ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ನೀಡಲು ಸಾಧ್ಯವಿಲ್ಲ: ಸುಪ್ರೀಂ

|

Updated on: Mar 21, 2024 | 12:07 PM

ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಲೋಕಸಭೆ ಚುನಾವಣೆ ಘೋಷಣೆಯಾಗಿದೆ. ಈ ಸಮಯದಲ್ಲಿ ನಾವು ಈ ರೀತಿ ಮಾಡಿದರೆ ಅವ್ಯವಸ್ಥೆಯನ್ನು ಸೃಷ್ಟಿಸುತ್ತದೆ ಎಂದು ಸುಪ್ರೀಂ ಹೇಳಿದೆ.

ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ನೀಡಲು ಸಾಧ್ಯವಿಲ್ಲ: ಸುಪ್ರೀಂ
ಸುಪ್ರೀಂಕೋರ್ಟ್
Follow us on

ದೆಹಲಿ, ಮಾ,21: ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಇಂದು (ಮಾ.21) ಸುಪ್ರೀಂ ಕೋರ್ಟ್ ಹೇಳಿದೆ. ಲೋಕಸಭೆ ಚುನಾವಣೆ ಘೋಷಣೆಯಾಗಿದೆ. ಈ ಸಮಯದಲ್ಲಿ ನಾವು ಈ ರೀತಿ ಮಾಡಿದರೆ ಅವ್ಯವಸ್ಥೆಯನ್ನು ಸೃಷ್ಟಿಸುತ್ತದೆ ಎಂದು ಸುಪ್ರೀಂ ಹೇಳಿದೆ. ಆಯ್ಕೆ ಸಮಿತಿಯಲ್ಲಿ ಬದಲಾವಣೆಗಳನ್ನು ಮಾಡಿದ ನಂತರ ಅಂದರೆ ಈ ಸಮಿತಿಯಲ್ಲಿ ಸುಪ್ರೀಂ ಕೋರ್ಟ್​​ನ ಮುಖ್ಯ ನ್ಯಾಯಮೂರ್ತಿಗಳನ್ನು ಕೈಬಿಡಲಾಗಿದೆ. ಇನ್ನು ಈಗಾಗಲೇ ನೇಮಕಗೊಂಡ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ವಿರುದ್ಧ ಯಾವುದೇ ಆರೋಪಗಳಿಲ್ಲ ಎಂದು ನ್ಯಾಯಾಲಯವು ಹೇಳಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಚುನಾವಣಾ ಆಯೋಗವು ಕಾರ್ಯಾಂಗ ವ್ಯಾಪ್ತಿಯಲ್ಲಿ ಬರುತ್ತದೆ. ಹಾಗಾಗಿ ನಾವು ಇದನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅರುಣಾಚಲ ಪ್ರದೇಶ ಭಾರತದ ಭೂಪ್ರದೇಶ, ಇದು ಚೀನಾದ ಹಕ್ಕಲ್ಲ: ಯುನೈಟೆಡ್ ಸ್ಟೇಟ್ಸ್

ಕೇಂದ್ರ ಜಾರಿಗೆ ತಂದಿರುವ ಕಾನೂನು ತಪ್ಪು ಎಂದು ಹೇಳಲು ಸಾಧ್ಯವಿಲ್ಲ ಎಂದು ಅರ್ಜಿದಾರರಿಗೆ ಹೇಳಿದೆ. ನೇಮಕಗೊಂಡಿರುವವರ ವಿರುದ್ಧ ಯಾವುದೇ ಆರೋಪಗಳಿಲ್ಲ ಎಂದು ಹೇಳಿದೆ. ಈ ಸಮಯಲ್ಲಿ ನಾವು ತಡೆ ನೀಡಿದರೆ ಅದು ಚುನಾವಣೆ ಮೇಲೆ ಪರಿಣಾಮ ಉಂಟು ಮಾಡುತ್ತದೆ ಎಂದು ಹೇಳಿದೆ.

ಇನ್ನು ಅರ್ಜಿದಾರ ಜಯಾ ಠಾಕೂರ್ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ಹಿರಿಯ ವಕೀಲ ವಿಕಾಸ್ ಸಿಂಗ್, ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿ) ಕಾಯಿದೆ ಪ್ರಕಾರ, 2023ರಲ್ಲಿ ಚುನಾವಣಾ ಆಯುಕ್ತ ನೇಮಕಾತಿಯಲ್ಲಿ ಕಾನೂನಿನ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.

ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಪರವಾಗಿ ವಕೀಲ ಪ್ರಶಾಂತ್ ಭೂಷಣ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಚುನಾವಣಾ ಆಯೋಗ ಆರೋಗ್ಯಕರ ಪ್ರಜಾಪ್ರಭುತ್ವವನ್ನು ಕಾಪಾಡಿಕೊಳ್ಳಲುತ್ತದೆ. ಇದರಲ್ಲಿ ರಾಜಕೀಯ ಮತ್ತು ಕಾರ್ಯಾಂಗದ ಹಸ್ತಕ್ಷೇಪದಿಂದ ಪ್ರತ್ಯೇಕಿಸಬೇಕು ಎಂದು ಹೇಳಿದ್ದಾರೆ. ಮಾಜಿ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖ್ಬೀರ್ ಸಂಧು ಅವರನ್ನು ಗುರುವಾರ ಇಸಿಗಳಾಗಿ ನೇಮಕ ಮಾಡಿದ್ದರಿಂದ ವಿಚಾರಣೆ ಮಹತ್ವ ಪಡೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಅವರನ್ನು ಆಯ್ಕೆ ಮಾಡಲಾಗಿದೆ.

ಫೆಬ್ರವರಿ 14 ರಂದು ಅನುಪ್ ಚಂದ್ರ ಪಾಂಡೆ ಅವರ ನಿವೃತ್ತಿ ಮತ್ತು ಅರುಣ್ ಗೋಯೆಲ್ ಅವರ ಹಠಾತ್ ರಾಜೀನಾಮೆ ನಂತರ ಚುನಾವಣಾ ಆಯೋದಲ್ಲಿ ಎರಡು ಹುದ್ದೆಗಳು ಖಾಲಿಯಾಗಿವೆ. ಎನ್‌ಜಿಒ ಸಿಂಧುತ್ವವನ್ನು ಪ್ರಶ್ನಿಸಿದೆ ಮತ್ತು ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ಕಾಯಿದೆ, 2023 ರ ಸೆಕ್ಷನ್ 7 ರ ಕಾರ್ಯಾಚರಣೆಗೆ ತಡೆ ಕೋರಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published On - 11:42 am, Thu, 21 March 24