PLI scheme: ಮೋದಿ ಸರ್ಕಾರದಿಂದ ಐಟಿ ಕ್ಷೇತ್ರಕ್ಕೆ ಪಿಎಲ್​ಐ ಯೋಜನೆಯಡಿ 17,000 ಕೋಟಿ ರೂ; ಅಶ್ವಿನಿ ವೈಷ್ಣವ್

ಐಟಿ ಸರ್ವರ್ ಹಾಗೂ ಹಾರ್ಡ್​ವೇರ್ ಉತ್ಪಾದನೆಗೆ ‘ಉತ್ಪಾದನೆ ಆಧಾರಿತ ಭತ್ಯೆ ಯೋಜನೆ’ಯ (PLI scheme) ಎರಡನೇ ಹಂತದ ಅನುದಾನವನ್ನು ಘೋಷಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದ ನಿರ್ಧಾರವನ್ನು ಕೈಗಾರಿಕೋದ್ಯಮಿಗಳು ಶ್ಲಾಘಿಸಿದ್ದಾರೆ ಎಂದು ಕೇಂದ್ರ ದೂರಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ತಿಳಿಸಿದ್ದಾರೆ.

PLI scheme: ಮೋದಿ ಸರ್ಕಾರದಿಂದ ಐಟಿ ಕ್ಷೇತ್ರಕ್ಕೆ ಪಿಎಲ್​ಐ ಯೋಜನೆಯಡಿ 17,000 ಕೋಟಿ ರೂ; ಅಶ್ವಿನಿ ವೈಷ್ಣವ್
ಅಶ್ವಿನಿ ವೈಷ್ಣವ್ (ಸಂಗ್ರಹ ಚಿತ್ರ)
Follow us
Ganapathi Sharma
|

Updated on:May 17, 2023 | 10:17 PM

ನವದೆಹಲಿ: ಐಟಿ ಸರ್ವರ್ ಹಾಗೂ ಹಾರ್ಡ್​ವೇರ್ ಉತ್ಪಾದನೆಗೆ ‘ಉತ್ಪಾದನೆ ಆಧಾರಿತ ಭತ್ಯೆ ಯೋಜನೆ’ಯ (PLI scheme) ಎರಡನೇ ಹಂತದ ಅನುದಾನವನ್ನು ಘೋಷಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದ ನಿರ್ಧಾರವನ್ನು ಕೈಗಾರಿಕೋದ್ಯಮಿಗಳು ಶ್ಲಾಘಿಸಿದ್ದಾರೆ ಎಂದು ಕೇಂದ್ರ ದೂರಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ತಿಳಿಸಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ‘ಜೋಶ್ ಹೆಚ್ಚಿದೆ! ಐಟಿ ಸರ್ವರ್ ಹಾಗೂ ಹಾರ್ಡ್​ವೇರ್ ಉತ್ಪಾದನೆಗೂ ಪಿಎಲ್​ಐ ಸ್ಕೀಮ್ ಘೋಷಿಸುವ ಸಚಿವ ಸಂಪುಟ ನಿರ್ಧಾರಕ್ಕೆ ಉದ್ಯಮದ ಚಾಂಪಿಯನ್‌ಗಳು ಪ್ರಧಾನಿಯನ್ನು ಶ್ಲಾಘಿಸಿದರು’ ಎಂದು ಉಲ್ಲೇಖಿಸಿದ್ದಾರೆ.

ಕೇಂದ್ರ ಸಂಪುಟ ಸಭೆಯ ನಂತರ ಸಚಿವ ಅಶ್ವಿನಿ ವೈಷ್ಣವ್ ಅವರು, ಐಟಿ ಹಾರ್ಡ್‌ವೇರ್‌ಗಾಗಿ 17,000 ಕೋಟಿ ರೂಪಾಯಿ ಮೌಲ್ಯದ ಪಿಎಲ್‌ಐ ಯೋಜನೆಯ ಎರಡನೇ ಹಂತಕ್ಕೆ ಸರ್ಕಾರ ಅನುಮೋದನೆ ನೀಡಿದೆ ಎಂದು ಮಾಹಿತಿ ನೀಡಿದರು. ಸರ್ಕಾರವು ದೇಶದ ವಿವಿಧ ವಲಯಗಳಿಗೆ ‘ಉತ್ಪಾದನೆ ಆಧಾರಿತ ಭತ್ಯೆ ಯೋಜನೆ’ಯನ್ನು ಪ್ರಾರಂಭಿಸಿದೆ. ಇದರಡಿ, ಭಾರತದಲ್ಲಿನ ಕಂಪನಿಗಳು ತಮ್ಮ ಉತ್ಪಾದನೆಯ ಆಧಾರದ ಮೇಲೆ ಸರ್ಕಾರದಿಂದ ಪ್ರಯೋಜನಗಳನ್ನು ಪಡೆಯುತ್ತವೆ ಎಂದು ಅವರು ತಿಳಿಸಿದ್ದಾರೆ.

2 ಲಕ್ಷ ಉದ್ಯೋಗ ಸೃಷ್ಟಿ

ಐಟಿ ಹಾರ್ಡ್‌ವೇರ್‌ಗಾಗಿ ಪಿಎಲ್‌ಐ ಯೋಜನೆಯಡಿ ಸರ್ಕಾರವು 17,000 ಕೋಟಿ ರೂಪಾಯಿಗಳನ್ನು ಬಜೆಟ್‌ನಲ್ಲಿ ಒದಗಿಸಲಿದೆ ಎಂದು ವೈಷ್ಣವ್ ಮಾಹಿತಿ ನೀಡಿದರು. ಈ ಮೊತ್ತವನ್ನು ಮುಂದಿನ 6 ವರ್ಷಗಳಲ್ಲಿ ಖರ್ಚು ಮಾಡಲಾಗುವುದು. ಇದರಿಂದ ದೇಶದಲ್ಲಿ ಸುಮಾರು 75,000 ಮಂದಿಗೆ ನೇರ ಉದ್ಯೋಗ ಹಾಗೂ ಸುಮಾರು 2 ಲಕ್ಷ ಮಂದಿಗೆ ಪರೋಕ್ಷ ಉದ್ಯೋಗ ದೊರೆಯಲಿದೆ. ಇದರೊಂದಿಗೆ, ಸರ್ಕಾರದ ಈ ಯೋಜನೆಯ ಲಾಭವು ಲ್ಯಾಪ್‌ಟಾಪ್‌ಗಳು, ಟ್ಯಾಬ್ಲೆಟ್‌ಗಳು, ಪರ್ಸನಲ್ ಕಂಪ್ಯೂಟರ್‌ಗಳು, ಸರ್ವರ್‌ಗಳು ಮತ್ತು ಇತರ ಸಣ್ಣ ಐಟಿ ಹಾರ್ಡ್‌ವೇರ್ ಸಾಧನಗಳನ್ನು ತಯಾರಿಸುವ ಕಂಪನಿಗಳಿಗೆ ದೊರೆಯಲಿದೆ ಎಂದು ಅವರು ಹೇಳಿದರು.

ದೇಶದಲ್ಲಿ ಪ್ರತಿ ವರ್ಷ ಲ್ಯಾಪ್‌ಟಾಪ್, ಟ್ಯಾಬ್ಲೆಟ್‌ಗಳು ಮತ್ತು ಪರ್ಸನಲ್ ಕಂಪ್ಯೂಟರ್‌ಗಳ ಉತ್ಪಾದನೆ ಹೆಚ್ಚಾಗಲಿದ್ದು, ಈ ಮೂಲಕ 3.35 ಲಕ್ಷ ಕೋಟಿ ರೂಪಾಯಿ ಮೌಲ್ಯದ ಉತ್ಪನ್ನಗಳನ್ನು ಸಿದ್ಧಪಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು. ಇದೇ ವೇಳೆಗೆ ಒಟ್ಟು 2,430 ಕೋಟಿ ರೂ.ಗಳ ಹೂಡಿಕೆಯೂ ಬರಲಿದೆ ಎಂದರು.

ಇದನ್ನೂ ಓದಿ: ಭಾರತದಲ್ಲಿ 1 ಶತಕೋಟಿ ಡಾಲರ್ ಹೂಡಿಕೆ ಘೋಷಿಸಿದ ಸಿಸ್ಕೋ; ಪ್ರಧಾನಿ ಮೋದಿ ಬಗ್ಗೆ ಚಕ್ ರಾಬಿನ್ಸ್ ಮೆಚ್ಚುಗೆ

ಭಾರತವನ್ನು ಉತ್ಪಾದನಾ ಕೇಂದ್ರವನ್ನಾಗಿ ಮಾಡಲು ಮತ್ತು ಈ ವಿಷಯದಲ್ಲಿ ಚೀನಾಕ್ಕೆ ಕಠಿಣ ಸ್ಪರ್ಧೆಯನ್ನು ನೀಡಲು ಕೇಂದ್ರ ಸರ್ಕಾರ ಬಹಳ ಸಮಯದಿಂದ ಪ್ರಯತ್ನಿಸುತ್ತಿದೆ. ಭಾರತದಲ್ಲಿ ಆ್ಯಪಲ್ ಇಂಕ್​​​ನ ದೊಡ್ಡ ಪ್ರಮಾಣದ ಉತ್ಪನ್ನಗಳ ತಯಾರಿಕೆಯೊಂದಿಗೆ ಇದು ಪ್ರಾರಂಭವಾಗಿದೆ. ಈಗ ಸರ್ಕಾರವು ದೇಶದಲ್ಲಿ ಅಗ್ಗದ ಲ್ಯಾಪ್‌ಟಾಪ್‌ಗಳು, ಟ್ಯಾಬ್ಲೆಟ್‌ಗಳು ಮತ್ತು ಇತರ ಐಟಿ ಹಾರ್ಡ್‌ವೇರ್‌ಗಳನ್ನು ತಯಾರಿಸಲು ಪ್ರೋತ್ಸಾಹಿಸುತ್ತಿದೆ. ಇದರಿಂದ ದೇಶದ 2 ಲಕ್ಷ ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆಯೂ ಇದೆ.

ಸರ್ಕಾರವು 2020 ರ ಏಪ್ರಿಲ್​​ನಲ್ಲಿ ಪಿಎಲ್​ಐ ಯೋಜನೆಯನ್ನು ಪ್ರಾರಂಭಿಸಿತು. ಐಟಿ ಹಾರ್ಡ್‌ವೇರ್‌ಗಾಗಿ ಪಿಎಲ್​ಐ ಯೋಜನೆಯನ್ನು 2021 ರ ಫೆಬ್ರವರಿಯಲ್ಲಿ ಪ್ರಾರಂಭಿಸಲಾಗಿದ್ದು, 7,350 ಕೋಟಿ ರೂ. ಅನುದಾನ ಮೀಸಲಿಡಲಾಗಿತ್ತು. ಇದನ್ನು ಹೆಚ್ಚಿಸುವಂತೆ ಕಂಪನಿಗಳು ಮನವಿ ಮಾಡಿದ್ದವು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:16 pm, Wed, 17 May 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ