ ಖುದ್ದು ಆಗಮಿಸಿದ್ದಾರೆ. ಅಸ್ಸಾಂನ ಪೊಲೀಸರು ಬಸವೇಶ್ವರನಗರದಲ್ಲಿರುವ ನಿವಾಸಕ್ಕೆ ಬೆಂಗಳೂರು ನಗರ ಪೊಲೀಸರ ಸಹಾಯದಿಂದ ಬಂಧಿಸಲು ಆಗಮಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷರು, ಅಸ್ಸಾಂ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷೆ ಡಾ. ಅಂಗಿತಾ ದತ್ತಾ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ, ಅವರ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹೊರಹಾಕಿದ್ದಾರೆ ಎಂದು ಐಎನ್‌ಸಿಯ ಸಂದೇಶ್ ಟ್ವೀಟ್ ಮಾಡಿದ್ದರು.
ಮತ್ತಷ್ಟು ಓದಿ: ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ವಿರುದ್ಧ ಅಸ್ಸಾಂ ಯುವ ಕಾಂಗ್ರೆಸ್ ಅಧ್ಯಕ್ಷೆ ಅಂಕಿತಾ ದತ್ತಾರಿಂದ ಕಿರುಕುಳ ಆರೋಪ
ಕಾಂಗ್ರೆಸ್ ಹೇಳಿದ್ದೇನು? ಭಾರತೀಯ ಯುವ ಕಾಂಗ್ರೆಸ್ ಅಂಕಿತಾ ಅವರ ಆರೋಪಗಳನ್ನು ಅಸಂಬದ್ಧ ಮತ್ತು ಆಧಾರರಹಿತ ಎಂದು ಹೇಳಿದೆ. ಶಾರದಾ ಚಿಟ್ ಫಂಡ್ ಪ್ರಕರಣದಲ್ಲಿ ಅಂಕಿತಾ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತಿದ್ದು, ಹೀಗಾಗಿ ಬಿಜೆಪಿ ಸೇರುತ್ತಿದ್ದಾರೆ ಎಂದು ಯುವ ಕಾಂಗ್ರೆಸ್ ಹೇಳಿಕೊಂಡಿದೆ. ಬಿಜೆಪಿಯವರ ಒತ್ತಾಯದ ಮೇರೆಗೆ ಅವರು ಇಂತಹ ಆರೋಪ ಮಾಡಿದ್ದಾರೆ.
ಈ ಆರೋಪಗಳು ಸಂಪೂರ್ಣವಾಗಿ ನಿರಾಧಾರ ಎಂದು ಯುವ ಕಾಂಗ್ರೆಸ್‌ನ ಸಂಘಟನಾ ಕಾರ್ಯದರ್ಶಿ ಮತ್ತು ಅಸ್ಸಾಂ ಉಸ್ತುವಾರಿ ವರ್ಧನ್ ಯಾದವ್ ಹೇಳಿದ್ದಾರೆ. ಶೀಘ್ರದಲ್ಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಅವರಿಗೆ ಲೀಗಲ್ ನೋಟಿಸ್ ಕಳುಹಿಸಲಾಗುತ್ತಿದೆ ಎಂದಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ