ಪೌರತ್ವ ತಿದ್ದುಪಡಿ ಕಾಯ್ದೆ: ಪೊಲೀಸರ ವಶದಲ್ಲಿದ್ದ ಎಲ್ಲಾ ವಿದ್ಯಾರ್ಥಿಗಳು ರಿಲೀಸ್

|

Updated on: Dec 16, 2019 | 7:32 AM

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಧರಣಿ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಕಾವು ಹೆಚ್ಚಾಗಿದ್ದು, ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನ ವಶಕ್ಕೆ ಪಡೆಯಲಾಗಿತ್ತು. ಈಗ ಎಲ್ಲಾ ವಿದ್ಯಾರ್ಥಿಗಳನ್ನ ರಿಲೀಸ್ ಮಾಡಲಾಗಿದೆ. ‘ಜೆಎನ್​ಯು’ ವಿದ್ಯಾರ್ಥಿಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆ ವೇಳೆ ಬಸ್, ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ್ದರು. ಕಲ್ಲು ತೂರಾಟದಲ್ಲಿ ಪೊಲೀಸರು, ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದವು. ಈ ಹಿನ್ನೆಲೆ ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಈಗ ವಿದ್ಯಾರ್ಥಿಗಳನ್ನು ರಿಲೀಸ್ ಮಾಡಲಾಗಿದೆ. ಇನ್ನು ಆಗ್ನೇಯ ದೆಹಲಿಯಲ್ಲಿ ಸೂಕ್ಷ್ಮ […]

ಪೌರತ್ವ ತಿದ್ದುಪಡಿ ಕಾಯ್ದೆ: ಪೊಲೀಸರ ವಶದಲ್ಲಿದ್ದ ಎಲ್ಲಾ ವಿದ್ಯಾರ್ಥಿಗಳು ರಿಲೀಸ್
Follow us on

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಧರಣಿ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಕಾವು ಹೆಚ್ಚಾಗಿದ್ದು, ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನ ವಶಕ್ಕೆ ಪಡೆಯಲಾಗಿತ್ತು. ಈಗ ಎಲ್ಲಾ ವಿದ್ಯಾರ್ಥಿಗಳನ್ನ ರಿಲೀಸ್ ಮಾಡಲಾಗಿದೆ.

‘ಜೆಎನ್​ಯು’ ವಿದ್ಯಾರ್ಥಿಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆ ವೇಳೆ ಬಸ್, ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ್ದರು. ಕಲ್ಲು ತೂರಾಟದಲ್ಲಿ ಪೊಲೀಸರು, ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದವು. ಈ ಹಿನ್ನೆಲೆ ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಈಗ ವಿದ್ಯಾರ್ಥಿಗಳನ್ನು ರಿಲೀಸ್ ಮಾಡಲಾಗಿದೆ. ಇನ್ನು ಆಗ್ನೇಯ ದೆಹಲಿಯಲ್ಲಿ ಸೂಕ್ಷ್ಮ ಪರಿಸ್ಥಿತಿ ನಿರ್ಮಾಣ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.