ರಾಷ್ಟ್ರೀಯ ನೇಮಕಾತಿ ಏಜೆನ್ಸಿ ಸ್ಥಾಪನೆಗೆ ಸಂಪುಟ ಸಮ್ಮತಿ
ದೆಹಲಿ: ರೇಲ್ವೇ ಇಲಾಖೆ, ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳು ಹಾಗೂ SSC ಅಡಿಯಲ್ಲಿ ನಡೆಯುವ ನೇಮಕಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (CET) ನಡೆಸಲು ರಾಷ್ಟ್ರೀಯ ನೇಮಕಾತಿ ಸಂಸ್ಥೆಯೊಂದನ್ನು ಸ್ಥಾಪಿಸಲು ಕೇಂದ್ರ ಸಂಪುಟ ಅಸ್ತು ಎಂದಿದೆ. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸರ್ಕಾರ ಕೈಗೊಂಡಿರುವ ಈ ನಿರ್ಧಾರ ಯುವಕರಿಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ. ಪರೀಕ್ಷೆಯಲ್ಲಿ ಅಭ್ಯರ್ಥಿ ಗಳಿಸುವ ಫಲಿತಾಂಶವು ಮೂರು ವರ್ಷಗಳ ಕಾಲ ಮಾನ್ಯವಿರಲಿದೆ. ಜೊತೆಗೆ, ಈ ಅವಧಿಯಲ್ಲಿ ಅಭ್ಯರ್ಥಿಗಳು ಮತ್ತೊಮ್ಮೆ ಪರೀಕ್ಷೆ […]
ದೆಹಲಿ: ರೇಲ್ವೇ ಇಲಾಖೆ, ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳು ಹಾಗೂ SSC ಅಡಿಯಲ್ಲಿ ನಡೆಯುವ ನೇಮಕಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (CET) ನಡೆಸಲು ರಾಷ್ಟ್ರೀಯ ನೇಮಕಾತಿ ಸಂಸ್ಥೆಯೊಂದನ್ನು ಸ್ಥಾಪಿಸಲು ಕೇಂದ್ರ ಸಂಪುಟ ಅಸ್ತು ಎಂದಿದೆ. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸರ್ಕಾರ ಕೈಗೊಂಡಿರುವ ಈ ನಿರ್ಧಾರ ಯುವಕರಿಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.
ಪರೀಕ್ಷೆಯಲ್ಲಿ ಅಭ್ಯರ್ಥಿ ಗಳಿಸುವ ಫಲಿತಾಂಶವು ಮೂರು ವರ್ಷಗಳ ಕಾಲ ಮಾನ್ಯವಿರಲಿದೆ. ಜೊತೆಗೆ, ಈ ಅವಧಿಯಲ್ಲಿ ಅಭ್ಯರ್ಥಿಗಳು ಮತ್ತೊಮ್ಮೆ ಪರೀಕ್ಷೆ ಬರೆದು ಉತ್ತಮ ಅಂಕಗಳನ್ನು ಪಡೆಯುವ ಅವಕಾಶವನ್ನೂ ಸಹ ಕಲ್ಪಿಸಲಾಗಿದೆ.
ಸದ್ಯ, ಸ್ಥಾಪನೆಯಾಗಲಿರುವ ಸಂಸ್ಥೆಯು ರೇಲ್ವೇ ಇಲಾಖೆ, ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳು ಹಾಗೂ SSC ಅಡಿಯಲ್ಲಿ ನಡೆಯುವ ನೇಮಕಾತಿಗೆ ಪರೀಕ್ಷೆ ನಡೆಸಲಿದ್ದು ಮುಂಬರುವ ದಿನಗಳಲ್ಲಿ ಇತರೆ ಸರ್ಕಾರಿ ಸಂಸ್ಥೆಗಳ ನೇಮಕಾತಿ ಪರೀಕ್ಷೆಯ ಜವಾಬ್ದಾರಿಯನ್ನ ಸಹ ವಹಿಸಲಿದೆ ಎಂದು ಜಾವಡೇಕರ್ ತಿಳಿಸಿದರು.
ನೂತನ ಸಂಸ್ಥೆಯ ಕೆಳಗೆ ನಡೆಸಲಾಗುವ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಗೆ 12 ಭಾಷೆಗಳಲ್ಲಿ ಪರೀಕ್ಷೆ ಬರೆಯುವ ಅವಕಾಶ ಸಹ ಕಲ್ಪಿಸಲಾಗಿದೆ.