AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂರಿಯಾ ಸಬ್ಸಿಡಿ ಯೋಜನೆಯ ಮುಂದುವರಿಕೆಗೆ CCEA ಅನುಮೋದನೆ

ಇದು 2023-24ರ ಖಾರಿಫ್ ಋತುವಿಗಾಗಿ ಇತ್ತೀಚೆಗೆ ಅನುಮೋದಿಸಲಾದ 38,000 ಕೋಟಿ ರೂ.ಗಳ ಪೋಷಕಾಂಶ ಆಧಾರಿತ ಸಬ್ಸಿಡಿಯನ್ನು ಹೊರತುಪಡಿಸಿರುವುದಾಗಿದೆ. ರೈತರು ಯೂರಿಯಾ ಖರೀದಿಗೆ ಹೆಚ್ಚುವರಿ ಖರ್ಚು ಮಾಡಬೇಕಾಗಿಲ್ಲ.

ಯೂರಿಯಾ ಸಬ್ಸಿಡಿ ಯೋಜನೆಯ ಮುಂದುವರಿಕೆಗೆ CCEA ಅನುಮೋದನೆ
ರೈತ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jun 28, 2023 | 6:49 PM

Share

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (CCEA) ರೈತರಿಗಾಗಿ ಒಟ್ಟು ರೂ.3,70,128.7 ಕೋಟಿಗಳ ವಿನೂತನ ಯೋಜನೆಗಳ ವಿಶಿಷ್ಟ ಪ್ಯಾಕೇಜ್ ಅನ್ನು ಅನುಮೋದಿಸಿದೆ. ಈ ಯೋಜನೆಗಳ ಸುಸ್ಥಿರ ಕೃಷಿಯನ್ನು ಉತ್ತೇಜಿಸುವ ಮೂಲಕ ರೈತರ ಒಟ್ಟಾರೆ ಯೋಗಕ್ಷೇಮ ಮತ್ತು ಆರ್ಥಿಕ ಸುಧಾರಣೆಗಾಗಿ ಇರುವುದಾಗಿದೆ. ಈ ಉಪಕ್ರಮಗಳು ರೈತರ ಆದಾಯವನ್ನು ಹೆಚ್ಚಿಸುತ್ತದೆ. ಅದೇ ವೇಳೆ ನೈಸರ್ಗಿಕ ಅಥವಾ ಸಾವಯವ ಕೃಷಿಯನ್ನು ಬಲಪಡಿಸುತ್ತದೆ. ಮಣ್ಣಿನ ಉತ್ಪಾದಕತೆಯನ್ನು ಪುನರುಜ್ಜೀವನಗೊಳಿಸುವುದು ಮಾತ್ರವಲ್ಲದೆ ಆಹಾರ ಭದ್ರತೆಯನ್ನು ಖಚಿತಪಡಿಸುತ್ತದೆ.

ತೆರಿಗೆಗಳು ಮತ್ತು ಬೇವಿನ ಲೇಪನ ಶುಲ್ಕಗಳನ್ನು ಹೊರತುಪಡಿಸಿ. 242 ರೂಪಾಯಿಯ 45 ಕೆಜಿ ಬ್ಯಾಗ್ ಅದೇ ಬೆಲೆಯಲ್ಲಿ  ನೀಡುವುದಕ್ಕಾಗಿ ಮತ್ತು ರೈತರಿಗೆ ಯೂರಿಯಾದ ನಿರಂತರ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಯೂರಿಯಾ ಸಬ್ಸಿಡಿ ಯೋಜನೆಯ ಮುಂದುವರಿಕೆಯನ್ನು ಸಿಸಿಇಎ ಅನುಮೋದಿಸಿತು. ಮೇಲಿನ ಅನುಮೋದಿತ ಪ್ಯಾಕೇಜ್‌ನಲ್ಲಿ ಮೂರು ವರ್ಷಗಳವರೆಗೆ (2022-23 ರಿಂದ 2024-25) ಯೂರಿಯಾ ಸಬ್ಸಿಡಿಗಾಗಿ 3,68,676.7 ಕೋಟಿ ರೂ. ತೆಗೆದಿಡಲಾಗುತ್ತದೆ.

ಇದು 2023-24ರ ಖಾರಿಫ್ ಋತುವಿಗಾಗಿ ಇತ್ತೀಚೆಗೆ ಅನುಮೋದಿಸಲಾದ 38,000 ಕೋಟಿ ರೂ.ಗಳ ಪೋಷಕಾಂಶ ಆಧಾರಿತ ಸಬ್ಸಿಡಿಯನ್ನು ಹೊರತುಪಡಿಸಿರುವುದಾಗಿದೆ. ರೈತರು ಯೂರಿಯಾ ಖರೀದಿಗೆ ಹೆಚ್ಚುವರಿ ಖರ್ಚು ಮಾಡಬೇಕಾಗಿಲ್ಲ. ಇದು ಅವರ ವೆಚ್ಚವನ್ನು ಮಿತಗೊಳಿಸಲು ಸಹಾಯ ಮಾಡುತ್ತದೆ. ಪ್ರಸ್ತುತ, 45ಕೆಜಿ ಬ್ಯಾಗ್ ಯೂರಿಯಾ ಬೆಲೆ 242 ಆಗಿದ್ದು, ಇದರ ನಿಜವಾದ ಬೆಲ 2200 ಆಗಿದೆ. ಈ ಯೋಜನೆಯು ಸಂಪೂರ್ಣವಾಗಿ ಭಾರತ ಸರ್ಕಾರದಿಂದ ಬಜೆಟ್ ಬೆಂಬಲದ ಮೂಲಕ ಹಣಕಾಸು ಒದಗಿಸುತ್ತದೆ. ಯೂರಿಯಾ ಸಬ್ಸಿಡಿ ಯೋಜನೆಯ ಮುಂದುವರಿಕೆಯು ಸ್ವಾವಲಂಬನೆಯ ಮಟ್ಟವನ್ನು ತಲುಪಲು ಯೂರಿಯಾದ ಸ್ಥಳೀಯ ಉತ್ಪಾದನೆಯನ್ನು ಗರಿಷ್ಠಗೊಳಿಸುತ್ತದೆ. ಬದಲಾಗುತ್ತಿರುವ ಭೌಗೋಳಿಕ ರಾಜಕೀಯ ಪರಿಸ್ಥಿತಿ ಮತ್ತು ಹೆಚ್ಚಿದ ಕಚ್ಚಾ ವಸ್ತುಗಳ ಬೆಲೆಗಳಿಂದಾಗಿ, ಗೊಬ್ಬರದ ಬೆಲೆಗಳು ವರ್ಷಗಳಲ್ಲಿ ಜಾಗತಿಕವಾಗಿ ಹೆಚ್ಚಾಗುತ್ತಲೇ ಇವೆ.

ನಮ್ಮ ರೈತರನ್ನು ರಕ್ಷಿಸುವ ಪ್ರಯತ್ನದಲ್ಲಿ, ಭಾರತ ಸರ್ಕಾರವು ರಸಗೊಬ್ಬರ ಸಬ್ಸಿಡಿಯನ್ನು ರೂ. 2014-15ರಲ್ಲಿ 73,067 ಕೋಟಿ ರೂ. 2022-23ರಲ್ಲಿ 2,54,799 ಕೋಟಿ ಏರಿಕೆ ಮಾಡಿದೆ. 2025-26 ರ ವೇಳೆಗೆ, ಎಂಟು ನ್ಯಾನೋ ಯೂರಿಯಾ ಸ್ಥಾವರಗಳು 44 ಕೋಟಿ ಬಾಟಲಿಗಳ ಉತ್ಪಾದನಾ ಸಾಮರ್ಥ್ಯದೊಂದಿಗೆ 195 ಲಕ್ಷ ಮೆಟ್ರಿಕ್ ಟನ್ ಯೂರಿಯಾಕ್ಕೆ ಸಮನಾಗಿರುತ್ತದೆ. ನ್ಯಾನೊ ರಸಗೊಬ್ಬರವು ನಿಯಂತ್ರಿತ ರೀತಿಯಲ್ಲಿ ಪೋಷಕಾಂಶ ಹೊಂದಿದ್ದು, ವೆಚ್ಚವೂ ಕಡಿಮೆ. ನ್ಯಾನೋ ಯೂರಿಯಾದ ಬಳಕೆಯು ಬೆಳೆ ಇಳುವರಿಯಲ್ಲಿ ಹೆಚ್ಚಳವನ್ನು ತೋರಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!