ಉಪಚುನಾವಣೆಯಲ್ಲಿ ಇಂಡಿಯಾ ಬಣಕ್ಕೆ ಭರ್ಜರಿ ಗೆಲುವು; ಬಿಜೆಪಿಯ ಭಯದ ಜಾಲ ತುಂಡಾಗಿದೆ: ರಾಹುಲ್ ಗಾಂಧಿ
"ಪ್ರತಿಕೂಲ ಸಂದರ್ಭಗಳಲ್ಲಿ ಅವರ ಕಠಿಣ ಪರಿಶ್ರಮ ಮತ್ತು ಪ್ರಯತ್ನಗಳಿಗಾಗಿ ನಾವು ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ ಧನ್ಯವಾದಗಳನ್ನು ಹೇಳುತ್ತೇವೆ. ಬಿಜೆಪಿಯ ದುರಹಂಕಾರ, ದುರಾಡಳಿತ ಮತ್ತು ಋಣಾತ್ಮಕ ರಾಜಕಾರಣವನ್ನು ಜನತೆ ಈಗ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ ಎಂಬುದನ್ನು ಈ ಗೆಲುವು ತೋರಿಸುತ್ತದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ದೆಹಲಿ ಜುಲೈ 13: ವಿಧಾನಸಭಾ ಉಪಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ (INDIA Bloc) ಪಕ್ಷಗಳ ಅದ್ಭುತ ಗೆಲುವು ಶ್ಲಾಘಿಸಿದ ಕಾಂಗ್ರೆಸ್ (Congress) ನಾಯಕರು, ಬಿಜೆಪಿಯ ಸೋಲಿಗೆ ಅದರ “ದುರಹಂಕಾರ, ದುರಾಡಳಿತ ಮತ್ತು ನಕಾರಾತ್ಮಕ ರಾಜಕೀಯವೇ ಕಾರಣವೆಂದು ಹೇಳಿದ್ದಾರೆ. ಉಪಚುನಾವಣೆ ಫಲಿತಾಂಶಗಳು ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜಕೀಯ ವಿಶ್ವಾಸಾರ್ಹತೆ ಕುಸಿಯುತ್ತಿರುವುದಕ್ಕೆ ಬಲವಾದ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಏಳು ರಾಜ್ಯಗಳ 13 ಸ್ಥಾನಗಳಿಗೆ ಈ ವಾರದ ಆರಂಭದಲ್ಲಿ ನಡೆದ ಉಪಚುನಾವಣೆ ನಡೆದಿದ್ದು ಶನಿವಾರ ಫಲಿತಾಂಶ ಪ್ರಕಟವಾದಾಗ ಇಂಡಿಯಾ ಬ್ಲಾಕ್ ಪಕ್ಷಗಳು 10 ವಿಧಾನಸಭಾ ಸ್ಥಾನಗಳನ್ನು ಗೆದ್ದರೆ, ಬಿಜೆಪಿ ಎರಡು ಮತ್ತು ಪಕ್ಷೇತರರು ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದ್ದಾರೆ.
ವಿಧಾನಸಭಾ ಉಪಚುನಾವಣೆಯ ಸಕಾರಾತ್ಮಕ ಫಲಿತಾಂಶಕ್ಕಾಗಿ ನಾವು ಸಾರ್ವಜನಿಕರ ಮುಂದೆ ತಲೆಬಾಗುತ್ತೇವೆ. ಅವರು ಎಲ್ಲೆಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕಿದ್ದಾರೋ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು ಮತ್ತು ಕೃತಜ್ಞತೆಗಳು” ಎಂದು ಖರ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
“ಪ್ರತಿಕೂಲ ಸಂದರ್ಭಗಳಲ್ಲಿ ಅವರ ಕಠಿಣ ಪರಿಶ್ರಮ ಮತ್ತು ಪ್ರಯತ್ನಗಳಿಗಾಗಿ ನಾವು ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ ಧನ್ಯವಾದಗಳನ್ನು ಹೇಳುತ್ತೇವೆ. ಬಿಜೆಪಿಯ ದುರಹಂಕಾರ, ದುರಾಡಳಿತ ಮತ್ತು ಋಣಾತ್ಮಕ ರಾಜಕಾರಣವನ್ನು ಜನತೆ ಈಗ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ ಎಂಬುದನ್ನು ಈ ಗೆಲುವು ತೋರಿಸುತ್ತದೆ ಎಂದು ಖರ್ಗೆ ಹೇಳಿದ್ದಾರೆ.
ರಾಹುಲ್ ಟ್ವೀಟ್
7 राज्यों में हुए उपचुनाव के नतीजों ने स्पष्ट कर दिया है कि भाजपा द्वारा बुना गया ‘भय और भ्रम’ का जाल टूट चुका है।
किसान, नौजवान, मज़दूर, व्यापारी और नौकरीपेशा समेत हर वर्ग तानाशाही का समूल नाश कर न्याय का राज स्थापित करना चाहता है।
अपने जीवन की बेहतरी और संविधान की रक्षा के…
— Rahul Gandhi (@RahulGandhi) July 13, 2024
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಏಳು ರಾಜ್ಯಗಳ ಉಪಚುನಾವಣೆ ಫಲಿತಾಂಶಗಳು ಬಿಜೆಪಿ ಹೆಣೆದಿರುವ ‘ಭಯ ಮತ್ತು ಭ್ರಮೆಯ ಜಾಲವನ್ನು ಮುರಿಯಲಾಗಿದೆ ಎಂಬುದನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.
“ರೈತರು, ಯುವಕರು, ಕಾರ್ಮಿಕರು, ಉದ್ಯಮಿಗಳು ಮತ್ತು ಉದ್ಯೋಗಸ್ಥರು ಸೇರಿದಂತೆ ಪ್ರತಿಯೊಂದು ವರ್ಗವು ಸರ್ವಾಧಿಕಾರವನ್ನು ಸಂಪೂರ್ಣವಾಗಿ ನಾಶಮಾಡಿ ನ್ಯಾಯದ ಆಡಳಿತವನ್ನು ಸ್ಥಾಪಿಸಲು ಬಯಸುತ್ತದೆ. ಸಾರ್ವಜನಿಕರು ಈಗ ತಮ್ಮ ಜೀವನದ ಸುಧಾರಣೆ ಮತ್ತು ಸಂವಿಧಾನದ ರಕ್ಷಣೆಗಾಗಿ ಭಾರತದೊಂದಿಗೆ ಸಂಪೂರ್ಣವಾಗಿ ನಿಂತಿದ್ದಾರೆ ಎಂದು ರಾಹುಲ್ ಗಾಂಧಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ “ನಿರುದ್ಯೋಗ, ಬೆಲೆ ಏರಿಕೆ ಮತ್ತು ದ್ವೇಷವನ್ನು ಹರಡುವ ಕಾರಣದಿಂದಾಗಿ ಬಿಜೆಪಿಯು ಜನರಲ್ಲಿ ಅಸಮಾಧಾನವನ್ನು ಉಂಟುಮಾಡಿದೆ” ಎಂದು ಅವರು ಹೇಳಿದರು.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಾಂಗ್ರೆಸ್ ಮತ್ತು ಇಂಡಿಯಾ ಬ್ಲಾಕ್ ಪಕ್ಷಗಳ ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿದ್ದಾರೆ.
ಇದನ್ನೂ ಓದಿ: ವಿಧಾನಸಭೆ ಉಪಚುನಾವಣೆಯಲ್ಲಿ ಇಂಡಿಯಾ ಬಣ ಮೇಲುಗೈ; ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಸೋಲಲಿದೆ: ಕಾಂಗ್ರೆಸ್
“ಜನರು ವರ್ತಮಾನವನ್ನು ಸುಧಾರಿಸುವ ಮತ್ತು ಉಜ್ವಲ ಭವಿಷ್ಯಕ್ಕಾಗಿ ಸ್ಪಷ್ಟ ನೀಲನಕ್ಷೆಯನ್ನು ಸಿದ್ಧಪಡಿಸುವ ಸಕಾರಾತ್ಮಕ ರಾಜಕೀಯವನ್ನು ಬಯಸುತ್ತಾರೆ. ಯುವ ಭಾರತದ ಅಗತ್ಯಗಳು ಮತ್ತು ಆಕಾಂಕ್ಷೆಗಳಿಗೆ ನಾವು ಬದ್ಧರಾಗಿದ್ದೇವೆ ಎಂದು ಅವರು ಹೇಳಿದರು.
ಪಶ್ಚಿಮ ಬಂಗಾಳದ ನಾಲ್ಕು, ಹಿಮಾಚಲ ಪ್ರದೇಶದಲ್ಲಿ ಮೂರು, ಉತ್ತರಾಖಂಡದ ಎರಡು ಮತ್ತು ಪಂಜಾಬ್, ಮಧ್ಯಪ್ರದೇಶ, ಬಿಹಾರ ಮತ್ತು ತಮಿಳುನಾಡಿನ ತಲಾ ಒಂದು ಸ್ಥಾನಗಳಿಗೆ ಬುಧವಾರ ಉಪಚುನಾವಣೆ ನಡೆದಿತ್ತು
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:59 pm, Sat, 13 July 24