ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ: ಸಿಬಿಐ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ಆದೇಶ

ಆರಂಭದಲ್ಲಿಯೇ ಕೊಲೆ ಪ್ರಕರಣವನ್ನು ಏಕೆ ದಾಖಲಿಸಲಿಲ್ಲ ಮತ್ತು ಅಸಹಜ ಸಾವಿನ ಪ್ರಕರಣವನ್ನು ಏಕೆ ಪ್ರಾರಂಭಿಸಲಾಯಿತು ಎಂದು ಪಶ್ಚಿಮ ಬಂಗಾಳ ಸರ್ಕಾರವನ್ನು ಹೈಕೋರ್ಟ್ ಪ್ರಶ್ನಿಸಿದ ನಂತರ ಸಿಬಿಐ ತನಿಖೆಯ ಆದೇಶ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಗಿನ ಪ್ರಾಂಶುಪಾಲರಾದ ಡಾ ಸಂದೀಪ್ ಘೋಷ್ ಅವರನ್ನು ಮೊದಲು ವಿಚಾರಣೆಗೆ ಒಳಪಡಿಸಬೇಕಿತ್ತು ಎಂದು ಹೈಕೋರ್ಟ್ ಹೇಳಿದೆ.

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ: ಸಿಬಿಐ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ಆದೇಶ
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on:Aug 13, 2024 | 4:12 PM

ಕೊಲ್ಕತ್ತಾ ಆಗಸ್ಟ್ 13: ಕಳೆದ ಶುಕ್ರವಾರ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ (RG Kar Medical College Hospital) ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ನಡೆದ ಅಮಾನುಷ ಅತ್ಯಾಚಾರ ಮತ್ತು ಹತ್ಯೆಯ ಕುರಿತು ಕೇಂದ್ರೀಯ ತನಿಖಾ ದಳ (CBI) ತನಿಖೆಗೆ ಕಲ್ಕತ್ತಾ ಹೈಕೋರ್ಟ್ (Calcutta high court) ಮಂಗಳವಾರ ಆದೇಶಿಸಿದೆ ಎಂದು ಪಿಟಿಐ ವರದಿ ಮಾಡಿದೆ. ಆರಂಭದಲ್ಲಿಯೇ ಕೊಲೆ ಪ್ರಕರಣವನ್ನು ಏಕೆ ದಾಖಲಿಸಲಿಲ್ಲ ಮತ್ತು ಅಸಹಜ ಸಾವಿನ ಪ್ರಕರಣವನ್ನು ಏಕೆ ಪ್ರಾರಂಭಿಸಲಾಯಿತು ಎಂದು ಪಶ್ಚಿಮ ಬಂಗಾಳ ಸರ್ಕಾರವನ್ನು ಹೈಕೋರ್ಟ್ ಪ್ರಶ್ನಿಸಿದ ನಂತರ ಸಿಬಿಐ ತನಿಖೆಯ ಆದೇಶ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಗಿನ ಪ್ರಾಂಶುಪಾಲರಾದ ಡಾ ಸಂದೀಪ್ ಘೋಷ್ ಅವರನ್ನು ಮೊದಲು ವಿಚಾರಣೆಗೆ ಒಳಪಡಿಸಬೇಕಿತ್ತು ಎಂದು ಹೈಕೋರ್ಟ್ ಹೇಳಿದೆ.

ಘೋಷ್ ಅವರು ರಾಜೀನಾಮೆ ನೀಡಿದ ಗಂಟೆಗಳ ನಂತರ ಮತ್ತೊಂದು ಕಾಲೇಜಿನ ಪ್ರಾಂಶುಪಾಲರಾಗಿ ಏಕೆ ನೇಮಕಗೊಂಡರು ಎಂದು ಪೀಠವು ರಾಜ್ಯ ಸರ್ಕಾರದ ವಕೀಲರನ್ನು ಪ್ರಶ್ನಿಸಿತು.

ಮಧ್ಯಾಹ್ನ 3 ಗಂಟೆಯೊಳಗೆ ದೀರ್ಘ ರಜೆಯ ಮೇಲೆ ತೆರಳುವಂತೆ ಘೋಷ್ ಅವರ ವಕೀಲರಿಗೆ ಹೈಕೋರ್ಟ್ ಸೂಚಿಸಿದೆ. ಪ್ರಾಂಶುಪಾಲ ಹುದ್ದೆಗೆ ರಾಜೀನಾಮೆ ನೀಡಿದ ನಂತರ, ಡಾ.ಸಂದೀಪ್ ಘೋಷ್ ಅವರು, “ಈ ಅವಮಾನವನ್ನು ನಾನು ಇನ್ನು ಮುಂದೆ ಸಹಿಸಲಾರೆ, ನನ್ನ ವಿರುದ್ಧ ಎತ್ತಿರುವ ಎಲ್ಲಾ ಆರೋಪಗಳು ಸುಳ್ಳು ಮತ್ತು ಕಪೋಲಕಲ್ಪಿತವಾಗಿವೆ. ನನ್ನನ್ನು ತೆಗೆದುಹಾಕಲು ವಿದ್ಯಾರ್ಥಿ ಚಳುವಳಿಯನ್ನು ಪ್ರಚೋದಿಸಲಾಗಿದೆ. ಇದರ ಹಿಂದೆ ರಾಜಕೀಯ ಮನಸ್ಸು ಇದೆ. ಘಟನೆ ನಡೆದ ಒಂದು ಗಂಟೆಯೊಳಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದಿದ್ದಾರೆ.

ಸಿಬಿಐ ತನಿಖೆಗೆ ಸಂಬಂಧಿಸಿದಂತೆ, ಭಾನುವಾರದೊಳಗೆ ಪೊಲೀಸರು ಪ್ರಕರಣವನ್ನು ಪರಿಹರಿಸಲು ವಿಫಲವಾದರೆ ಸಿಬಿಐ ತನಿಖೆಗೆ ಶಿಫಾರಸು ಮಾಡುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ.

ಪೊಲೀಸರಿಗೆ ಸಿಎಂ ನೀಡಿರುವ ಏಳು ದಿನಗಳ ಗಡುವನ್ನು ಪ್ರತಿಭಟನಾನಿರತ ವೈದ್ಯರು ಪ್ರಶ್ನಿಸಿದ್ದರು. “ಭಾನುವಾರದವರೆಗೆ ತನಿಖೆ ಏಕೆ ವಿಳಂಬವಾಗಿದೆ? ತನಿಖೆಯಿಂದ ನಮಗೆ ಸಂತೋಷವಿಲ್ಲ. ನಮ್ಮ ಬೇಡಿಕೆಗಳು ಸ್ಪಷ್ಟವಾಗಿವೆ. ಈ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ಮತ್ತು ಅಪರಾಧಿಗಳಿಗೆ ಮರಣದಂಡನೆ ವಿಧಿಸಬೇಕೆಂದು ನಾವು ಬಯಸುತ್ತೇವೆ. ವೈದ್ಯರ ಕುಟುಂಬಕ್ಕೆ ಉತ್ತಮ ಪರಿಹಾರ ನೀಡಬೇಕು’ ಎಂದು ಆಕ್ರೋಶ ವ್ಯಕ್ತಪಡಿಸಿದ ವೈದ್ಯರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಹಾರದ ಬಾಬಾ ಸಿದ್ಧೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತ; 7 ಮಂದಿಯನ್ನು ಬಲಿ ಪಡೆದ ವಿಡಿಯೋ ವೈರಲ್

ಸಂತ್ರಸ್ತೆಯ ಮರಣೋತ್ತರ ಪರೀಕ್ಷೆಯ ವರದಿ ಮತ್ತು ಶವ ಪತ್ತೆಯಾದ ಸೆಮಿನಾರ್ ಹಾಲ್ ಬಳಿ ಅಳವಡಿಸಲಾಗಿರುವ ಸಿಸಿಟಿವಿಯ ದೃಶ್ಯಾವಳಿಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:03 pm, Tue, 13 August 24

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್