ಫಲಿತಾಂಶ ಒಪ್ಪಿಕೊಳ್ಳಲು ಸಾಧ್ಯವಿಲ್ಲ; ಹರಿಯಾಣ ಮತ ಎಣಿಕೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕಾಂಗ್ರೆಸ್

ಹರಿಯಾಣ ವಿಧಾನಸಭೆ ಚುನಾವಣೆಯ ತೀರ್ಪನ್ನು ಕಾಂಗ್ರೆಸ್ ತಿರಸ್ಕರಿಸಿದ್ದು, ಇವಿಎಂ ದುರ್ಬಳಕೆಯಾಗಿದೆ ಎಂದು ಆರೋಪಿಸಿದೆ. ಹಾಗೇ, ಬಿಜೆಪಿ ಜನಾಭಿಪ್ರಾಯವನ್ನು ಬುಡಮೇಲು ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಈ ಬಗ್ಗೆ ಸುದ್ದಿಗೋಷ್ಠಿಯನ್ನು ನಡೆಸಿದ್ದಾರೆ.

ಫಲಿತಾಂಶ ಒಪ್ಪಿಕೊಳ್ಳಲು ಸಾಧ್ಯವಿಲ್ಲ; ಹರಿಯಾಣ ಮತ ಎಣಿಕೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕಾಂಗ್ರೆಸ್
ಜೈರಾಮ್ ರಮೇಶ್- ರಾಹುಲ್ ಗಾಂಧಿ

Updated on: Oct 08, 2024 | 6:08 PM

ನವದೆಹಲಿ: ಹರಿಯಾಣದಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಬಹುಮತ ಸಾಧಿಸುವ ಮೂಲಕ ಸರ್ಕಾರ ರಚಿಸಲಿರುವ ಬಿಜೆಪಿ ಈಗಾಗಲೇ ಸಂಭ್ರಮಾಚರಣೆಯಲ್ಲಿ ತೊಡಗಿದೆ. ಹರಿಯಾಣ ಚುನಾವಣಾ ಫಲಿತಾಂಶದ ಬಗ್ಗೆ ಇಂದು ಸಂಜೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಇಂದು ಮಧ್ಯಾಹ್ನ ನಾನು ಚುನಾವಣಾ ಆಯೋಗದೊಂದಿಗೆ ಸಂಪರ್ಕದಲ್ಲಿದ್ದೆ. ನನ್ನ ದೂರಿಗೆ ಚುನಾವಣಾ ಆಯೋಗವು ಉತ್ತರಿಸಿದೆ. ನಾನು ಆ ಉತ್ತರಕ್ಕೆ ಉತ್ತರಿಸಿದ್ದೇನೆ. ಎಣಿಕೆಯ ಪ್ರಕ್ರಿಯೆ, ಕನಿಷ್ಠ 3 ಜಿಲ್ಲೆಗಳಲ್ಲಿ ಇವಿಎಂಗಳ ಕಾರ್ಯನಿರ್ವಹಣೆಯ ಕುರಿತು ನಾವು ಅತ್ಯಂತ ಗಂಭೀರವಾದ ದೂರುಗಳನ್ನು ಸ್ವೀಕರಿಸಿದ್ದೇವೆ. ಈ ಮಾಹಿತಿಯನ್ನು ನಾವು ಸಂಗ್ರಹಿಸುತ್ತಿದ್ದೇವೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಹರಿಯಾಣದಲ್ಲಿ ಫಲಿತಾಂಶಗಳು ಸಂಪೂರ್ಣವಾಗಿ ಅನಿರೀಕ್ಷಿತ, ಆಶ್ಚರ್ಯಕರ ಮತ್ತು ಅರ್ಥಗರ್ಭಿತವಾಗಿವೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ. “ಇದು ನೆಲದ ವಾಸ್ತವಕ್ಕೆ ವಿರುದ್ಧವಾಗಿದೆ” ಅವರು ಹೇಳಿದ್ದಾರೆ.

ಇದನ್ನೂ ಓದಿ: Haryana Results: ಹರಿಯಾಣದಲ್ಲೂ ಸಿಎಂ ಅಭ್ಯರ್ಥಿಯ ಆಯ್ಕೆಯಲ್ಲಿ ಪ್ರಯೋಗ ಮಾಡಿ ಗೆದ್ದ ಬಿಜೆಪಿ

“ಹರಿಯಾಣದಲ್ಲಿ ಫಲಿತಾಂಶಗಳು ಸಂಪೂರ್ಣವಾಗಿ ಅನಿರೀಕ್ಷಿತ ಮತ್ತು ಸ್ವೀಕಾರಾರ್ಹವಲ್ಲ. ಹಿಸಾರ್, ಮಹೇಂದ್ರಗಢ ಮತ್ತು ಪಾಣಿಪತ್‌ನಿಂದ ಇವಿಎಂಗಳಲ್ಲಿನ ವ್ಯತ್ಯಾಸದ ಕುರಿತು ನಮಗೆ ಅನೇಕ ದೂರುಗಳು ಬರುತ್ತಿವೆ. ನಮ್ಮ ಅಭ್ಯರ್ಥಿಗಳು ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ನಾವು ಈ ಎಲ್ಲಾ ದೂರುಗಳನ್ನು ಚುನಾವಣಾ ಆಯೋಗಕ್ಕೆ ನೀಡುತ್ತಿದ್ದೇವೆ” ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಹೇಳಿದ್ದಾರೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ