AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಗೆ ಇಷ್ಟವಿಲ್ಲದಿದ್ದರೆ 30ನೇ ವಾರದಲ್ಲೂ ಗರ್ಭಪಾತ ಮಾಡಿಸಿಕೊಳ್ಳಬಹುದು; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಭಾರತದಲ್ಲಿ 20 ವಾರಗಳವರೆಗೆ ಮಾತ್ರ ಗರ್ಭಪಾತಕ್ಕೆ ಕಾನೂನಿನಲ್ಲಿ ಅನುಮತಿಯಿದೆ. 5 ತಿಂಗಳು ತುಂಬಿದ ಬಳಿಕ ಗರ್ಭಪಾತ ಮಾಡಿಸಿಕೊಳ್ಳುವುದಕ್ಕೆ ಅನುಮತಿಯಿಲ್ಲ. ಆದರೆ, ಕೆಲವು ವೈದ್ಯಕೀಯ ಪರಿಸ್ಥಿತಿಯಲ್ಲಿ ಮಾತ್ರ 6 ತಿಂಗಳವರೆಗೆ ವಿಶೇಷ ಅನುಮತಿ ಪಡೆದು ಗರ್ಭಪಾತಕ್ಕೆ ಅನುಮತಿ ನೀಡಲಾಗುತ್ತದೆ. ಇದೀಗ ಸುಪ್ರೀಂ ಕೋರ್ಟ್​ ಮಹತ್ವದ ತೀರ್ಪೊಂದನ್ನು ನೀಡಿದ್ದು, 30 ವಾರಗಳ ಗರ್ಭವನ್ನು ಕೂಡ ತೆಗೆಸುವ ಹಕ್ಕು ಗರ್ಭಿಣಿಗಿರುತ್ತದೆ ಎಂದು ಹೇಳಿದೆ.

ಮಹಿಳೆಗೆ ಇಷ್ಟವಿಲ್ಲದಿದ್ದರೆ 30ನೇ ವಾರದಲ್ಲೂ ಗರ್ಭಪಾತ ಮಾಡಿಸಿಕೊಳ್ಳಬಹುದು; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
AbortionImage Credit source: iStock
ಸುಷ್ಮಾ ಚಕ್ರೆ
|

Updated on:Feb 06, 2026 | 4:23 PM

Share

ನವದೆಹಲಿ, ಫೆಬ್ರವರಿ 6: ಒಂದುವೇಳೆ ಗರ್ಭಿಣಿಗೆ ಏಳೂವರೆ ತಿಂಗಳು (30 ವಾರ) ತುಂಬಿದ ಬಳಿಕವೂ ಆ ಮಗು ಬೇಡವೆನಿಸಿದರೆ ಗರ್ಭಪಾತ (Abortion) ಮಾಡಿಸುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಭಾರತದಲ್ಲಿ 5 ತಿಂಗಳವರೆಗೆ ಮಾತ್ರ ಗರ್ಭಪಾತಕ್ಕೆ ಅನುಮತಿಯಿದೆ. ಆದರೆ, ಇದೀಗ ವಿಶೇಷ ಪ್ರಕರಣವೊಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ. ಹುಟ್ಟದೇ ಇರುವ ಮಗುವಿನ ಹಕ್ಕಿಗಿಂತಲೂ ತಾಯಿಯ ಹಕ್ಕು ಬಹಳ ಮುಖ್ಯ ಎಂದು ಹೇಳಿರುವ ನ್ಯಾಯಪೀಠ ಮಹಿಳೆಯನ್ನು ತಾಯಿಯಾಗಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಮದುವೆಯಾದ ಮಹಿಳೆಯಾಗಲಿ, ಮದುವೆಯಾಗದ ಯುವತಿಯಾಗಲಿ ಅಥವಾ ಅಪ್ರಾಪ್ತೆಯೇ ಆಗಲಿ ಅನಗತ್ಯ ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಕಾನೂನಿಗೂ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಪ್ರಾಪ್ತ ವಯಸ್ಕಳಾಗಿದ್ದಾಗ ಗರ್ಭ ಧರಿಸಿದ ಹುಡುಗಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸಲು ಅನುಮತಿ ನೀಡಿದ ಸುಪ್ರೀಂ ಕೋರ್ಟ್ ಈ ಹೇಳಿಕೆಗಳನ್ನು ನೀಡಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ನ್ಯಾಯಪೀಠವು ಗರ್ಭಿಣಿ ಹುಡುಗಿಯ ಸಂತಾನೋತ್ಪತ್ತಿ ಸ್ವಾಯತ್ತತೆಗೆ ಸರಿಯಾದ ಪ್ರಾಮುಖ್ಯತೆಯನ್ನು ನೀಡಬೇಕು ಎಂದು ಒತ್ತಿ ಹೇಳಿದೆ. ವಿಶೇಷವಾಗಿ ಅವಳಿಗೆ ಮಗುವನ್ನು ಹೆರಲು ಇಷ್ಟವಿಲ್ಲವೆಂದು ಸ್ಪಷ್ಟವಾಗಿ ಹೇಳುತ್ತಿರುವಾಗ ಆ ಮಗುವನ್ನು ಹೆರಲೇಬೇಕೆಂದು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಹೇಳಲಾಗಿದೆ.

ಇದನ್ನೂ ಓದಿ: ಮಗುವಿಗೆ ಜನ್ಮ ನೀಡಿದ 8ನೇ ಕ್ಲಾಸ್ ಬಾಲಕಿ; ಹಾಸ್ಟೆಲ್​ನಲ್ಲಿದ್ದ ಬಾಲಕಿ ಗರ್ಭಿಣಿಯಾಗಿದ್ದು ಹೇಗೆ?

ಅರ್ಜಿ ಸಲ್ಲಿಸಿರುವ ಅಪ್ರಾಪ್ತ ಯುವತಿಯ ವಯಸ್ಸು ಮತ್ತು ಆಕೆಯ ಹಕ್ಕನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಪು ನೀಡಲಾಗಿದೆ. ಈ ಪ್ರಕರಣದಲ್ಲಿ ಆ ಯುವತಿಯದ್ದು ಉದ್ದೇಶಪೂರ್ವಕವಾದ ಗರ್ಭಧಾರಣೆ ಅಲ್ಲದ ಕಾರಣದಿಂದ ಮತ್ತು ಆ ಹುಡುಗಿ ಮಗುವನ್ನು ಹೆರಲು ಬಯಸದ ಕಾರಣದಿಂದ ಆಕೆಗೆ ಗರ್ಭಪಾತಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಕೋರ್ಟ್ ಹೇಳಿದೆ.

ಇದನ್ನೂ ಓದಿ: ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ಅಪ್ಪ; ಡಿಎನ್​ಎ ಪರೀಕ್ಷೆಯಲ್ಲಿ ಸತ್ಯ ಬಯಲು

ಆ ಹುಡುಗಿ 17ನೇ ವಯಸ್ಸಿನಲ್ಲಿ ಗರ್ಭ ಧರಿಸಿದ್ದಳು. ಆಕೆಗೆ ಈಗ 18 ವರ್ಷ. ಈಗ ಆಕೆಯ ಗರ್ಭಧಾರಣೆಯು 30 ವಾರಗಳನ್ನು ತಲುಪಿತ್ತು. ಸ್ನೇಹಿತನೊಂದಿಗಿನ ಸಂಬಂಧದಿಂದ ಆಕೆ ಗರ್ಭಿಣಿಯಾಗಿದ್ದು, ಮದುವೆಯಾಗದೆ ಗರ್ಭಧಾರಣೆಯನ್ನು ಮುಂದುವರಿಸುವುದು ಆ ಹುಡುಗಿಗೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಆಘಾತಕಾರಿಯಾಗಿದೆ ಎಂದು ವಾದಿಸಲಾಗಿತ್ತು. ಹೀಗಾಗಿ, ವೈದ್ಯಕೀಯ ಮಂಡಳಿಯ ವರದಿಯನ್ನು ಪರಿಶೀಲಿಸಿದ ನಂತರ, ಈ ಸಮಯದಲ್ಲಿ ಗರ್ಭಪಾತಕ್ಕೆ ಅನುಮತಿಸಿದರೆ ಆ ಹುಡುಗಿಗೆ ಯಾವುದೇ ಗಂಭೀರ ಅಪಾಯ ಆಗುವುದಿಲ್ಲ ಎಂದು ಪೀಠ ಗಮನಿಸಿತು. ಹೀಗಾಗಿ, ಆಕೆ ಬಯಸಿದರೆ ಗರ್ಭಪಾತಕ್ಕೆ ಅನುಮತಿ ನೀಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:13 pm, Fri, 6 February 26

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?