ಮಧುಮೇಹ ,ಹೃದ್ರೋಗ ಮತ್ತು ಕಿಡ್ನಿ ಕಾಯಿಲೆಗಿರುವ ಔಷಧಿಗಳ ಬೆಲೆ ಕಡಿತಕ್ಕೆ ಸರ್ಕಾರ ಚಿಂತನೆ

ಲಾಭಾಂಶಕ್ಕೆ ಮಿತಿ ವಿಧಿಸುವ ಮೂಲಕ ಸಕ್ಕರೆ ಕಾಯಿಲೆ, ಹೃದಯ ಸಂಬಂಧಿ ಕಾಯಿಲೆ ಮತ್ತು ಗಂಭೀರವಾದ ಕಿಡ್ನಿ ಕಾಯಿಲೆಗಿರುವ ಔಷಧಿಗಳ ಬೆಲೆ ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತಿದೆ.

ಮಧುಮೇಹ ,ಹೃದ್ರೋಗ ಮತ್ತು ಕಿಡ್ನಿ ಕಾಯಿಲೆಗಿರುವ ಔಷಧಿಗಳ ಬೆಲೆ ಕಡಿತಕ್ಕೆ ಸರ್ಕಾರ ಚಿಂತನೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 08, 2022 | 1:02 PM

ಲಾಭದ ಪ್ರಮಾಣಕ್ಕೆ ಮಿತಿ ವಿಧಿಸುವ (trade margins)ಮೂಲಕ ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರ ಕೆಲವು ನಿರ್ಣಾಯಕ ಔಷಧಿಗಳ ಬೆಲೆ ಕಡಿತಕ್ಕೆ ಚಿಂತನೆ ನಡೆಸಿದೆ ಎಂದು ನ್ಯೂಸ್18 ಡಾಟ್ ಕಾಂ ವರದಿ ಮಾಡಿದೆ. ಲಾಭಾಂಶಕ್ಕೆ ಮಿತಿ ವಿಧಿಸುವುದು ಅಥವಾ ಟ್ರೇಡ್ ಮಾರ್ಜಿನ್ ಎಂದರೆ ಉತ್ಪಾದನಾ ವೆಚ್ಚ ಮತ್ತು ರೋಗಿಗಳಿಗೆ ನೀಡುವ ಎಂಆರ್​​ಪಿ(ಗರಿಷ್ಠ ಮಾರಾಟ ಬೆಲೆ) ನಡುವಿನ ಅಂತರವಾಗಿದೆ. ಈ ಮೂಲಕ ಸಕ್ಕರೆ ಕಾಯಿಲೆ, ಹೃದಯ ಸಂಬಂಧಿ ಕಾಯಿಲೆ ಮತ್ತು ಗಂಭೀರವಾದ ಕಿಡ್ನಿ ಕಾಯಿಲೆಗಿರುವ ಔಷಧಿಗಳ ಬೆಲೆ ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಲಾಭಾಂಶದ ಮಿತಿಯನ್ನು ಹಂತ ಹಂತವಾಗಿ ಮಾಡಲಾಗುತ್ತದೆ. ಉದಾಹರಣೆಗೆ ಮೊದಲಿಗೆ ನಾವು ಕ್ಯಾನ್ಸರ್ ರೋಗ ಗುಣಪಡಿಸುವ ಔಷಧಿಗಳಿಗೆ ಲಾಭಾಂಶ ಮಿತಿಯನ್ನು ಕಡಿತ ಮಾಡಿದೆವು. ಅದೇ ರೀತಿ  ಈ ಬಾರಿನ ನಾವು ಮಧುವೇಹ ಅಥವಾ ಕಿಡ್ನಿ ರೋಗಕ್ಕಿರುವ ಔಷಧಿಗಳ ಲಾಭಾಂಶದ ಮಿತಿ ಕಡಿತ ಘೋಷಿಸಲಿದ್ದೇವೆ ಎಂದು ಮೂಲಗಳು ಹೇಳಿವೆ.

ರಾಷ್ಟ್ರೀಯ ಔಷಧ ದರ ಪ್ರಾಧಿಕಾರ (NPPA) ಈ ಬಗ್ಗೆ ಹಲವಾರು ತಿಂಗಳಿನಿಂದ ಕಾರ್ಯಪ್ರವೃತ್ತವಾಗಿದೆ ಎಂದು ಮೂಲಗಳು ಹೇಳಿವೆ. 2018-19ರಲ್ಲಿ ರಾಷ್ಟ್ರೀಯ ಔಷಧ ದರ ಪ್ರಾಧಿಕಾರವು ಆಯ್ಕೆ ಮಾಡಲಾದ 42 ನಾನ್ ಶೆಡ್ಯೂಲ್ಡ್ ಆಂಟಿ ಕ್ಯಾನ್ಸರ್ ಔಷಧಿಗಳ ಟ್ರೇಡ್ ಮಾರ್ಜಿನ್ ಮಿತಿಗೊಳಿಸಿತು. ಇದರಿಂದಾಗಿ ಈ ಔಷಧಿಗಳ 526 ಬ್ರಾಂಡ್  ಗಳ ಎಂಆರ್ ಪಿ ಮೇಲೆ ಶೇ90ರಷ್ಟು ಕಡಿತ ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಲೋಕಸಭೆಯಲ್ಲಿ ಹೇಳಿದ್ದಾರೆ.

ಈ ಬಾರಿ ಎನ್ ಪಿಪಿಎ ಈ ಬಗ್ಗೆ ಅಧ್ಯಯನ ನಡೆಸುತ್ತಿದ್ದು, ಅದರ ಫಲಿತಾಂಶವನ್ನು ಆಧರಿಸಿ ನಿರ್ಧಾರ ತೆಗೆದುಕೊಳ್ಳಲಿದೆ.

Published On - 12:26 pm, Fri, 8 July 22

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್