ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ; ವಿಭಿನ್ನ ರೀತಿಯಲ್ಲಿ ನಾಮಪತ್ರ ಸಲ್ಲಿಸಿ ಗಮನ ಸೆಳೆದ ಅಭ್ಯರ್ಥಿ

ನಾನು ಮೊದಲು 1994ರಲ್ಲಿ ನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿದೆ. 1995ರಲ್ಲಿ ನಂತರ ಚೇರ್​ಮನ್​ ಪೋಸ್ಟ್​ಗಾಗಿ ಹೋರಾಟ ಮಾಡಿದೆ.  ಆಗ ನನ್ನ ಕೈಯಲ್ಲಿ ದುಡ್ಡು ಇರಲಿಲ್ಲ ಎಂದು ವೈಧರಾಜ್ ಕಿಶನ್ ತಿಳಿಸಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ; ವಿಭಿನ್ನ ರೀತಿಯಲ್ಲಿ ನಾಮಪತ್ರ ಸಲ್ಲಿಸಿ ಗಮನ ಸೆಳೆದ ಅಭ್ಯರ್ಥಿ
ಪಿಪಿಇ ಕಿಟ್​ ಧರಿಸಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿ
Follow us
TV9 Web
| Updated By: Lakshmi Hegde

Updated on: Jan 25, 2022 | 9:48 PM

ಶಹಜಾನ್​ಪುರ: ಉತ್ತರಪ್ರದೇಶದ ವಿಧಾನಸಭೆ ಚುನಾವಣೆ (Uttar Pradesh Assembly Elction) ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಹಾಗೇ, ಉತ್ತರಪ್ರದೇಶದ ಶಹಜಾನ್​ಪುರ ವಿಧಾನಸಭಾ ಕ್ಷೇತ್ರದ, ಸಂಯುಕ್ತ ವಿಕಾಸ್​ ಪಾರ್ಟಿ ಅಭ್ಯರ್ಥಿ ವೈಧರಾಜ್ ಕಿಶನ್ ಕೂಡ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಅವರು ನಾಮಪತ್ರ ಸಲ್ಲಿಸಿದ್ದು ಸಖತ್​ ಸುದ್ದಿಯಾಗಿದೆ. ವೈಧರಾಜ್​ ಕಿಶನ್​ ಅವರು ಪಿಪಿಇ ಕಿಟ್​ ಧರಿಸಿ, ಕೈಯಲ್ಲಿ ಸ್ಯಾನಿಟೈಸರ್​ ಮತ್ತು ಥರ್ಮಲ್​ ಸ್ಕ್ಯಾನರ್​ ಹಿಡಿದು ನಾಮಪತ್ರ ಸಲ್ಲಿಸಿದ್ದೇ ಹೀಗೆ ಸುದ್ದಿಯಾಗಲು ಕಾರಣ.   ಇದುವರೆಗೆ 18 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಇವರೀಗ 19ನೇ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ವೈಧರಾಜ್ ಕೇವಲ ಶಹಜಾನ್​ಪುರದಿಂದ ಮಾತ್ರವಲ್ಲ, ಯೋಗಿ ಆದಿತ್ಯನಾಥ್​ ಸ್ಪರ್ಧಿಸುತ್ತಿರುವ ಗೋರಖ್​ಪುರ ವಿಧಾನಸಭಾ ಕ್ಷೇತ್ರದಿಂದಲೂ ಕಣಕ್ಕಿಳಿಯಲಿದ್ದಾರೆ. ಅಲ್ಲಿ ಕೂಡ ಶೀಘ್ರದಲ್ಲೇ ನಾಮಪತ್ರ ಸಲ್ಲಿಸಲಿದ್ದಾರೆ.  

ನೀವ್ಯಾಕೆ ಪಿಪಿಇ ಕಿಟ್​ ಧರಿಸಿ ನಾಮಪತ್ರ ಸಲ್ಲಿಸಲು ಬಂದಿದ್ದೀರಿ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಎದುರು ಮೊದಲು ಯಾರು ಬರುತ್ತಾರೋ ಮೊದಲು ಅವರ ದೇಹದ ತಾಪಮಾನ ಚೆಕ್​ ಮಾಡುತ್ತೇನೆ. ಅದಕ್ಕಾಗಿಯೇ ಥರ್ಮಲ್​ ಸ್ಕ್ಯಾನರ್​ ಹಿಡಿದಿದ್ದೇನೆ. ಇನ್ನು ನನ್ನನ್ನು ನಾನು ಕೊರೊನಾದಿಂದ ರಕ್ಷಿಸಿಕೊಳ್ಳುವ ಸಲುವಾಗಿ ಪಿಪಿಇ ಕಿಟ್ ಧರಿಸಿದ್ದೇನೆ. ಸ್ಯಾನಿಟೈಸರ್​ ಕೈ ಸ್ವಚ್ಛಗೊಳಿಸಿಕೊಳ್ಳಲು ಬೇಕಾಗುತ್ತದೆ ಎಂದು ಹೇಳಿದರು.

ನಂತರ ತಮ್ಮ ಚುನಾವಣೆ ದಾರಿಯ ಬಗ್ಗೆ ವಿವರಿಸಿದ ಅವರು, ನಾನು ಮೊದಲು 1994ರಲ್ಲಿ ನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿದೆ. 1995ರಲ್ಲಿ ನಂತರ ಚೇರ್​ಮನ್​ ಪೋಸ್ಟ್​ಗಾಗಿ ಹೋರಾಟ ಮಾಡಿದೆ.  ಆಗ ನನ್ನ ಕೈಯಲ್ಲಿ ದುಡ್ಡು ಇರಲಿಲ್ಲ. ಹೀಗಾಗಿ ಮತ ಕೇಳುವ ಜತೆ, ಹಣವನ್ನೂ ಕೇಳುತ್ತಿದ್ದೆ.  ನಂತರ ಚುನಾವಣೆಯಲ್ಲಿ 8 ಸಾವಿರ ಮತಗಳು ಬಂದವು. 1.5 ಲಕ್ಷ ರೂಪಾಯಿ ನಗದು ಸಂಗ್ರಹವಾಯಿತು. ಇದು ನನ್ನ 19ನೇ ಚುನಾವಣೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೇಡವೆಂದರೂ ತಲೆಗೆ ಸುತ್ತಿದ ರುಮಾಲನ್ನು ಕಿತ್ತು ಬಿಸಾಡಿದ ಸಿದ್ದರಾಮಯ್ಯ ಆಮೇಲೆ ತಮ್ಮ ಕ್ರಾಪು ಸರಿಮಾಡಿಕೊಂಡರು!!

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ