
ನವದೆಹಲಿ, ಅಕ್ಟೋಬರ್ 8: ಎಸ್ಐಆರ್ನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿವೆ. ಈ ನಡುವೆ, ದೇಶದ 42 ಮಂದಿ ವಿಶ್ರಾಂತ ನ್ಯಾಯಾಧೀಶರು ಹಾಗೂ ಸಾಂವಿಧಾನಿಕ ಹುದ್ದೆಗಳ ಮಾಜಿ ಹಿರಿಯ ಅಧಿಕಾರಿಗಳು ಭಾರತೀಯ ಚುನಾವಣಾ ಆಯೋಗ ಮತ್ತು ಇತರ ಸಾಂವಿಧಾನಿಕ ಸಂಸ್ಥೆಗಳ ಪರವಾಗಿ ಧ್ವನಿಯೆತ್ತಿದ್ದಾರೆ. ಅಕ್ಟೋಬರ್ 7ರಂದು ಬರೆದಿರುವ ಬಹಿರಂಗ ಪತ್ರದಲ್ಲಿ ಚುನಾವಣಾ ಆಯೋಗ, ನ್ಯಾಯಾಂಗ ಮತ್ತು ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಿರಂತರ ದಾಳಿಯ ಬಗ್ಗೆ ಅವರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.
ಸಾಂವಿಧಾನಿಕ ಪ್ರಾಧಿಕಾರಗಳನ್ನು ಪದೇ ಪದೇ “ಕಳ್ಳರು” ಹಾಗೂ “ಅನ್ಯಾಯದ ಜೊತೆ ಶಾಮೀಲಾದವರು” ಎಂದು ಕರೆಯುವುದು ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಸಾರ್ವಜನಿಕರ ನಂಬಿಕೆಯನ್ನು ಕುಸಿಯುವಂತೆ ಮಾಡುತ್ತದೆ ಎಂದು ನ್ಯಾಯಾಧೀಶರು ಎಚ್ಚರಿಸಿದ್ದಾರೆ. “ಸಂಸ್ಥೆಗಳ ಮೇಲಿನ ಟೀಕೆ ಪ್ರಜಾಪ್ರಭುತ್ವದ ಹಕ್ಕು, ಆದರೆ ನಿಂದನೆ ಅಥವಾ ಘನತೆಗೆ ಧಕ್ಕೆ ತರುವುದು ಹಕ್ಕಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ.
ಪತ್ರದಲ್ಲಿನ ಮುಖ್ಯಾಂಶಗಳು:
ಸಾಂವಿಧಾನಿಕ ಸಂಸ್ಥೆಗಳನ್ನು ವಿಮರ್ಶಿಸುವುದು ಪ್ರಜಾಪ್ರಭುತ್ವದ ಹಕ್ಕು, ಆದರೆ ಅವುಗಳ ಘನತೆಗೆ ಧಕ್ಕೆ ತರುವುದು ತಪ್ಪಾಗಿದೆ ಎಂದು ನಿವೃತ್ತ ನ್ಯಾಯಾಧೀಶರು ಪ್ರತಿಪಾದಿಸಿದ್ದಾರೆ. ಸಾರ್ವಜನಿಕ ವೇದಿಕೆಗಳಲ್ಲಿ ಸಾಂವಿಧಾನಿಕ ಆಯುಕ್ತರನ್ನು ಪದೇ ಪದೇ “ಕಳ್ಳರು”, “ಕೈಗೊಂಬೆಗಳು” ಎಂದು ಕರೆಯುತ್ತಿರುವುದಕ್ಕೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ವೋಟ್ ಕಳ್ಳತನ’ ಎಂಬ ಆರೋಪಗಳನ್ನು ಮಾಧ್ಯಮ ಗೋಷ್ಠಿಗಳಲ್ಲಿ ಮಾತ್ರ ಮಾಡಲಾಗುತ್ತಿದೆಯೇ ಹೊರತು ನ್ಯಾಯಾಲಯದ ಮುಂದೆ ಯಾವುದೇ ಸಾಕ್ಷ್ಯಾಧಾರಗಳನ್ನು ಸಲ್ಲಿಸುತ್ತಿಲ್ಲ ಎಂದು ನ್ಯಾಯಾಧೀಶರು ಆರೋಪಿಸಿದ್ದಾರೆ. ಚುನಾವಣಾ ಆಯೋಗವು ಅಫಿಡವಿಟ್ ನೀಡುವಂತೆ ಕೋರಿದಾಗ ಯಾರೂ ಸಲ್ಲಿಸುವುದಿಲ್ಲ. ಹಾಗೆಯೇ, ಚುನಾವಣೆಯಲ್ಲಿ ಸೋತಾಗ ಮಾತ್ರ ಇವಿಎಂ ಯಂತ್ರಗಳನ್ನು ದೂಷಿಸಿ, ಗೆದ್ದಾಗ ಅದೇ ಇವಿಎಂಗಳನ್ನು ಪ್ರಶ್ನಿಸದಿರುವ ವಿರೋಧ ಪಕ್ಷಗಳ ದ್ವಂದ್ವ ನೀತಿಯನ್ನು ಅವರು ಪ್ರಶ್ನಿಸಿದ್ದಾರೆ.
In an open letter, 42 former judges have expressed grave concern over attempts to undermine the Election Commission, judiciary and other constitutional institutions.
The signatories have questioned allegations of “vote theft” without supporting evidence, warning that repeatedly branding constitutional authorities as “thieves” and “compromised” risks eroding public trust in democracy.
“Criticism of institutions is a democratic right. Denigration is not,” the letter states.
— Press Trust of India (@PTI_News) October 8, 2026
ಮೃತಪಟ್ಟ ಮತದಾರರ ಹೆಸರುಗಳನ್ನು ತೆಗೆದುಹಾಕುವುದು ಮತ್ತು ಹೊಸ ಮತದಾರರನ್ನು ಸೇರ್ಪಡೆಗೊಳಿಸುವುದು 1950ರ ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 21(3)ರ ಪ್ರಕಾರ ಚುನಾವಣಾ ಆಯೋಗದ ಶಾಸನಬದ್ಧ ಅಧಿಕಾರವಾಗಿದೆ. ಸುಪ್ರೀಂ ಕೋರ್ಟ್ ಕೂಡ ಈ ಪ್ರಕ್ರಿಯೆಯು ಕಾನೂನುಬದ್ಧವಾಗಿದೆ ಎಂದು ಎತ್ತಿಹಿಡಿದಿದೆ.
ಇದನ್ನೂ ಓದಿ: ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮತದಾನದ ಪ್ರಕ್ರಿಯೆಯ ಮೇಲೆಯೇ ಜನರು ನಂಬಿಕೆ ಕಳೆದುಕೊಳ್ಳುವಂತೆ ಪದೇ ಪದೇ ಅಪಪ್ರಚಾರ ಮಾಡುವುದು ಅಪಾಯಕಾರಿ ಎಂದು ಮಾಜಿ ನ್ಯಾಯಾಧೀಶರು ಎಚ್ಚರಿಸಿದ್ದಾರೆ. ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಕಾನೂನುಬದ್ಧವಾಗಿ ನಡೆಯುತ್ತಿರುವ ಕ್ರಮವಾಗಿದ್ದು, ಪಾರದರ್ಶಕ ಮತದಾರರ ಪಟ್ಟಿಯನ್ನು ಖಚಿತಪಡಿಸಿಕೊಳ್ಳಲು ಇದನ್ನು ಕೈಗೊಳ್ಳಲಾಗಿದೆ. ಈ ಪ್ರಕ್ರಿಯೆಯನ್ನು ಅಸಂವಿಧಾನಿಕ ಎಂದು ಬಿಂಬಿಸುವುದು ಅರಾಜಕತಾವಾದಿ ಶಕ್ತಿಗಳಿಗೆ ಪ್ರಚೋದನೆ ನೀಡಿದಂತಾಗುತ್ತದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
42 former judges write an open letter and warn against attempts to undermine Election Commission. https://t.co/2nwEuTXIdF
— Press Trust of India (@PTI_News) October 8, 2026
ರಾಜಕೀಯ ಪಕ್ಷಗಳು ಚುನಾವಣೆಯಲ್ಲಿ ಸ್ಪರ್ಧಿಸಲಿ, ಆದರೆ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರಬಾರದು. ಅದೇ ರೀತಿ ಮಾಧ್ಯಮಗಳು ಕೂಡ ದೃಢೀಕರಿಸದ ಆರೋಪಗಳನ್ನು ದೊಡ್ಡದಾಗಿ ಬಿತ್ತರಿಸಬಾರದು ಎಂದು ಪತ್ರದ ಮೂಲಕ ಮನವಿ ಮಾಡಲಾಗಿದೆ. “ಸಾಂವಿಧಾನಿಕ ಸಂಸ್ಥೆಗಳು ಯಾವುದೇ ಸರ್ಕಾರಕ್ಕೆ ಸೇರಿದ್ದಲ್ಲ, ಅವು ಭಾರತದ ಜನತೆಗೆ ಸೇರಿದ್ದು” ಎಂದು ಹೇಳುವ ಮೂಲಕ ಬಹಿರಂಗ ಪತ್ರದಲ್ಲಿ ತಿಳಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ