ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಖರ್​​ನ್ನು ತೆಗೆದುಹಾಕುವಂತೆ ಕೋರಿ ಸಲ್ಲಿಸಲಾದ ಮನವಿ ವಜಾ ಮಾಡಿದ ಕಲ್ಕತ್ತಾ ಹೈಕೋರ್ಟ್

ಧಂಖರ್ ಅವರು ರಾಜ್ಯದ ಕಾರ್ಯನಿರ್ವಹಣೆಯಲ್ಲಿ ಮಧ್ಯ ಪ್ರವೇಶಿಸುತ್ತಿದ್ದಾರೆ ಮತ್ತು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರವನ್ನು ತಮ್ಮ ವಿಮರ್ಶಾತ್ಮ ಟೀಕೆಗಳನ್ನು ಮಾಡುತ್ತಿದ್ದಾರೆಎಂದು ಸರ್ಕಾರ್ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಖರ್​​ನ್ನು ತೆಗೆದುಹಾಕುವಂತೆ ಕೋರಿ ಸಲ್ಲಿಸಲಾದ ಮನವಿ ವಜಾ ಮಾಡಿದ ಕಲ್ಕತ್ತಾ ಹೈಕೋರ್ಟ್
ಜಗದೀಪ್ ಧಂಖರ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Feb 18, 2022 | 1:38 PM

ಕೊಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಗವರ್ನರ್ ಹುದ್ದೆಯಿಂದ ಜಗದೀಪ್ ಧಂಖರ್ (Jagdeep Dhankhar) ಅವರನ್ನು ತೆಗೆದುಹಾಕುವಂತೆ ವಕೀಲರೊಬ್ಬರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕಲ್ಕತ್ತಾ ಹೈಕೋರ್ಟ್ (Calcutta high court)  ಶುಕ್ರವಾರ ವಜಾ ಮಾಡಿದೆ. ಫೆಬ್ರವರಿ 8 ರಂದು ವಕೀಲ ರಾಮಪ್ರಸಾದ್ ಸರ್ಕಾರ್ ಅವರು ಸಲ್ಲಿಸಿದ ಅರ್ಜಿಯಲ್ಲಿ, ಭಾರತೀಯ ಜನತಾ ಪಕ್ಷದ (BJP) ಮುಖವಾಣಿಯಂತಿರುವ ಧಂಖರ್ ಅವರನ್ನು ತೆಗೆದುಹಾಕುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯದ ನಿರ್ದೇಶನವನ್ನು ಕೋರಿದ್ದರು.  ಧಂಖರ್ ಅವರು ರಾಜ್ಯದ ಕಾರ್ಯನಿರ್ವಹಣೆಯಲ್ಲಿ ಮಧ್ಯ ಪ್ರವೇಶಿಸುತ್ತಿದ್ದಾರೆ ಮತ್ತು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರವನ್ನು ತಮ್ಮ ವಿಮರ್ಶಾತ್ಮ ಟೀಕೆಗಳನ್ನು ಮಾಡುತ್ತಿದ್ದಾರೆಎಂದು ಸರ್ಕಾರ್ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.  ಧಂಖರ್ ಅವರು ಬಿಜೆಪಿ ಮುಖವಾಣಿಯಂತೆ ವರ್ತಿಸುತ್ತಿದ್ದಾರೆ ಎಂದು ಅರ್ಜಿದಾರರು ಸಲ್ಲಿಸಿದ್ದಾರೆ. ಧಂಖರ್ ಅವರು ರಾಜ್ಯ ಮಂತ್ರಿಗಳ ಮಂಡಳಿಯನ್ನು ನಿರ್ಲಕ್ಷಿಸುತ್ತಿದ್ದಾರೆ, “ಸಂವಿಧಾನದ ಉಲ್ಲಂಘನೆ” ಯಲ್ಲಿ ನೇರವಾಗಿ ಅಧಿಕಾರಿಗಳನ್ನು ನಿರ್ದೇಶಿಸುತ್ತಿದ್ದಾರೆ ಎಂದು ಅವರು ಹೇಳಿದರು. ಪ್ರಸ್ತುತ ರಾಜ್ಯಪಾಲರು ಕೇಂದ್ರ ಸರ್ಕಾರದ ರಾಜಕೀಯ ಹಿತಾಸಕ್ತಿಯನ್ನು ಪೂರೈಸುತ್ತಿರುವುದರಿಂದ ಕೇಂದ್ರ ಸರ್ಕಾರವು ಧಂಖರ್ ವಿರುದ್ಧ ವರ್ತಿಸುತ್ತಿಲ್ಲ ಎಂದು ಅವರು ಹೇಳಿದರು. ಫೆಬ್ರವರಿ 15 ರಂದು, 2019 ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ಹಲವಾರು ವಿಷಯಗಳ ಕುರಿತು ಟಿಎಂಸಿ ಸರ್ಕಾರದೊಂದಿಗೆ ಆಗಾಗ್ಗೆ ಟೀಕಾ ಪ್ರಹಾರ ಮಾಡಿದ ಧಂಖರ್, “ಸಾಂವಿಧಾನಿಕ ಅಸ್ಥಿರತೆ” ಯನ್ನು ತಪ್ಪಿಸಲು ಹಲವಾರು ವಿಷಯಗಳನ್ನು ಚರ್ಚಿಸಲು ವಾರದಲ್ಲಿ ರಾಜಭವನದಲ್ಲಿ ಅವರನ್ನು ಭೇಟಿ ಮಾಡುವಂತೆ ಬ್ಯಾನರ್ಜಿ ಅವರನ್ನು ಒತ್ತಾಯಿಸಿದ್ದರು.

ಎರಡು ದಿನಗಳ ನಂತರ, ಅವರು ಬ್ಯಾನರ್ಜಿಯವರಿಗೆ ವಿವಿಧ ಸಮಸ್ಯೆಗಳ ಕುರಿತು ಕೇಳಿದ ಮಾಹಿತಿಯನ್ನು ಆದಷ್ಟು ಬೇಗ ಒದಗಿಸುವಂತೆ ವಿನಂತಿಸಿದ್ದು, ಅವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಲಾಗಿಲ್ಲ ಎಂದು ಹೇಳಿದ್ದಾರೆ.

ಸಿಎಂ ಮಮತಾ ಬ್ಯಾನರ್ಜಿಗೆ ಬರೆದ ಪತ್ರವನ್ನು ಟ್ವೀಟ್ ಮಾಡಿದ  ರಾಜ್ಯಪಾಲ ಪಶ್ಚಿಮ ಬಂಗಾಳದ ಗವರ್ನರ್ ಜಗದೀಪ್ ಧಂಖರ್  ಫೆಬ್ರವರಿ 15 ರಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ  ಅವರಿಗೆ ಬರೆದ ಪತ್ರವನ್ನು ಗುರುವಾರ ಟ್ವೀಟ್ ಮಾಡಿದ್ದಾರೆ. “ಮುಂದಿನ ವಾರದ ಯಾವುದೇ ಸಮಯದಲ್ಲಿ” ರಾಜಭವನದಲ್ಲಿ ಸಂವಾದಕ್ಕೆ ಬರಬೇಕು ಎಂದು ಹೇಳಿರುವ ಪತ್ರ ಇದಾಗಿದೆ. ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವಿನ ಭಿನ್ನಾಭಿಪ್ರಾಯವು ಉತ್ತುಂಗದಲ್ಲಿರುವಾಗ, ಧಂಖರ್ ಸರ್ಕಾರಿ ಅಧಿಕಾರಿಗಳನ್ನು “ತನ್ನ ಸೇವಕರು” ಎಂಬಂತೆ ನೋಡುತ್ತಾರೆ ಎಂದು ಆರೋಪಿಸಿ ರಾಜ್ಯಪಾಲರನ್ನು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಸಿಎಂ ಮಮತಾ ಬ್ಲಾಕ್ ಮಾಡಿದ್ದರು.  ಜನವರಿ 31 ರಂದು, ಬ್ಯಾನರ್ಜಿ ಅವರು ಧಂಖರ್ ಅವರನ್ನು ಟ್ವಿಟರ್‌ನಲ್ಲಿ ಬ್ಲಾಕ್ ಮಾಡಿದ್ದರು. ಅವರ “ಅನೈತಿಕ ಮತ್ತು ಅಸಂವಿಧಾನಿಕ” ಹೇಳಿಕೆಗಳಿಂದಾಗಿ ಇದನ್ನು ಮಾಡಬೇಕಾಗಿ ಬಂತು. ರಾಜ್ಯಪಾಲರು “ಸೂಪರ್ ಗಾರ್ಡ್” ನಂತೆ ವರ್ತಿಸುತ್ತಿದ್ದಾರೆ. ಸರ್ಕಾರಿ ಅಧಿಕಾರಿಗಳನ್ನು “ಅವರ ಸೇವಕರು” ಎಂದು ಭಾವಿಸುತ್ತಿದ್ದಾರೆ ಎಂದು ಮಮತಾ ಆರೋಪಿಸಿದ್ದಾರೆ. ಇದಾದ ಕೆಲವೇ ದಿನಗಳಲ್ಲಿ, ಬ್ಯಾನರ್ಜಿಯವರ ಈ ಕ್ರಮವು ಸಾಂವಿಧಾನಿಕ ಮಾನದಂಡಗಳಿಗೆ ವಿರುದ್ಧವಾಗಿದೆ ಎಂದು ಧಂಖರ್ ಹೇಳಿದ್ದಾರೆ. ಬೆಂಗಾಲ್ ಗ್ಲೋಬಲ್ ಬ್ಯುಸಿನೆಸ್ ಶೃಂಗಸಭೆ, ಮಾ ಕ್ಯಾಂಟೀನ್, ವಿಶ್ವವಿದ್ಯಾನಿಲಯಗಳ ಉಪಕುಲಪತಿ ನೇಮಕ, ರಾಜ್ಯ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರ ಚಲನೆಯನ್ನು ಪೊಲೀಸರು ತಡೆಯುವುದು ಮತ್ತು ಇತರ ವಿಷಯಗಳ ಕುರಿತು ರಾಜ್ಯಪಾಲರು ಸಮಸ್ಯೆಗಳನ್ನು ಪ್ರಸ್ತಾಪಿಸಿದ್ದ ನಂತರ ಈ ಬೆಳವಣಿಗೆ ನಡೆದಿದೆ. ನಂತರ ತೃಣಮೂಲ ಕಾಂಗ್ರೆಸ್‌ನ ಲೋಕಸಭಾ ಸಂಸದ ಸುದೀಪ್ ಬಂಡೋಪಾಧ್ಯಾಯ ಅವರು ಜಗದೀಪ್ ಧಂಖರ್ ಅವರನ್ನು ರಾಜ್ಯಪಾಲ ಹುದ್ದೆಯಿಂದ ವಜಾಗೊಳಿಸುವಂತೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಒತ್ತಾಯಿಸಿದ್ದರು.

ಇದನ್ನೂ ಓದಿ: ರಾಜಭವನದಲ್ಲಿ ಸಂವಾದಕ್ಕಾಗಿ ಸಿಎಂ ಮಮತಾ ಬ್ಯಾನರ್ಜಿಗೆ ಬರೆದ ಪತ್ರವನ್ನು ಟ್ವೀಟ್ ಮಾಡಿದ ಪಶ್ಚಿಮ ಬಂಗಾಳದ ರಾಜ್ಯಪಾಲ

Published On - 1:31 pm, Fri, 18 February 22

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ