AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಘಾಲಯದ ನೂತನ ರಾಜ್ಯಪಾಲರಾಗಿ ಮೈಸೂರಿನ ವಿಜಯ್​​ ಶಂಕರ್ ನೇಮಕ

ಮೇಘಾಲಯದ ನೂತನ ರಾಜ್ಯಪಾಲರಾಗಿ ಮೈಸೂರಿನ ಮಾಜಿ ಸಂಸದ ಸಿಎಚ್ ವಿಜಯ್ ಶಂಕರ್ ನೇಮಕಗೊಂಡಿದ್ದಾರೆ. ಮೇಘಾಲಯ ಸೇರಿದಂತೆ ಒಟ್ಟು 10 ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಕಮಾಡಲಾಗಿದೆ.

ಮೇಘಾಲಯದ ನೂತನ ರಾಜ್ಯಪಾಲರಾಗಿ ಮೈಸೂರಿನ ವಿಜಯ್​​ ಶಂಕರ್ ನೇಮಕ
ವಿಜಯ್​ಶಂಕರ್
Follow us
ನಯನಾ ರಾಜೀವ್
|

Updated on:Jul 28, 2024 | 9:36 AM

ಮೇಘಾಲಯದ ನೂತನ ರಾಜ್ಯಪಾಲರಾಗಿ ಮೈಸೂರಿನ ಸಿ.ಎಚ್​ ವಿಜಯ್ ಶಂಕರ್​ ನೇಮಕಗೊಂಡಿದ್ದಾರೆ. ಅವರು ಹುಣಸೂರು ಕ್ಷೇತ್ರದ ಶಾಸಕ ಹಾಗೂ ಮೈಸೂರಿನ ಸಂಸದರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸಿಎಚ್​ ವಿಜಯ್​ ಶಂಕರ್​ ಅವರು ರಾಣೆ ಬೆನ್ನೂರು ಮೂಲದವರಾಗಿದ್ದು, 1994ರಿಂದ 98ರವರೆಗೆ ಮೊದಲ ಬಾರಿಗೆ ಹುಣಸೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿದ್ದರು. ಬಳಿಕ 1998 ಹಾಗೂ 2004ರಲ್ಲಿ ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು. 2010ರಿಂದ 16ರವರೆಗೆ ವಿಧಾನ ಪರಿಷತ್ ಸದಸ್ಯರಾಗಿದ್ದರು, 2010ರಲ್ಲಿ ಕರ್ನಾಟಕ ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು.

ತೆಲಂಗಾಣ, ಜಾರ್ಖಂಡ್, ಮೇಘಾಲಯ ಸೇರಿದಂತೆ ಒಟ್ಟು 10 ರಾಜ್ಯಗಳಿಗೆ ರಾಜ್ಯಪಾಲರ ನೇಮಕವಾಗಿದೆ. ತೆಲಂಗಾಣ ಹಾಗೂ ಜಾರ್ಖಂಡ್​ನ ಹಾಲಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಮಹಾರಾಷ್ಟ್ರಕ್ಕೆ ನೇಮಿಸಲಾಗಿದೆ. ಹರಿಬಾವ್ ಕಿಶನ್ ಬಾವ್ ಬಾಗಡೆ ಅವರನ್ನು ರಾಜಸ್ಥಾನಕ್ಕೆ , ಸಂತೋಷ್ ಕುಮಾರ್ ಗಂಗ್ವಾರ್ ಅವರನ್ನು ಜಾರ್ಖಂಡ್​ಗೆ ನೇಮಿಸಲಾಗಿದೆ. ರಾಮನ್​ ಡೇಕಾ ಅವರನ್ನು ಛತ್ತೀಸ್​ಗಢ ರಾಜ್ಯಪಾಲರಾಗಿ, ಜಿಷ್ಣು ದೇವ್ ವರ್ಮಾ ಅವರನ್ನು ತೆಲಂಗಾಣದ ರಾಜ್ಯಪಾಲರಾಗಿ, ಓಂ ಪ್ರಕಾಶ್ ಮಾಥುರ್ ಅವರನ್ನು ಸಿಕ್ಕಿಂ ರಾಜ್ಯಪಾಕರಾಗಿ ನೇಮಿಸಲಾಗಿದೆ.

ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕಗೊಂಡಿರುವ ಕೈಲಾಸನಾಥನ್ ಅವರು ಗುಜರಾತ್ ಕೇಡರ್‌ನ ಮಾಜಿ ಐಎಎಸ್ ಅಧಿಕಾರಿಯಾಗಿದ್ದಾರೆ. ಕೈಲಾಸನಾಥನ್ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಪ್ರಧಾನಿ ಮೋದಿಯವರ ಮುಖ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅವರು ಈ ವರ್ಷ ಜೂನ್ 30 ರಂದು ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದರು. 2013ರಲ್ಲಿ ನಿವೃತ್ತಿಯಾಗಿದ್ದರೂ 11 ಸೇವಾ ವಿಸ್ತರಣೆಗಳನ್ನು ನೀಡಲಾಗಿತ್ತು.

ಮತ್ತಷ್ಟು ಓದಿ: ತೆಲಂಗಾಣದ ನೂತನ ರಾಜ್ಯಪಾಲರಾಗಿ ಸಿಪಿ ರಾಧಾಕೃಷ್ಣನ್ ನೇಮಕ

ರಾಷ್ಟ್ರಪತಿ ಭವನದ ಐಕಾನಿಕ್ ದರ್ಬಾರ್ ಹಾಲ್ ಮತ್ತು ಅಶೋಕ ಹಾಲ್ ಅನ್ನು ಗಣತಂತ್ರ ಮಂಟಪ ಮತ್ತು ಅಶೋಕ ಮಂಟಪ ಎಂದು ಮರುನಾಮಕರಣ ಮಾಡಲಾಯಿತು. ಈ ಸಭಾಂಗಣಗಳು ವಿವಿಧ ಔಪಚಾರಿಕ ಕಾರ್ಯಗಳಿಗೆ ಸ್ಥಳಗಳಾಗಿವೆ.

ಅಸ್ಸಾಂನ ಹಾಲಿ ರಾಜ್ಯಪಾಲರಾದ ಗುಲಾಬ್ ಚಂದ್ ಕಟಾರಿಯಾ ಅವರನ್ನು ಪಂಜಾಬ್ ರಾಜ್ಯಪಾಲರಾಗಿ, ಜೊತೆಗೆ ಚಂಡೀಗಢ ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿ ಯಾಗಿ ನೇಮಿಸಲಾಗಿದೆ. ಅಸ್ಸಾಂಗೆ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ನೇಮಿಸಿದ್ದು, ಇವರಿಗೆ ಮಣಿಪುರದ ರಾಜ್ಯಪಾಲರಾಗಿಯೂ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ. ಜೊತೆಗೆ ಕೆ.ಕೈಲಾಸನಾಥನ್ ಅವರನ್ನು ಪುದುಚೇರಿಯ ಉಪರಾಜ್ಯಪಾಲರಾಗಿನೇಮಕ ಮಾಡಿ ರಾಷ್ಟ್ರಪತಿ ಭವನ ಆದೇಶ ಹೊರಡಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:18 am, Sun, 28 July 24