AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆ; ಸುವೇಂದು ಅಧಿಕಾರಿಗೆ ಕೋಲ್ಕತ್ತ ಹೈಕೋರ್ಟ್​ನಿಂದ ನೋಟಿಸ್​

ನಂದಿಗ್ರಾಮದಲ್ಲಿ ಬಿಜೆಪಿ ಗೆಲುವಿನ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರಿ ವಿರುದ್ಧ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಮೊದಲು ಪ್ರಕರಣ ವಿಚಾರಣೆಯನ್ನು ನ್ಯಾಯಮೂರ್ತಿ ಕೌಶಿಕ್​ ಚಂದಾ ಕೈಗೆತ್ತಿಕೊಂಡಿದ್ದರು.

ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆ; ಸುವೇಂದು ಅಧಿಕಾರಿಗೆ ಕೋಲ್ಕತ್ತ ಹೈಕೋರ್ಟ್​ನಿಂದ ನೋಟಿಸ್​
ಸುವೇಂದು ಅಧಿಕಾರಿ
TV9 Web
| Edited By: |

Updated on: Jul 14, 2021 | 4:26 PM

Share

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಸುವೇಂದು ಅಧಿಕಾರಿ ಗೆಲುವನ್ನು ಪ್ರಶ್ನಿಸಿ ಸಿಎಂ ಮಮತಾ ಬ್ಯಾನರ್ಜಿ ಕೋಲ್ಕತ್ತ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ನ್ಯಾಯಮೂರ್ತಿ ಶಂಪಾ ಸರ್ಕಾರ್​ ಇದೀಗ ಸುವೇಂದು ಅಧಿಕಾರಿಗೆ ನೋಟಿಸ್​ ನೀಡಿದ್ದಾರೆ. ಮಮತಾ ಬ್ಯಾನರ್ಜಿ ಸಲ್ಲಿಸಿರುವ ಅರ್ಜಿ ವಿಚಾರಣೆ ಬಾಕಿ ಇರುವುದರಿಂದ, ಚುನಾವಣೆಗೆ ಸಂಬಂಧಪಟ್ಟ ಎಲ್ಲ ದಾಖಲೆಗಳು, ಪೇಪರ್​ಗಳು, ಡಿವೈಸ್​, ವಿಡಿಯೋ ರೆಕಾರ್ಡಿಂಗ್​ಗಳನ್ನೆಲ್ಲ ಸಂಬಂಧಪಟ್ಟ ಆಡಳಿತ ಸಂರಕ್ಷಿಸಬೇಕು ಎಂದೂ ನಿರ್ದೇಶನ ನೀಡಿದ್ದಾರೆ.

ಜನರ ಪ್ರತಿನಿಧಿ ಕಾಯ್ದೆ, 1951 ರ ಸೆಕ್ಷನ್ 86 (1) ರಡಿ ಸಲ್ಲಿಸಲಾದ ಈ ಚುನಾವಣಾ ಅರ್ಜಿಯಲ್ಲಿ ದೋಷವಿಲ್ಲ. ಈ ಕೋರ್ಟ್​​ನಿಂದ ರಚಿತವಾದ ಚುನಾವಣಾ ಅರ್ಜಿ ನಿಯಮದ 24ನೇ ನಿಯಮದಡಿ ಒಂದು ನೋಟಿಸ್​ ನೀಡೋಣ. ಮತ್ತೆ ಆಗಸ್ಟ್​ 12ರಂದು ವಿಚಾರಣೆ ನಡೆಸಲಾಗವುದು ಎಂದು ಕೋರ್ಟ್ ಹೇಳಿದೆ. ಈ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿಯವರ ಪರ ಹಿರಿಯ ನ್ಯಾಯವಾದಿ ಸೋಮೇಂದ್ರನಾಥ್​ ಮುಖರ್ಜಿ ವಾದಮಂಡಿಸಿದ್ದಾರೆ.

ನಂದಿಗ್ರಾಮದಲ್ಲಿ ಬಿಜೆಪಿ ಗೆಲುವಿನ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರಿ ವಿರುದ್ಧ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಮೊದಲು ಪ್ರಕರಣ ವಿಚಾರಣೆಯನ್ನು ನ್ಯಾಯಮೂರ್ತಿ ಕೌಶಿಕ್​ ಚಂದಾ ಕೈಗೆತ್ತಿಕೊಂಡಿದ್ದರು. ಆದರೆ ಅವರು ಬಿಜೆಪಿ ನಾಯಕರೊಂದಿಗೆ ಹೆಚ್ಚಾಗಿ ಗುರುತಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ನಂತರ ಪ್ರಕರಣದ ವಿಚಾರಣೆ ನಡೆಸುವ ನ್ಯಾಯಾಧೀಶರನ್ನು ಬದಲಿಸಬೇಕು ಎಂದು ಮಮತಾ ಬ್ಯಾನರ್ಜಿ ಮತ್ತೊಂದು ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಹಾಸನ: ಮೂಲ ಯೋಜನೆಗೆ ವಿರುದ್ಧವಾಗಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಯತ್ನ; ಹೆಚ್ ಡಿ ರೇವಣ್ಣ ಆಕ್ರೋಶ

Calcutta High Court Issues Notice To Suvendu Adhikari in the Mamata Banerjee’s Election Petition Case

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ