Breaking News ಗುಜರಾತ್‌ನ ಮೊರ್ಬಿಯಲ್ಲಿ ತೂಗು ಸೇತುವೆ ಕುಸಿತ; 35 ಮಂದಿ ಸಾವು
ಮೊರ್ಬಿಯಲ್ಲಿ ತೂಗುಸೇತುವೆ ಕುಸಿತದ ದುರಂತದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಗುಜರಾತ್ ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.
ಗುಜರಾತ್‌ನ ಮೊರ್ಬಿ (Morbi) ಪ್ರದೇಶದ ಮಚ್ಚು ನದಿ (Machchhu river) ಮೇಲೆ ನಿರ್ಮಿಸಲಾದ ತೂಗು ಸೇತುವೆ (cable bridge) ಇಂದು (ಅಕ್ಟೋಬರ್ 30) ಕುಸಿದು ಬಿದಿದ್ದು, ದೊಡ್ಡ ಘನ ಘೋರ ದುರಂತ ಸಂಭವಿಸಿದೆ. ಈ ದುರಂತದಲ್ಲಿ ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ. ಇದೀಗ ಬಂದ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 60ಕ್ಕೇರಿದ್ದು, ಇನ್ನೂ ಹಲವರು ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಇದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಮತ್ತೊಂದೆಡೆ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್‌ನಿಂದ ರಕ್ಷಣಾ ಕಾರ್ಯ ಮುಂದುವರಿದ್ದು, ಇಡೀ ರಾತ್ರಿ ರಕ್ಷಣಾ ಕಾರ್ಯಾಚರಣೆ ನಡೆಯಲಿದೆ. ಈ ದುರಂತವನ್ನು ಉನ್ನತ ಮಟ್ಟದ ತನಿಖೆಗೆ ಗುಜರಾತ್ ಸರ್ಕಾರ ಆದೇಶಿಸಿದೆ.
ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಗಾಯಗೊಂಡವರಿಗೆ ತಕ್ಷಣದ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚನೆಗಳನ್ನು ನೀಡಲಾಗಿದೆ. ಈ ನಿಟ್ಟಿನಲ್ಲಿ ನಾನು ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಟ್ವೀಟ್ ಮಾಡಿದ್ದಾರೆ. ಸೇತುವೆ ಕುಸಿದಾಗ ಸೇತುವೆ ಮೇಲೆ ಸುಮಾರು 500 ಮಂದಿ ಇದ್ದರು. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.
ವರದಿಗಳ ಪ್ರಕಾರ, ಮೊರ್ಬಿಯಲ್ಲಿ ತೂಗು ಸೇತುವೆ ಕುಸಿದಿದ್ದರಿಂದ, ಸುಮಾರು 100 ಜನರು ಇನ್ನೂ ನೀರಿನ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ. ದುರಸ್ತಿ ಮತ್ತು ನವೀಕರಣದ ನಂತರ ಸೇತುವೆಯನ್ನು ಅಕ್ಟೋಬರ್ 26 ರಂದು ಗುಜರಾತಿ ಹೊಸ ವರ್ಷದ ಸಂದರ್ಭದಲ್ಲಿ ತೆರೆಯಲಾಗಿತ್ತು.
#WATCH | Several people feared to be injured after a cable bridge collapsed in the Machchhu river in Gujarat's Morbi area today. Further details awaited. pic.twitter.com/hHZnnHm47L
— ANI (@ANI) October 30, 2022
#WATCH | Several people feared to be injured after a cable bridge collapsed in the Machchhu river in Gujarat's Morbi area today
PM Modi has sought urgent mobilisation of teams for rescue ops, while Gujarat CM Patel has given instructions to arrange immediate treatment of injured pic.twitter.com/VO8cvJk9TI
— ANI (@ANI) October 30, 2022
ವರದಿಗಳ ಪ್ರಕಾರ, ನವೀಕರಣಕ್ಕಾಗಿ ಸರ್ಕಾರಿ ಟೆಂಡರ್ ಅನ್ನು ಓಧವ್ಜಿ ಪಟೇಲ್ ಒಡೆತನದ ಒರೆವಾ ಗ್ರೂಪ್ಗೆ ನೀಡಲಾಗಿದೆ.
ಮೊರ್ಬಿಯಲ್ಲಿ ಸಂಭವಿಸಿದ ದುರ್ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಮತ್ತು ಇತರ ಅಧಿಕಾರಿಗಳೊಂದಿಗೆ ಮಾತನಾಡಿದರು. ರಕ್ಷಣಾ ಕಾರ್ಯಾಚರಣೆಗಾಗಿ ತಂಡಗಳ ತುರ್ತು ಸಜ್ಜುಗೊಳಿಸುವಂತೆ ಅವರು ಕೋರಿದ್ದಾರೆ. ಪರಿಸ್ಥಿತಿಯನ್ನು ನಿಕಟವಾಗಿ ಮತ್ತು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ಮತ್ತು ಪೀಡಿತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ಅವರು ಕೇಳಿಕೊಂಡಿದ್ದಾರೆ ಎಂದು ಪ್ರಧಾನಿಯವರ ಕಚೇರಿ ಹೇಳಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ
ಮೋರ್ಬಿಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡ ವ್ಯಕ್ತಿಗಳ ಕುಟುಂಬಕ್ಕೆ PMNRF ನಿಂದ 2 ಲಕ್ಷ ರೂಪಾಯಿಗಳ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಗಾಯಗೊಂಡವರಿಗೆ 50,000 ಪರಿಹಾರಧನ ನೀಡಲಾಗುವುದು.
ಗುಜರಾತ್‌ನಲ್ಲಿ ಮೊರ್ಬಿ ಕೇಬಲ್ ಸೇತುವೆ ಕುಸಿತದ ಘಟನೆಯ ಬಗ್ಗೆ ಅಧ್ಯಕ್ಷ ದ್ರೌಪದಿ ಮುರ್ಮು ದುಃಖ ವ್ಯಕ್ತಪಡಿಸಿದ್ದಾರೆ.
The tragedy in Morbi, Gujarat has left me worried. My thoughts and prayers are with the affected people. Relief and rescue efforts will bring succour to the victims.
— President of India (@rashtrapatibhvn) October 30, 2022
ಮೊರ್ಬಿ ಕೇಬಲ್ ಸೇತುವೆ ಕುಸಿತ ದುರಂತದಲ್ಲಿ ಪ್ರಾಣ ಕಳೆದುಕೊಂಡ ನಾಗರಿಕರ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ರಾಜ್ಯ ಸರ್ಕಾರವು ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ನೀಡಲಿದೆ ಎಂದು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಟ್ವೀಟ್ ಮಾಡಿದ್ದಾರೆ. ಪ್ರಧಾನಮಂತ್ರಿಯವರೊಂದಿಗಿನ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿದ ನಂತರ ನಾನು ಗಾಂಧಿನಗರವನ್ನು ತಲುಪುತ್ತಿದ್ದೇನೆ. ಸ್ಥಳಕ್ಕೆ ತಲುಪಲು ಮತ್ತು ರಕ್ಷಣಾ ಕಾರ್ಯಾಚರಣೆಗೆ ಮಾರ್ಗದರ್ಶನ ನೀಡಲು ಗೃಹ ಸಚಿವಾಲಯದ ರಾಜ್ಯ ಕಚೇರಿಯನ್ನು ಅನ್ನು ಕೇಳಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ SDRF ಸೇರಿದಂತೆ ಪಡೆಗಳನ್ನು ಸಜ್ಜುಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ನಾನು ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಮತ್ತು ಇತರ ರಾಜ್ಯದ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಸ್ಥಳೀಯ ಆಡಳಿತವು ಪರಿಹಾರ ಕಾರ್ಯದಲ್ಲಿ ತೊಡಗಿದೆ, ಎನ್‌ಡಿಆರ್‌ಎಫ್ ಕೂಡ ಶೀಘ್ರದಲ್ಲೇ ಸ್ಥಳಕ್ಕೆ ತಲುಪುತ್ತಿದೆ. ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡಲು ಆಡಳಿತಕ್ಕೆ ನಿರ್ದೇಶನ ನೀಡಿರುವುದಾಗಿ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
Published On - 7:43 pm, Sun, 30 October 22