Bhabanipur bypolls ಭವಾನಿಪುರ ಉಪಚುನಾವಣೆಯ ಅರ್ಜಿ ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್; ನಿಗದಿತ ದಿನವೇ ನಡೆಯಲಿದೆ ಚುನಾವಣೆ

Calcutta High Court: ನ್ಯಾಯಾಲಯವು ಪಿಐಎಲ್ ಅನ್ನು ವಜಾಗೊಳಿಸಿದ್ದು ಅದರಲ್ಲಿ ಉಪಚುನಾವಣೆ ಬಗ್ಗೆ ಬಳಸಿದ ಭಾಷೆಯನ್ನು ಪ್ರಶ್ನಿಸಲಾಯಿತು. ಮುಖ್ಯ ಕಾರ್ಯದರ್ಶಿ ಪತ್ರದಲ್ಲಿ ಭವಾನಿಪುರದಲ್ಲಿ ಉಪ ಚುನಾವಣೆ ನಡೆಯದಿದ್ದರೆ "ಸಾಂವಿಧಾನಿಕ ಬಿಕ್ಕಟ್ಟು" ಉಂಟಾಗುತ್ತದೆ ಎಂದು ಹೇಳಿದ್ದರು.

Bhabanipur bypolls ಭವಾನಿಪುರ ಉಪಚುನಾವಣೆಯ ಅರ್ಜಿ ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್; ನಿಗದಿತ ದಿನವೇ ನಡೆಯಲಿದೆ ಚುನಾವಣೆ
ಕಲ್ಕತ್ತಾ ಹೈಕೋರ್ಟ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Sep 28, 2021 | 1:22 PM

ಕೊಲ್ಕತ್ತಾ: ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಭವಾನಿಪುರ ವಿಧಾನಸಭಾ ಸ್ಥಾನಕ್ಕೆ (Bhabanipur bypolls) ನಡೆಯಲಿರುವ ಉಪಚುನಾವಣೆಗೆ ಸಂಬಂಧಿಸಿದ ಅರ್ಜಿಯನ್ನು ವಜಾಗೊಳಿಸಿದ್ದು, ಸೆಪ್ಟೆಂಬರ್ 30 ರಂದು ನಿಗದಿಯಂತೆ ಚುನಾವಣೆ ನಡೆಯಲಿದೆ ಎಂದು ಆದೇಶಿಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಮತ್ತು ನ್ಯಾಯಮೂರ್ತಿ ಆರ್ ಭಾರದ್ವಾಜ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಪಶ್ಚಿಮ ಬಂಗಾಳ ಮುಖ್ಯ ಕಾರ್ಯದರ್ಶಿಯವರು ಭವಾನಿಪುರದಲ್ಲಿ ಉಪಚುನಾವಣೆ ತಡೆ ಹಿಡಿಯಲು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದು ಅಂತಹ ಪತ್ರವನ್ನು ಬರೆಯುವುದು ಸೂಕ್ತವಲ್ಲ ಎಂದು ಹೇಳಿದರು. ನ್ಯಾಯಾಲಯವು ಪಿಐಎಲ್ ಅನ್ನು ವಜಾಗೊಳಿಸಿದ್ದು ಅದರಲ್ಲಿ ಉಪಚುನಾವಣೆ ಬಗ್ಗೆ ಬಳಸಿದ ಭಾಷೆಯನ್ನು ಪ್ರಶ್ನಿಸಲಾಯಿತು. ಮುಖ್ಯ ಕಾರ್ಯದರ್ಶಿ ಪತ್ರದಲ್ಲಿ ಭವಾನಿಪುರದಲ್ಲಿ ಉಪ ಚುನಾವಣೆ ನಡೆಯದಿದ್ದರೆ “ಸಾಂವಿಧಾನಿಕ ಬಿಕ್ಕಟ್ಟು” ಉಂಟಾಗುತ್ತದೆ ಎಂದು ಹೇಳಿದ್ದರು.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee )ಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ನ್ಯಾಯಾಲಯವು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ (ಪಿಐಎಲ್) ವಿಚಾರಣೆ ನಡೆಸಿ, “ಸಾಂವಿಧಾನಿಕ ತುರ್ತುಸ್ಥಿತಿ ಮತ್ತು ಪಶ್ಚಿಮ ಬಂಗಾಳ ರಾಜ್ಯದ ವಿಶೇಷ ವಿನಂತಿಯನ್ನು ಪರಿಗಣಿಸಿ ಚುನಾವಣಾ ಆಯೋಗವು ಭವಾನಿಪುರ ಕ್ಷೇತ್ರಕ್ಕೆ ಉಪಚುನಾವಣೆಯನ್ನು ನಡೆಸಲು ನಿರ್ಧರಿಸಿದೆ ಎಂದು ಹೇಳಿದೆ.

ಸೆಪ್ಟೆಂಬರ್ 04, 2021 ರ ಪತ್ರಿಕಾ ಟಿಪ್ಪಣಿಯನ್ನು ನೀಡುವುದರೊಂದಿಗೆ ಚುನಾವಣೆಯ ಪ್ರಕ್ರಿಯೆಯು ಆರಂಭಗೊಂಡಿದ್ದರಿಂದ ಮತ್ತು ಮತದಾನವು ಸೆಪ್ಟೆಂಬರ್ 30, 2021 ರಂದು ನಡೆಯಬೇಕಾಗಿರುವುದರಿಂದ, ಆಯೋಗವು ನಡೆಸುವ ನಿರ್ಧಾರದಲ್ಲಿ ಮಧ್ಯಪ್ರವೇಶಿಸುವುದು ನಮಗೆ ಸೂಕ್ತವಲ್ಲ”ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆದಾಗ್ಯೂ, ಭವಾನಿಪುರ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯದಿದ್ದಲ್ಲಿ ‘ಸಾಂವಿಧಾನಿಕ ಬಿಕ್ಕಟ್ಟು’ ಉಂಟಾಗುತ್ತದೆ ಎಂದು ಚುನಾವಣಾ ಆಯೋಗಕ್ಕೆ ಪತ್ರ ಬರೆಯುವ ಮೂಲಕ ಮುಖ್ಯ ಕಾರ್ಯದರ್ಶಿಯ ನಡವಳಿಕೆಯ ಬಗ್ಗೆ ನಮ್ಮ ಆಕ್ಷೇಪವನ್ನು ನಾವು ದಾಖಲಿಸುತ್ತೇವೆ. ಅವರು ಸಾರ್ವಜನಿಕ ಸೇವಕರಾಗಿದ್ದು, ಯಾರು ಅಧಿಕಾರದಲ್ಲಿದ್ದರೂ ಕಾನೂನಿನ ನಿಬಂಧನೆಗಳ ಪ್ರಕಾರ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು. ಯಾವುದೇ ನಿರ್ದಿಷ್ಟ ವ್ಯಕ್ತಿ ಅಧಿಕಾರಕ್ಕೆ ಬರಬೇಕು ಮತ್ತು ಅನುಪಸ್ಥಿತಿಯಲ್ಲಿ ‘ಸಾಂವಿಧಾನಿಕ ಬಿಕ್ಕಟ್ಟು ಉಂಟಾಗುತ್ತದೆ ಎಂದು ಅವರು ಹೇಳಬಾರದು ಎಂದಿದೆ.

ಪತ್ರ ಬರೆದ ಮುಖ್ಯ ಕಾರ್ಯದರ್ಶಿ “ತನ್ನನ್ನು ತಾನು ಸಾರ್ವಜನಿಕ ಸೇವಕನಿಗಿಂತ ಅಧಿಕಾರದ ರಾಜಕೀಯ ಪಕ್ಷದ ಸೇವಕನಾಗಿ ತೋರಿಸುತ್ತಿದ್ದಾನೆ” ಎಂದು ನ್ಯಾಯಾಲಯ ಗಮನಿಸಿದೆ.

ನವೆಂಬರ್ 17 ರಂದು ವಿಭಾಗೀಯ ಪೀಠವು ಮತ್ತೊಮ್ಮೆ ಪ್ರಕರಣದ ವಿಚಾರಣೆ ನಡೆಸಲಿದೆ. ತೀರ್ಪಿಗೆ ಪ್ರತಿಕ್ರಿಯಿಸಿದ, ಟಿಎಂಸಿ ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಅವರು “ನಾವು ನ್ಯಾಯಾಲಯದ ನಿರ್ಧಾರವನ್ನು ಗೌರವಿಸುತ್ತೇವೆ. ಭವಾನಿಪುರದಲ್ರಲಿ  ಖಂಡಿತವಾಗಿಯೂ ಚುನಾವಣೆ ನಡೆಯುತ್ತದೆ. ಬಿಜೆಪಿ ಹೆದರಿತ್ತು ಮತ್ತು ಅದಕ್ಕಾಗಿಯೇ ಅವರು ಇದನ್ನೆಲ್ಲ ಮಾಡಿದರು ಎಂದಿದ್ದಾರೆ.

ಇದನ್ನೂ ಓದಿ: ಮಮತಾ ಬ್ಯಾನರ್ಜಿಯನ್ನು ಹೊಗಳಿದ ಬೆನ್ನಲ್ಲೇ ಗೋವಾದ ಕಾಂಗ್ರೆಸ್ ನಾಯಕ ರಾಜೀನಾಮೆ

ಇದನ್ನೂ ಓದಿ: ಭವಾನಿಪುರದಲ್ಲಿ ಸೆಕ್ಷನ್​ 144 ಜಾರಿಮಾಡಲು ಬಿಜೆಪಿ ನಿಯೋಗ ಆಗ್ರಹ; ಗಲಾಟೆ ಬೆನ್ನಲ್ಲೇ ಚುನಾವಣಾ ಆಯೋಗಕ್ಕೆ ದೂರು

(Calcutta High Court dismisses a petition on the bye-election to the Bhabanipur assembly seat)

Published On - 12:59 pm, Tue, 28 September 21

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ