PM e-bus Seva:10,000 ಹೊಸ ಇ-ಬಸ್‌ಗಳಿಗಾಗಿ ₹57,613 ಕೋಟಿ ಅನುಮತಿ ನೀಡಿದ ಕೇಂದ್ರ ಸಚಿವ ಸಂಪುಟ
ಪರಿಸರ ಸ್ನೇಹಿ ಮತ್ತು ಹವಾಮಾನ ಬದಲಾವಣೆಯ ಸಿದ್ಧತೆಯನ್ನು ಗಮನದಲ್ಲಿಟ್ಟುಕೊಂಡು, 100 ನಗರಗಳಲ್ಲಿ 10,000 ಹೊಸ ಎಲೆಕ್ಟ್ರಿಕ್ ಬಸ್‌ಗಳನ್ನು ಹೊರತರಲಾಗುವುದು ಎಂದು ಠಾಕೂರ್ ಹೇಳಿದ್ದಾರೆ. ಚಾಲೆಂಜ್ ವಿಧಾನದ ಮೂಲಕ ನಗರಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಯೋಜನೆಯು ಮೂರು ಲಕ್ಷ ಮತ್ತು ಅದಕ್ಕಿಂತ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿರುವ ನಗರಗಳನ್ನು ಒಳಗೊಳ್ಳುತ್ತದೆ ಮತ್ತು ಸಂಘಟಿತ ಬಸ್ ಸೇವೆಗಳನ್ನು ಹೊಂದಿರದ ನಗರಗಳಿಗೆ ಆದ್ಯತೆ ನೀಡಲಾಗುವುದು.

ದೆಹಲಿ ಆಗಸ್ಟ್ 16: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಂಪುಟ ಸಭೆಯು ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಗೆ (PM e-Bus Seva Scheme) ಅನುಮೋದನೆ ನೀಡಿದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ (Anurag Thakur) ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಡಿಜಿಟಲ್ ಇಂಡಿಯಾ ಕಾರ್ಯಕ್ರಮದ ವಿಸ್ತರಣೆಗೂ ಸಚಿವ ಸಂಪುಟ ಅನುಮೋದನೆ ನೀಡಿದ್ದು ಇದಕ್ಕೆ 14,903 ಕೋಟಿ ರೂ. ಅನುದಾನ ನೀಡಲಾಗಿದೆ. 32,500 ಕೋಟಿ ರೂಪಾಯಿ ವೆಚ್ಚದಲ್ಲಿ ಭಾರತೀಯ ರೈಲ್ವೆಗಾಗಿ 7 ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇ-ಬಸ್ ಯೋಜನೆಗೆ ಒಟ್ಟು 57,613 ಕೋಟಿ ರೂ. ನೀಡಲಾಗಿದೆ. ಇದರಲ್ಲಿ ಕೇಂದ್ರ ಸರ್ಕಾರ 20,000 ಕೋಟಿ ನೀಡಲಿದ್ದು, ಉಳಿದ ಹಣವನ್ನು ರಾಜ್ಯ ಸರ್ಕಾರ ಭರಿಸಲಿದೆ.
ಪರಿಸರ ಸ್ನೇಹಿ ಮತ್ತು ಹವಾಮಾನ ಬದಲಾವಣೆಯ ಸಿದ್ಧತೆಯನ್ನು ಗಮನದಲ್ಲಿಟ್ಟುಕೊಂಡು, 100 ನಗರಗಳಲ್ಲಿ 10,000 ಹೊಸ ಎಲೆಕ್ಟ್ರಿಕ್ ಬಸ್‌ಗಳನ್ನು ಹೊರತರಲಾಗುವುದು ಎಂದು ಠಾಕೂರ್ ಹೇಳಿದ್ದಾರೆ. ಚಾಲೆಂಜ್ ವಿಧಾನದ ಮೂಲಕ ನಗರಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಯೋಜನೆಯು ಮೂರು ಲಕ್ಷ ಮತ್ತು ಅದಕ್ಕಿಂತ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿರುವ ನಗರಗಳನ್ನು ಒಳಗೊಳ್ಳುತ್ತದೆ ಮತ್ತು ಸಂಘಟಿತ ಬಸ್ ಸೇವೆಗಳನ್ನು ಹೊಂದಿರದ ನಗರಗಳಿಗೆ ಆದ್ಯತೆ ನೀಡಲಾಗುವುದು.
#WATCH | During a briefing on Union Cabinet decisions, Union Minsiter Anurag Thakur says “PM E-Bus Seva has been given approval. Rs 57,613 crores will be spent on this. Around 10,000 new electric buses will be provided across the country” pic.twitter.com/op6EqBgAZZ
— ANI (@ANI) August 16, 2023
ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ವಿಧಾನದಲ್ಲಿ ಇದನ್ನು ಮಾಡಲಾಗುತ್ತದೆ. ಈ ಯೋಜನೆಯು 2037 ರವರೆಗೆ ಇರುತ್ತದೆ. ಹತ್ತು ವರ್ಷಗಳ ಕಾಲ ಬೆಂಬಲ ನೀಡಲಾಗುವುದು ಎಂದು ಠಾಕೂರ್ ತಿಳಿಸಿದ್ದಾರೆ.
ವಿಶ್ವಕರ್ಮ ಯೋಜನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಬಡಗಿಗಳು, ಮೇಸ್ತ್ರಿಗಳು ಮತ್ತು ಅಕ್ಕಸಾಲಿಗರು ಸೇರಿದಂತೆ ಸಾಂಪ್ರದಾಯಿಕ ಕೌಶಲಗಳಲ್ಲಿ ತೊಡಗಿರುವ ಜನರಿಗೆ ಜೀವನೋಪಾಯದ ಅವಕಾಶಗಳನ್ನು ಹೆಚ್ಚಿಸಲು 13,000 ರಿಂದ 15,000 ಕೋಟಿ ರೂ.ಗಳ ವೆಚ್ಚದ ವಿಶ್ವಕರ್ಮ ಯೋಜನೆ ಎಂಬ ಮೆಗಾ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಘೋಷಿಸಿದ್ದಾರೆ.
ಇದನ್ನೂ ಓದಿ: ನ್ಯಾಯಾಲಯದ ಆದೇಶಗಳಲ್ಲಿ ಮಹಿಳೆಯರನ್ನು ಯಾವ ರೀತಿಯಲ್ಲಿ ಉಲ್ಲೇಖಿಸಬಾರದು ಎಂದು ನ್ಯಾಯಾಧೀಶರಿಗೆ ಸುಪ್ರೀಂಕೋರ್ಟ್ ಕೈಪಿಡಿ
ಮುಖ್ಯವಾಗಿ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ವರ್ಗಕ್ಕೆ ಸೇರಿದ ಜನರಿಗೆ ಅನುಕೂಲವಾಗುವ ಈ ಯೋಜನೆಯನ್ನು ಸೆಪ್ಟೆಂಬರ್ 17 ರಂದು ವಿಶ್ವಕರ್ಮ ಜಯಂತಿಯಂದು ಪ್ರಾರಂಭಿಸಲಾಗುವುದು. ಮುಂಬರುವ ವಿಶ್ವಕರ್ಮ ಜಯಂತಿಯಂದು ಸಾಂಪ್ರದಾಯಿಕ ಕೌಶಲ್ಯಗಳೊಂದಿಗೆ ಜೀವನೋಪಾಯವನ್ನು ಗಳಿಸುವ ಜನರಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ