AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರ ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿ: ಅಮಿತ್ ಶಾ

CAA implementation: ಕೇಂದ್ರ ಗೃಹ ಸಚಿವ ಅಮಿತ್​​ ಶಾ ಅವರು ಇಂದು ಇಟಿ ನೌ ಗ್ಲೋಬಲ್ ಬಿಸಿನೆಸ್ ಶೃಂಗಸಭೆ 2024 ಕಾರ್ಯಕ್ರಮದಲ್ಲಿ ಪತ್ರಕರ್ತರು ಕೇಳಿದ ಅನೇಕ ಪ್ರಶ್ನೆಗಳಿಗೆ ಶಾ ಉತ್ತರಿಸಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 370 ಹಾಗೂ ಎನ್​​ಡಿಎ 400ಕ್ಕೂ ಹೆಚ್ಚು ಸ್ಥಾನವನ್ನು ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಾಗೂ ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿ ತರಲಾಗುವುದು ಎಂದು ಹೇಳಿದ್ದಾರೆ.

2024ರ ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿ: ಅಮಿತ್ ಶಾ
ಅಮಿತ್​​ ಶಾ
ಅಕ್ಷಯ್​ ಪಲ್ಲಮಜಲು​​
|

Updated on: Feb 10, 2024 | 1:45 PM

Share

ದೆಹಲಿ, ಫೆ.10: ಮುಂದಿನ ಲೋಕಸಭೆ ಚುನಾವಣೆಯಲ್ಲಿ (Lok Sabha elections) ಭಾರತೀಯ ಜನತಾ ಪಾರ್ಟಿ 370 ಹಾಗೂ ಎನ್​​ಡಿಎ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್​​ ಶಾ ( Amit Shah) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರು ಇಂದು (ಫೆ.10) ಇಟಿ ನೌ ಗ್ಲೋಬಲ್ ಬಿಸಿನೆಸ್ ಶೃಂಗಸಭೆ 2024 ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು. ಈ ಬಾರಿ ಎನ್‌ಡಿಎ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ ಮೂರನೇ ಅವಧಿಗೆ ಸರ್ಕಾರ ರಚಿಸಲಿದೆ ಎಂದು ಹೇಳಿದರು. ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ಯಾವುದೇ ಸಸ್ಪೆನ್ಸ್ ಇಲ್ಲ. ಹಾಗೂ ಈ ಬಾರಿಯು ಕಾಂಗ್ರೆಸ್​​​ ಹಾಗೂ ಅದನ್ನು ಬೆಂಬಲಿಸುವ ಪಕ್ಷಗಳು ವಿರೋಧ ಪಕ್ಷ ಸ್ಥಾನದಲ್ಲೇ ಇರಲಿದೆ ಎಂದು ಹೇಳಿದರು.

ನಮ್ಮ ಸರ್ಕಾರ ಜಮ್ಮು-ಕಾಶ್ಮೀರದಲ್ಲಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದೆ. ಆದ್ದರಿಂದ ದೇಶದ ಜನರು ಬಿಜೆಪಿಗೆ 370 ಸ್ಥಾನಗಳನ್ನು ಮತ್ತು ಎನ್‌ಡಿಎಗೆ 400ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಿ ಆಶೀರ್ವದಿಸುತ್ತಾರೆ ಎಂದರು. ಇನ್ನು ಜಯಂತ್ ಚೌಧರಿ ನೇತೃತ್ವದ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ), ಶಿರೋಮಣಿ ಅಕಾಲಿದಳ (ಎಸ್‌ಎಡಿ) ಮತ್ತು ಇತರ ಕೆಲವು ಪ್ರಾದೇಶಿಕ ಪಕ್ಷಗಳು ರಾಷ್ಟ್ರೀಯ ಎನ್‌ಡಿಎ ಒಕ್ಕೂಟವನ್ನು ಸೇರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾ, ಭಾರತೀಯ ಜನತಾ ಪಕ್ಷ (ಬಿಜೆಪಿ) ಕುಟುಂಬ ಯೋಜನೆಯಲ್ಲಿ ನಂಬಿಕೆ ಇದೆ ಆದರೆ ರಾಜಕೀಯದಲ್ಲಿ ಅಲ್ಲ. ಈ ಬಗ್ಗೆ ಮಾತುಕತೆ ನಡೆಯುತ್ತಿದೆ, ಯಾವುದು ಅಂತಿವಾಗಿಲ್ಲ, ಹಾಗೂ 2024ರ ಚುನಾವಣೆಯು ಎನ್‌ಡಿಎ ಮತ್ತು ಇಂಡಿಯಾ ಒಕ್ಕೂಟದ ನಡುವಿನ ಚುನಾವಣೆಯಾಗಿರುವುದಿಲ್ಲ, ಇದು ಅಭಿವೃದ್ಧಿ ಮತ್ತು ಜನರಿಗೆ ನೀಡಿರುವ ಭರವಸೆಯ ಚುನಾವಣೆಯಾಗಲಿದೆ ಎಂದು ಹೇಳಿದ್ದಾರೆ.

ದೇಶ ವಿಭಜನೆಗೆ ಅವರ ಪಕ್ಷವೇ ಕಾರಣ

ಅಮಿತ್​​​ ಶಾ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಬಗ್ಗೆಯು ಈ ಸಮಯದಲ್ಲಿ ಮಾತನಾಡಿದ್ದಾರೆ. 1947ರಲ್ಲಿ ದೇಶ ವಿಭಜನೆಗೆ ಅವರ ಪಕ್ಷವೇ ಕಾರಣವಾಗಿರುವುದರಿಂದ ನೆಹರು-ಗಾಂಧಿ ವಂಶಸ್ಥರಿಗೆ ಅಂತಹ ಮೆರವಣಿಗೆಯನ್ನು ಮುಂದುವರಿಸಲು ಯಾವುದೇ ಹಕ್ಕಿಲ್ಲ ಎಂದರು. ಇನ್ನು ಸಂಸತ್ತಿನಲ್ಲಿ ಮಂಡಿಸಿದ ಶ್ವೇತಪತ್ರ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು 2014ರಲ್ಲಿ ಅಧಿಕಾರವನ್ನು ಕಳೆದುಕೊಂಡಾಗ ಕಾಂಗ್ರೆಸ್ ನೇತೃತ್ವದ ಯುಪಿಎ ಒಕ್ಕೂಟ ದೇಶದ ಮುಂದೆ ಯಾವ ಗೊಂದಲವನ್ನು ಬಿಟ್ಟಿದೆ ಎಂಬುದನ್ನು ತಿಳಿದುಕೊಳ್ಳುವ ಸಂಪೂರ್ಣ ಹಕ್ಕು ದೇಶಕ್ಕೆ ಇದೆ. ಆ ಸಮಯದಲ್ಲಿ (2014) ಆರ್ಥಿಕತೆಯು ಕೆಟ್ಟ ಸ್ಥಿತಿಯಲ್ಲಿತ್ತು. ಎಲ್ಲೆಡೆ ಹಗರಣಗಳು ನಡೆಯುತ್ತಿದ್ದವು, ವಿದೇಶಿ ಹೂಡಿಕೆ ಬರುತ್ತಿರಲಿಲ್ಲ, ಆ ಸಮಯದಲ್ಲಿ ನಾವು ಶ್ವೇತಪತ್ರವನ್ನು ಹೊರತಂದಿದ್ದರೆ ಅದು ಜಗತ್ತಿಗೆ ತಪ್ಪು ಸಂದೇಶವನ್ನು ನೀಡುತ್ತಿತ್ತು.

ಇದನ್ನೂ ಓದಿ: ಕೇಂದ್ರ ಸರ್ಕಾರ ನನ್ನ ಹೃದಯ ಗೆದ್ದಿದೆ: ಮೋದಿಯನ್ನು ಹೊಗಳಿದ ಜಯಂತ್ ಚೌಧರಿ

ನಮ್ಮ ಸರ್ಕಾರ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಿದೆ: ಶಾ

ಈಗ ಭಾರತ ಆರ್ಥಿಕವಾಗಿ ಮುಂದುವರಿಯುತ್ತಿದೆ. 10 ವರ್ಷಗಳ ನಂತರ ನಮ್ಮ ಸರ್ಕಾರ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಿದೆ, ವಿದೇಶಿ ಹೂಡಿಕೆಯನ್ನು ತಂದಿದೆ ಮತ್ತು ಯಾವುದೇ ಭ್ರಷ್ಟಾಚಾರವಿಲ್ಲ. ಆ ಕಾರಣಕ್ಕೆ ಈಗ ನಾವು ಶ್ವೇತಪತ್ರ ಪ್ರಕಟಿಸಿದ್ದೇವೆ ಎಂದು ಹೇಳಿದರು. ಈ ಸಭೆಯಲ್ಲಿ ರಾಮಮಂದಿರದ ಬಗ್ಗೆಯು ಶಾ ಪ್ರಸ್ತಾಪಿಸಿದ್ದಾರೆ. ರಾಮನ ಜನ್ಮ ಸ್ಥಳದಲ್ಲಿಯೇ ಮಂದಿರ ನಿರ್ಮಾಣವಾಗಬೇಕು ಎಂಬುದು ಜನರ 500 ವರ್ಷಗಳಿಂದ ಬೇಡಿಕೆ ಆಗಿತ್ತು. ಆದರೆ ಆಗಾ ತುಷ್ಟೀಕರಣ ರಾಜಕಾರಣ ಮತ್ತು ಕಾನೂನು ಸುವ್ಯವಸ್ಥೆಯನ್ನು ಮುಂದಿಟ್ಟುಕೊಂಡು ರಾಮಮಂದಿರ ನಿರ್ಮಾಣಕ್ಕೆ ಅವಕಾಶ ಸಿಕ್ಕಿಲ್ಲ, ಆದರೆ ಇದೀಗ ನಮ್ಮ ಸರ್ಕಾರ ಅದನ್ನು ಪೂರ್ಣಗೊಳಿಸಿದೆ ಎಂದು ಹೇಳಿದರು.

ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಭಾರತದಾದ್ಯಂತ ಜಾರಿಗೆ

ಪ್ರಮುಖವಾಗಿ ಶಾ ಈ ಸಭೆಯಲ್ಲಿ ಸಿಎಎ ಬಗ್ಗೆ ಮಾತನಾಡಿದ್ದಾರೆ. ಪೌರತ್ವ (ತಿದ್ದುಪಡಿ) ಕಾಯಿದೆ (ಸಿಎಎ) 2019ರಲ್ಲಿ ಜಾರಿಗೊಳಿಸಲಾದ ಕಾನೂನು, ಈ ಕಾನೂನಿಗೆ ಸಂಬಂಧಿಸಿದಂತೆ ನಿಯಮಗಳನ್ನು ಹೊರಡಿಸಲಾಗುವುದು, ಲೋಕಸಭೆ ಚುನಾವಣೆಗೂ ಮುನ್ನ ಭಾರತದಾದ್ಯಂತ ಜಾರಿಗೆ ತರಲಾಗುವುದು. ಈ ಕಾನೂನಿನ ಬಗ್ಗೆ ನಮ್ಮ ಮುಸ್ಲಿಂ ಸಹೋದರರಿಗೆ ತಪ್ಪು ಮಾಹಿತಿ ನೀಡಲಾಗುತ್ತಿದೆ. ಮತ್ತು ಪ್ರಚೋದಿಸಲಾಗುತ್ತಿದೆ. ಸಿಎಎ ಕೇವಲ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಕಿರುಕುಳವನ್ನು ಎದುರಿಸಿ ಭಾರತಕ್ಕೆ ಬಂದವರಿಗೆ ಪೌರತ್ವವನ್ನು ನೀಡುವ ಉದ್ದೇಶದಿಂದ ಜಾರಿಗೆ ತರಲಾಗುತ್ತಿದೆ. ಈ ಕಾನೂನಿನ ಮೂಲಕ ಯಾರೊಬ್ಬರ ಪೌರತ್ವವನ್ನು ಕಸಿದುಕೊಳ್ಳುತ್ತಿಲ್ಲ ಎಂದು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!