ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಭಾರತದಿಂದ ತೆರಳುವುದು ಮತ್ತಷ್ಟು ವಿಳಂಬ

ದೆಹಲಿಯಲ್ಲಿ ನಡೆದ ಜಿ-20 ಶೃಂಗಸಭೆಗೆ ಭಾರತಕ್ಕೆ ಆಗಮಿಸಿದ್ದ ಕೆನಾಡ ಪ್ರಧಾನಿ ಜಸ್ಟಿನ್ ಟ್ರುಡೊ ಸಭೆ ಮುಗಿಸಿ ಅವರು ಭಾನುವಾರ ಸಂಜೆ ಕೆನಾಡಕ್ಕೆ ಹೋಗಬೇಕಿತ್ತು. ಆದರೆ ತಮ್ಮ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ಭಾರತದಲ್ಲಿ ಉಳಿಯುವಂತಾಗಿತ್ತು. ಆದರೆ ಸೋಮವಾರ ಅವರನ್ನು ಕರೆದುಕೊಂಡು ಹೋಗಲು ಬಂದಿದ್ದ CC-150 ಪೋಲಾರಿಸ್ ವಿಮಾನ ಲಂಡನ್​​​ನಲ್ಲಿ ಇಳಿದಿದೆ. ಇದೀಗ ಮತ್ತೆ ಜಸ್ಟಿನ್ ಟ್ರುಡೊ ಮತ್ತೆ ಭಾರತದಲ್ಲಿ ಉಳಿದಿದ್ದು, ಭಾರತದಿಂದ ತೆರಳುವುದು ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಭಾರತದಿಂದ ತೆರಳುವುದು ಮತ್ತಷ್ಟು ವಿಳಂಬ
ಕೆನಾಡ ಪ್ರಧಾನಿ ಜಸ್ಟಿನ್ ಟ್ರುಡೊ
Follow us
ಅಕ್ಷಯ್​ ಪಲ್ಲಮಜಲು​​
|

Updated on:Sep 12, 2023 | 12:12 PM

ದೆಹಲಿ, ಸೆ.12: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಜಿ-20 ಶೃಂಗಸಭೆಗೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ( Justin Trudeau) ಅವರು ಭಾರತಕ್ಕೆ ಬಂದಿದ್ದರು. ಎರಡು ದಿನಗಳು ಶೃಂಗಸಭೆಯನ್ನು ಮುಗಿಸಿ ಅವರು ಭಾನುವಾರ ಸಂಜೆ ಕೆನಡಾಕ್ಕೆ ಹೋಗಬೇಕಿತ್ತು. ಆದರೆ ಅವರನ್ನು ಕರೆದುಕೊಂಡು ಹೋಗಲು ಬಂದಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾಗಿದ್ದು, ಕೆನಡಾಕ್ಕೆ ಹೋಗಲು ಸಾಧ್ಯವಾಗದೇ ಭಾರತದಲ್ಲಿಯೇ ಉಳಿದಿದ್ದರು. ನಂತರ ಸೋಮವಾರ ರಾತ್ರಿ 10 ಗಂಟೆಗೆ ಕೆನಾಡದಿಂದ ಎರಡನೇ ವಿಮಾನ ಭಾರತವನ್ನು ತಲುಪುವ ನಿರೀಕ್ಷೆಯಿತ್ತು. ಆದರೆ ಇದೀಗ ಅದನ್ನು ಕೂಡ ಲಂಡನ್​​ನಲ್ಲಿ ಇಳಿಸಲಾಗಿದೆ.

ಕೆನಡಾದ ಸಶಸ್ತ್ರ ಪಡೆಗಳು ತನ್ನ CC-150 ಪೋಲಾರಿಸ್ ವಿಮಾನವನ್ನು ಪ್ರಧಾನಿ ಜಸ್ಟಿನ್ ಟ್ರುಡೊ ಕರೆತರಲು ಭಾರತಕ್ಕೆ ಸೋಮವಾರ ಕಳುಹಿಸಲಾಗಿದೆ. ರೋಮ್ ಮೂಲಕ ಬರಬೇಕಿದ್ದ ಈ ವಿಮಾನ ಲಂಡನ್​​ನಲ್ಲಿ​​ ತುರ್ತು ಲ್ಯಾಂಡ್​​ ಆಗಿದೆ ಎಂದು ಸಿಬಿಸಿ ನ್ಯೂಸ್ ವರದಿ ಮಾಡಿದೆ. ಆದರೆ ಈ ವಿಮಾನವನ್ನು ಲಂಡನ್​​ನಲ್ಲಿ ಇಳಿಸಲು ಕಾರಣ ಏನು? ಎಂಬ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ. ಇದೀಗ ಮತ್ತೆ ಜಸ್ಟಿನ್ ಟ್ರುಡೊ ಅವರು ತಮ್ಮ ತವರು ದೇಶಕ್ಕೆ ಹೋಗುವುದು ಮತ್ತಷ್ಟು ತಡವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇದನ್ನೂ ಓದಿ:ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ: ದೆಹಲಿಯಲ್ಲೇ ಉಳಿದ ನಿಯೋಗ

ಜಸ್ಟಿನ್ ಟ್ರುಡೊ ಜತೆಗೆ ಅವರು ಮಗ ಕೂಡ ಭಾರತಕ್ಕೆ ಬಂದಿದ್ದು, ಇದೀಗ ಇಬ್ಬರು ಕೂಡ ಭಾರತದಲ್ಲೇ ಉಳಿಯುವಂತಾಗಿ , ಈ ಕಾರಣದಿಂದ ಸೂಕ್ತ ವಿಮಾನ ವ್ಯವಸ್ಥೆ ಮಾಡಲಾಗುವುದು ಎಂದು ಕೆನಡಾ ತಿಳಿಸಿದೆ. ಜಸ್ಟಿನ್ ಟ್ರುಡೊ ಬಳಸುವ ವಿಮಾನವು 36 ವರ್ಷ ಹಳೆಯದಾಗಿದೆ ಮತ್ತು ಈ ಹಿಂದೆಯೂ ಸಹ ಸಮಸ್ಯೆಗಳನ್ನು ಉಂಟುಮಾಡಿದೆ.

ಅಕ್ಟೋಬರ್ 2016ರಲ್ಲಿ, ಈ ವಿಮಾನವು ಬೆಲ್ಜಿಯಂಗೆ ಟೇಕ್ ಆಫ್ ಆದ ಅರ್ಧ ಗಂಟೆಯ ನಂತರ ಒಟ್ಟಾವಾಗೆ ಮರಳಿತು. ಆ ವಿಮಾನವು 16 ತಿಂಗಳುಗಳ ಕಾಲವರೆಗೆ ಯಾವುದೇ ಪ್ರಯಾಣವನ್ನು ಮಾಡಿಲ್ಲ ಎಂದು ಹೇಳಲಾಗಿದೆ. ಇನ್ನು ಈ ಬಗ್ಗೆ ಕೆನಾಡ ವಿರೋಧ ಪಕ್ಷದ ನಾಯಕ ಪಿಯರೆ ಪೊಯಿಲಿವ್ರೆ ಅವರು ಟೀಕಿಸಿದ್ದು, ಇದು ಅವರು ಅನುಭವಿಸಬೇಕಾದ ಸಂಕಷ್ಟ, ಇನ್ನು ಈ ಒತ್ತಡವನ್ನು ದೇಶದ ಜನರ ಮೇಲೆ ಹಾಕುತ್ತಾರೆ ಎಂದು ಹೇಳಿದ್ದಾರೆ. ವಿಮಾನದ ವ್ಯವಸ್ಥೆಯಲ್ಲಿ ಉಂಟಾದ ಸಮಸ್ಯೆಯಿಂದ ಮತ್ತೆ ಭಾರತದಲ್ಲಿ ಉಳಿಯಬೇಕಾಗಿದೆ. ಅಲ್ಲಿಯವರೆಗೆ ನವದೆಹಲಿಯ ಲಲಿತ್ ಹೋಟೆಲ್‌ನಲ್ಲಿ ಉಳಿದುಕೊಳ್ಳಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:10 pm, Tue, 12 September 23

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್