Rahul Gandhi: ನಮ್ಮನ್ನು ನೀವು ಏನು ಬೇಕಾದರೂ ಕರೆಯಿರಿ, ಮಣಿಪುರಕ್ಕೆ ನಾವು ಸಹಾಯ ಮಾಡುತ್ತೇವೆ, ಮೋದಿಗೆ ರಾಹುಲ್ ಟಾಂಗ್​

ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟವನ್ನು ಟೀಕಿಸಿದ ಮೋದಿಗೆ ಕಾಂಗ್ರೆಸ್​​ ನಾಯಕ ರಾಹುಲ್​​ ಗಾಂಧಿ ಖಡಕ್ ಉತ್ತರ​​ ನೀಡಿದ್ದಾರೆ. ನಮ್ಮನ್ನು ನೀವು ಏನು ಬೇಕಾದರೂ ಕರೆಯಬಹುದು. ನಾವು ಎಂದಿಗೂ INDIA. ಮಣಿಪುರವನ್ನು ಮತ್ತೆ ಮೊದಲಿನ ಸ್ಥಿತಿಗೆ ತರವುದು ನಮ್ಮ ಗುರಿ ಎಂದು ಹೇಳಿದ್ದಾರೆ.

Rahul Gandhi: ನಮ್ಮನ್ನು ನೀವು ಏನು ಬೇಕಾದರೂ ಕರೆಯಿರಿ, ಮಣಿಪುರಕ್ಕೆ ನಾವು ಸಹಾಯ ಮಾಡುತ್ತೇವೆ, ಮೋದಿಗೆ ರಾಹುಲ್ ಟಾಂಗ್​
ರಾಹುಲ್​​ ಗಾಂಧಿ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jul 25, 2023 | 3:40 PM

ದೆಹಲಿ; ಪ್ರಧಾನಿ ಮೋದಿ ಇಂದು ಬಿಜೆಪಿ ಸಂಸದರ ಸಭೆಯಲ್ಲಿ ಪ್ರತಿಪಕ್ಷಗಳ “ಇಂಡಿಯಾ” ಮೈತ್ರಿಕೂಟದ ಬಗ್ಗೆ ಟೀಕಿಸಿದ್ದಾರೆ. ವಿರೋಧ ಪಕ್ಷಗಳ ಮೈತ್ರಿಕೂಟ ದೇಶದಲ್ಲಿ ದಿಕ್ಕು ತೋಚದಂತಿದೆ. ದೇಶದ ಹೆಸರಿನಲ್ಲಿ ಜನರ ದಿಕ್ಕು ತಪ್ಪಿಸಲು ಪ್ರಯತ್ನ ಮಾಡುತ್ತಿದೆ.  ಈಸ್ಟ್ ಇಂಡಿಯಾ ಕಂಪನಿ ಮತ್ತು ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್ ಮತ್ತು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದಲ್ಲೂ ಇಂಡಿಯಾ ಇದೆ ಎಂದು ಈ ಸಭೆಯಲ್ಲಿ ಹೇಳಿದ್ದಾರೆ. ಇದೀಗ ಇದಕ್ಕೆ ರಾಹುಲ್​​ ಗಾಂಧಿ (Rahul Gandhi) ಟ್ವೀಟ್​​ ಮೂಲಕ ಟಾಂಗ್ ನೀಡಿದ್ದಾರೆ. ನಮ್ಮ ಮುಖ್ಯ ಉದ್ದೇಶ ಮಣಿಪುರದಲ್ಲಿ ಶಾಂತಿ ಕಾಪಾಡುವುದು, ಅಲ್ಲಿಯ ಜನರಿಗೆ ಸಹಾಯ ಮಾಡುವುದು ನಮ್ಮ ಮುಖ್ಯ ಗುರಿ. ಈಶಾನ್ಯ ರಾಜ್ಯದಲ್ಲಿ ಮತ್ತೆ ಭಾರತದ ಪರಿಕಲ್ಪನೆಯನ್ನು ಪುನರ್ನಿರ್ಮಿಸುತ್ತೇವೆ ಎಂದು ಟ್ವೀಟ್​​ ಮೂಲಕ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಹೇಳಿಕೆಗೆ ಟ್ವಿಟರ್​​ ಮೂಲಕ ಉತ್ತರ ನೀಡಿದ ರಾಹುಲ್​​ ಗಾಂಧಿ”ಮಿಸ್ಟರ್ ಮೋದಿ ನಮ್ಮನ್ನು ನೀವು ಏನು ಬೇಕಾದರೂ ಕರೆಯಬಹುದು. ನಾವು ಎಂದಿಗೂ INDIA. ಮಣಿಪುರವನ್ನು ಮತ್ತೆ ಮೊದಲಿನ ಸ್ಥಿತಿಗೆ ತರವುದು ನಮ್ಮ ಗುರಿ. ಅಲ್ಲಿಯ ಮಕ್ಕಳು ಮತ್ತು ಮಹಿಳೆಯರ ಕಣ್ಣೀರನ್ನು ಒರೆಸಲು ಸಹಾಯ ಮಾಡುತ್ತೇವೆ. ಎಲ್ಲ ಜನರಿಗೂ ನಾವು ಪ್ರೀತಿ ಮತ್ತು ಶಾಂತಿಯನ್ನು ಮತ್ತೆ ನೀಡುತ್ತೇವೆ. ಮಣಿಪುರದಲ್ಲಿ ಮತ್ತೆ ಭಾರತದ ಕಲ್ಪನೆಯನ್ನು ಮರುನಿರ್ಮಾಣ ಮಾಡುತ್ತೇವೆ” ಎಂದು ಹೇಳಿದ್ದಾರೆ.

ಮಣಿಪುರದಲ್ಲಿ ನಡೆದ ಹಿಂಸಾಚಾರದಿಂದ ದೇಶದ್ಯಾಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇನ್ನೂ ಉರಿಯುತ್ತಿರುವ ಬೆಂಕಿಗೆ ತುಪ್ಪು ಸುರಿದಂತೆ, ಮೇ 4ರಂದು ಚಿತ್ರಿಸಲಾಗಿದ್ದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿರುವ ವಿಡಿಯೋ ಇತ್ತಿಚೇಗೆ ವೈರಲ್​​ ಆಗಿರುವುದು ಈ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ. ಈ ಬಗ್ಗೆ ಮುಂಗಾರು ಅಧಿವೇಶನದಲ್ಲಿ ಚರ್ಚೆಯಾಗಬೇಕು ಎಂದು ವಿರೋಧ ಪಕ್ಷಗಳ ಒತ್ತಾಯಕ್ಕೆ ಮಣಿದು, ಕೇಂದ್ರ ಸರ್ಕಾರ ಚರ್ಚೆ ಒಪ್ಪಿಗೆ ನೀಡಿತ್ತು, ಆದರೆ ಇದೀಗ ವಿರೋಧ ಪಕ್ಷಗಳು ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಮೋದಿ ಅವರೇ ನೇರವಾಗಿ ಉತ್ತರ ನೀಡಬೇಕು ಎಂದು ವಿರೋಧ ಪಕ್ಷಗಳು ಒತ್ತಾಯ ಮಾಡುತ್ತಿದೆ.

ಇದನ್ನೂ ಓದಿ: ಇಂಡಿಯನ್ ಮುಜಾಹಿದ್ದೀನ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇದೆಲ್ಲದರಲ್ಲೂ ಇಂಡಿಯಾ ಇದೆ; ಪ್ರತಿಪಕ್ಷಗಳ ‘ಇಂಡಿಯಾ’ ಒಕ್ಕೂಟ ಬಗ್ಗೆ ಮೋದಿ ವಾಗ್ದಾಳಿ

ಇನ್ನೂ ಇಂದು 4ನೇ ದಿನದ ಮುಂಗಾರು ಸಂಸತ್​ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಬಿಜೆಪಿ ಪಕ್ಷದ ಸಂಸದರ ಸಭೆಯಲ್ಲಿ ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಬಗ್ಗೆ ಮಾತನಾಡಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. ವಿರೋಧ ಪಕ್ಷಗಳು ಇಂಡಿಯಾ ಎಂಬ ಹೆಸರಿನ ಮೂಲಕ ಜನರ ದಿಕ್ಕನ್ನು ತಪ್ಪಿಸುತ್ತಿದೆ. ಈ ಹಿಂದೆ ಈಸ್ಟ್ ಇಂಡಿಯಾ ಕಂಪನಿ ಎಂಬುದನ್ನು ವಿದೇಶಿಯರು ಸ್ಥಾಪನೆ ಮಾಡಿದ್ದರು, ಅದರಲ್ಲೂ ಇಂಡಿಯಾ ಇತ್ತು. ಇದೀಗ ಇಂಡಿಯಾ ಮೈತ್ರಿ  ಪಕ್ಷಗಳು ಇಂಡಿಯಾ ಎಂಬ ಕಂಪನಿಯನ್ನು ಸ್ಥಾಪನೆ ಮಾಡಿದೆ. ಭಯೋತ್ಪಾದನೆ ಸಂಘಟನೆ ಇಂಡಿಯನ್ ಮುಜಾಹಿದ್ದೀನ್ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದಲ್ಲೂ ಇಂಡಿಯಾ ಎಂಬುದು ಇತ್ತು. ಇಂಡಿಯಾ ಎಂಬ ಹೆಸರನ್ನು ಬಳಸುವುದರಲ್ಲಿ ಯಾವ ಅರ್ಥವೂ ಇಲ್ಲ ಎಂದು ಹೇಳಿದ್ದಾರೆ.

ಇನ್ನೂ ಮೋದಿ ಉಪನಾಮಕ್ಕೆ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ರಾಹುಲ್​​ ಗಾಂಧಿ ಅವರು ಪ್ರಧಾನಿ ಮೋದಿ ಅವರ ಈ ಹೇಳಿಕೆಗೆ ಟ್ವಿಟರ್​​ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:18 pm, Tue, 25 July 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ