ಅಕ್ಟೋಬರ್ 30ಕ್ಕೆ ಮೂರು ಲೋಕಸಭಾ, 30 ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ: ನವೆಂಬರ್ 2ರಂದು ಮತ ಎಣಿಕೆ

Election Commission: ಮೂರು ಸಂಸತ್ ಕ್ಷೇತ್ರಗಳಲ್ಲಿ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಈ ಉಪಚುನಾವಣೆ ನಡೆಯುತ್ತಿದೆ. ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು, ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶ ಮತ್ತು ವಿವಿಧ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಲ್ಲಿ 30 ಸೀಟುಗಳು ಖಾಲಿ ಇವೆ ಎಂದು ಚುನಾವಣಾ ಆಯೋಗ ಹೇಳಿಕೆಯಲ್ಲಿ ತಿಳಿಸಿದೆ.

ಅಕ್ಟೋಬರ್ 30ಕ್ಕೆ ಮೂರು ಲೋಕಸಭಾ, 30 ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ: ನವೆಂಬರ್ 2ರಂದು ಮತ ಎಣಿಕೆ
ಪ್ರಾತಿನಿಧಿಕ ಚಿತ್ರ

ದೆಹಲಿ:  ಮೂರು ಲೋಕಸಭಾ ಸ್ಥಾನಗಳಿಗೆ ಮತ್ತು ವಿವಿಧ ರಾಜ್ಯಗಳಲ್ಲಿನ 30 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಅಕ್ಟೋಬರ್ 30 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ. ನವೆಂಬರ್ 2 ರಂದು ಮತ ಎಣಿಕೆ ನಡೆಯಲಿದೆ.

ಆಯೋಗವು ಸಾಂಕ್ರಾಮಿಕ, ಪ್ರವಾಹ, ಹಬ್ಬಗಳು, ಕೆಲವು ಪ್ರದೇಶಗಳಲ್ಲಿನ ಶೀತ ಪರಿಸ್ಥಿತಿಗಳ ಬಗ್ಗೆ, ಸಂಬಂಧಿತ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಪ್ರತಿಕ್ರಿಯೆಗಳನ್ನು ಪರಿಶೀಲಿಸಿದೆ ಮತ್ತು ಎಲ್ಲಾ ಸಂಗತಿಗಳು ಮತ್ತು ಸಂದರ್ಭಗಳನ್ನು ಪರಿಗಣಿಸಿದೆ. ಮೂರು ಸಂಸತ್ ಕ್ಷೇತ್ರಗಳಲ್ಲಿ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಈ ಉಪಚುನಾವಣೆ ನಡೆಯುತ್ತಿದೆ. ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು, ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶ ಮತ್ತು ವಿವಿಧ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಲ್ಲಿ 30 ಸೀಟುಗಳು ಖಾಲಿ ಇವೆ ಎಂದು ಚುನಾವಣಾ ಆಯೋಗ ಹೇಳಿಕೆಯಲ್ಲಿ ತಿಳಿಸಿದೆ.


ಅಸ್ಸಾಂನಲ್ಲಿ 5, ಪಶ್ಚಿಮ ಬಂಗಾಳದಲ್ಲಿ 4, ಮೇಘಾಲಯ, ಹಿಮಾಚಲ ಮತ್ತು ಮಧ್ಯಪ್ರದೇಶದಲ್ಲಿ ತಲಾ 3; ರಾಜಸ್ಥಾನ, ಕರ್ನಾಟಕ ಮತ್ತು ಬಿಹಾರದಲ್ಲಿ ತಲಾ 2 ಮತ್ತು ಆಂಧ್ರಪ್ರದೇಶ, ತೆಲಂಗಾಣ, ಮಿಜೋರಾಂ ನಾಗಾಲ್ಯಾಂಡ್, ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ತಲಾ 1- ಹೀಗೆ ಒಟ್ಟು 30 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ.

ಇದನ್ನೂ ಓದಿ: Zojila Tunnel: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್​ ಗಡ್ಕರಿಯಿಂದ ಇಂದು ಝೊಜಿಲಾ ಸುರಂಗ ಮಾರ್ಗ ಯೋಜನೆಯ ಪರಿಶೀಲನೆ

(Bypolls to three Lok Sabha seats and 30 assembly constituencies will be held on October 30 announces Election Commission)

Click on your DTH Provider to Add TV9 Kannada