ಪಶ್ಚಿಮ ಬಂಗಾಳದಲ್ಲಿ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತರ ಕುಟುಂಬದ ನೋವು ಮಮತಾ ಬ್ಯಾನರ್ಜಿಗೆ ಅರ್ಥವಾಗುತ್ತದೆಯೇ: ಅಮಿತ್ ಶಾ ಪ್ರಶ್ನೆ

Amit Shah in West Bengal: ದೀದಿ ನೀವು ಕಾಲು ನೋವಿನಿಂದಾಗಿ ಗಾಲಿ ಕುರ್ಚಿಯಲ್ಲಿ ಸುತ್ತಾಡುತ್ತೀದ್ದೀರಿ. ಆದರೆ ಪಶ್ಚಿಮ ಬಂಗಾಳದಲ್ಲಿ ಹತ್ಯೆಗೀಡಾಗಿರುವ 130 ಬಿಜೆಪಿ ಕಾರ್ಯಕರ್ತರ ಅಮ್ಮಂದಿರ ನೋವು ನಿಮಗೆ ಅರ್ಥವಾಗುವುದೇ ಎಂದು ಕೇಳಿದ್ದಾರೆ ಅಮಿತ್ ಶಾ.

ಪಶ್ಚಿಮ ಬಂಗಾಳದಲ್ಲಿ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತರ ಕುಟುಂಬದ ನೋವು ಮಮತಾ ಬ್ಯಾನರ್ಜಿಗೆ ಅರ್ಥವಾಗುತ್ತದೆಯೇ: ಅಮಿತ್ ಶಾ ಪ್ರಶ್ನೆ
ಅಮಿತ್ ಶಾ
Follow us
ರಶ್ಮಿ ಕಲ್ಲಕಟ್ಟ
|

Updated on: Mar 15, 2021 | 4:49 PM

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸೋಮವಾರ ಚುನಾವಣೆ ಪ್ರಚಾರ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಮತಾ ಬ್ಯಾನರ್ಜಿ ನೋವಿನಲ್ಲಿದ್ದಾರೆ. ಆದರೆ ಪಶ್ಚಿಮ ಬಂಗಾಳದಲ್ಲಿ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತರ ಕುಟುಂಬದವರ ನೋವು ಅವರಿಗೆ ಅರ್ಥವಾಗುತ್ತದೆಯೇ ಎಂದು ಪ್ರಶ್ನಿಸಿದ್ದಾರೆ. ಬಂಕುರಾದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ,  ಮಮತಾಜೀ ಅವರಿಗೆ ಕಾಲಿಗೆ ಗಾಯವಾಗಿದೆ. ಅದು ಹೇಗಾಯ್ತು ಎಂಬುದು ಗೊತ್ತಿಲ್ಲ. ಅದೊಂದು ಸಂಚು ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ. ಆದರೆ ಅದು ಅಪಘಾತ ಎಂದು ಚುನಾವಣಾ ಆಯೋಗ ಹೇಳಿದೆ. ದೀದಿ ನೀವು ಕಾಲು ನೋವಿನಿಂದಾಗಿ ಗಾಲಿ ಕುರ್ಚಿಯಲ್ಲಿ ಸುತ್ತಾಡುತ್ತೀದ್ದೀರಿ. ಆದರೆ ಪಶ್ಚಿಮ ಬಂಗಾಳದಲ್ಲಿ ಹತ್ಯೆಗೀಡಾಗಿರುವ 130 ಬಿಜೆಪಿ ಕಾರ್ಯಕರ್ತರ ಅಮ್ಮಂದಿರ ನೋವು ನಿಮಗೆ ಅರ್ಥವಾಗುವುದೇ ಎಂದು ಅಮಿತ್ ಶಾ ಕೇಳಿದ್ದಾರೆ.

ನಂದಿಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾಗ ತನ್ನ ಮೇಲೆ ದಾಳಿ ನಡೆದಿದೆ ಎಂದು ಮಮತಾ ಆರೋಪಿಸಿದ್ದರು. ಈ ಘಟನೆಯಲ್ಲಿ ಮಮತಾ ಅವರ ಕಾಲಿಗೆ ಗಾಯಗಳಾಗಿದ್ದು, ಗಾಲಿ ಕುರ್ಚಿಯಲ್ಲಿ ಕುಳಿತುಕೊಂಡೇ ಅವರು ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಮಮತಾಜೀ  ಶೀಘ್ರ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಹಿಂಸಾಚಾರದಲ್ಲಿ ಸಾವಿಗೀಡಾದ ನಮ್ಮ ಕಾರ್ಯಕರ್ತರ ಬಗ್ಗೆಯೂ ನೀವು ಮಾತನಾಡಿದರೆ ಚೆನ್ನಾಗಿರುತ್ತಿತ್ತು ಎಂದಿದ್ದಾರೆ ಅಮಿತ್ ಶಾ.

ಇದೇ ಹೊತ್ತಿಗೆ ಪುರುಲಿಯಾದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ ನನ್ನ ಕಾಲಿಗೆ ಗಾಯವಾದ ಕಾರಣ ನಾನು ಹೊರಗಿಳಿಯಲಾರೆ ಎಂದು ಕೆಲವರು ಭಾವಿಸಿದ್ದರು. ನಾನು ಬದುಕಿದ್ದು ನನ್ನ ಪುಣ್ಯ. ನನ್ನ ಕಾಲಿಗೆ ಪ್ಲಾಸ್ಟರ್ ಹಾಕಿದ್ದು, ನನಗೆ ನಡೆಯಲು ಸಾಧ್ಯವಾಗುತ್ತಿಲ್ಲ. ನನ್ನ ನೋವಿಗಿಂತ ಜನರ ನೋವು ದೊಡ್ಡದು ಎಂದಿದ್ದಾರೆ.

ಮಮತಾ ಬ್ಯಾನರ್ಜಿ ಅವರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪವನ್ನು ತಳ್ಳಿ ಹಾಕಿದ ಚುನಾವಣಾ ಆಯೋಗ ಅದೊಂದು ಅಪಘಾತ ಎಂದಿತ್ತು. ಮಮತಾ ಅವರಿಗೆ ಸರಿಯಾದ ಭದ್ರತೆ ಇರಲಿಲ್ಲ, ಮುಖ್ಯಮಂತ್ರಿಯವರ ಭದ್ರತಾ ವ್ಯವಸ್ಥೆಯಲ್ಲಿ ಲೋಪವುಂಟಾಗಿದೆ ಎಂದು ಚುನಾವಣಾ ಆಯೋಗ ಭಾನುವಾರ ಹೇಳಿತ್ತು.

ಬಿಜೆಪಿ ಅಧಿಕಾರಕ್ಕೇರಿದರೆ ಏಳನೇ ವೇತನ ಆಯೋಗ ಜಾರಿಗೆ ತರುತ್ತೇವೆ ಪಶ್ಚಿಮ ಬಂಗಾಳದ ರಾಣಿಬಂದ್​ನಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೇರಿದರೆ ಏಳನೇ ವೇತನ ಆಯೋಗ ಜಾರಿಗೆ ತರುವುದಾಗಿ ಹೇಳಿದ್ದಾರೆ.  ಮಾ- ಮಾಟಿ- ಮಾನುಷ್ (ಅಮ್ಮ ಭೂಮಿ ಮನುಷ್ಯ) ಸರ್ಕಾರಕ್ಕಾಗಿ ಜನರು ಟಿಎಂಸಿಗೆ ಮತ ಹಾಕಿದರು. ರಾಜಕೀಯ ಗಲಭೆಗಳು ನಿಲ್ಲುತ್ತವೆ ಎಂದು ಅವರು ಭಾವಿಸಿದರೆ ಇಲ್ಲಿ ನಡೆದಿದ್ದು ಅದರ ತದ್ವಿರುದ್ಧ. ಬಂಗಾಳದಲ್ಲಿ ಹಿಂಸಾಚಾರ ಮತ್ತು ಭ್ರಷ್ಟಾಚಾರ ಜಾಸ್ತಿಯಾಗಿದೆ. ಬುಡಕಟ್ಟು ಜನರು ಸರ್ಟಿಫಿಕೇಟ್​ ಪಡೆಯಲು 100 ರೂಪಾಯಿ ಕೊಡಬೇಕು. ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತನ್ನಿ, ಬುಡಕಟ್ಟು ಸಮುದಾಯದ ಜನರು ಸರ್ಟಿಫಿಕೇಟ್​ಗಾಗಿ ಹಣ ನೀಡುವ ಅಗತ್ಯವೇ ಇಲ್ಲ ಎಂದಿದ್ದಾರೆ ಶಾ.

ಅಮಿತ್ ಶಾ ಅವರ ಹೆಲಿಕಾಪ್ಟರ್​ನಲ್ಲಿ ತಾಂತ್ರಿಕ ದೋಷ ತೊಂದರೆ ಕಂಡು ಬಂದ ಕಾರಣ ಝಾರ್​ಗ್ರಾಮ್ ಚುನಾವಣಾ ರ‍್ಯಾಲಿಯನ್ನು ವಿಡಿಯೊ ಸಂವಾದದ ಮೂಲಕ ನಡೆಸಿದ ಶಾ, ರಾಜ್ಯದಲ್ಲಿರುವ ಬುಡಕಟ್ಟು ಜನರ ಅಭಿವೃದ್ಧಿಗಾಗಿ ಬಿಜೆಪಿ ಯೋಜನೆಗಳನ್ನು ತರಲಿದೆ ಎಂದಿದ್ದಾರೆ. ಬುಡಕಟ್ಟು ಸಮುದಾಯದವರನ್ನು ಆತ್ಮ ನಿರ್ಭರ್ ಮಾಡಲು ₹100 ಕೋಟಿ ಅನುದಾನ ನೀಡಲಾಗುವುದು. ಶೇಕಡಾ 70ಕ್ಕಿಂತ ಹೆಚ್ಚು ಅಂಕಗಳಿಸುವ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳಿಗೆ ಶೇಕಡಾ 50ರಷ್ಟು ಆರ್ಥಿಕ ಸಹಾಯ ನೀಡಲಾಗುವುದು ಎಂದಿದ್ದಾರೆ.

ನಾನು ಝಾರ್​ಗ್ರಾಮ್​ಗೆ ಬಂದು ಚುನಾವಣಾ ಪ್ರಚಾರ ನಡೆಸಲು ನಿರ್ಧರಿಸಿದ್ದೆ. ದುರದೃಷ್ಟವಶಾತ್ ನನ್ನ ಹೆಲಿಕಾಪ್ಟರ್ ನಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಹಾಗಾಗಿ ನಿಮ್ಮ ಬಳಿ ಬರಲು ಸಾಧ್ಯವಾಗಲಿಲ್ಲ. ನನ್ನ ಹೆಲಿಕಾಪ್ಟರ್ ನಲ್ಲಿ ಸಮಸ್ಯೆ ಕಾಣಿಕೊಂಡಿದ್ದನ್ನು ನಾನು ಸಂಚು ಎಂದು ಹೇಳಲಾರೆ ಎಂದು ಮಮತಾ ಬ್ಯಾನರ್ಜಿ ಬಗ್ಗೆ ಲೇವಡಿ ಮಾಡಿದ್ದಾರೆ.

ಇದನ್ನೂ  ಓದಿ: West Bengal Assembly Elections 2021: ನಾನು ಗಾಯಗೊಂಡ ಹುಲಿ: ಪ್ರಚಾರ ಸಭೆಯಲ್ಲಿ ಅಬ್ಬರಿಸಿದ ಮಮತಾ ಬ್ಯಾನರ್ಜಿ

West Bengal Assembly Elections 2021: ತೃಣಮೂಲ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರಾಗಿ ಯಶವಂತ ಸಿನ್ಹಾ ನೇಮಕ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್