AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಪೈಲಟ್​ಗಳ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆಯಿಂದ ಹೆಮ್ಮೆಯಾಗಿದೆ ಎಂದ ಕ್ಯಾಪ್ಟನ್ ಜೋಯಾ ಅಗರ್ವಾಲ್; ಇವರ ಸಾಧನೆಯೇನು?

Captain Zoya Agarwal; ವಿಶ್ವದ ಅತಿ ಉದ್ದದ ವಿಮಾನ ಮಾರ್ಗವಾಗಿರುವ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಿಂದ ಭಾರತದ ಬೆಂಗಳೂರಿಗೆ ಜೋಯಾ ಅಗರ್ವಾಲ್ ಅವರು 2021 ರಿಂದ ವಿಮಾನ ಸಂಚಾರ ನಡೆಸುತ್ತಿದ್ದಾರೆ. ಅವರು 2013 ರಲ್ಲಿ ಬೋಯಿಂಗ್ 777 ಅನ್ನು ಹಾರಾಟ ಮಾಡಲು ಪ್ರಾರಂಭಿಸಿದ್ದರು. ಅಲ್ಲದೆ, ವಿಮಾನ ಹಾರಾಟ ನಡೆಸಿದ ಅತ್ಯಂತ ಕಿರಿಯ ಮಹಿಳೆಯಾಗಿ ಗುರುತಿಸಿಕೊಂಡಿದ್ದಾರೆ.

ಮಹಿಳಾ ಪೈಲಟ್​ಗಳ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆಯಿಂದ ಹೆಮ್ಮೆಯಾಗಿದೆ ಎಂದ ಕ್ಯಾಪ್ಟನ್ ಜೋಯಾ ಅಗರ್ವಾಲ್; ಇವರ ಸಾಧನೆಯೇನು?
ಜೋಯಾ ಅಗರ್ವಾಲ್
ಗಣಪತಿ ಶರ್ಮಾ
|

Updated on: Aug 15, 2023 | 9:09 PM

Share

ನವದೆಹಲಿ, ಆಗಸ್ಟ್ 15: ಭಾರತವು ನಾಗರಿಕ ವಿಮಾನಯಾನದಲ್ಲಿ (Civil Aviation) ಗರಿಷ್ಠ ಸಂಖ್ಯೆಯ ಮಹಿಳಾ ಪೈಲಟ್‌ಗಳನ್ನು (Women Pilots) ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ ಕೆಲವೇ ಗಂಟೆಗಳ ನಂತರ, ಕ್ಯಾಪ್ಟನ್ ಜೋಯಾ ಅಗರ್ವಾಲ್ (Captain Zoya Agarwal) ಅವರು ಈ ಬಗ್ಗೆ ಹೆಮ್ಮೆಪಡುತ್ತೇನೆ ಎಂದು ಹೇಳಿದ್ದಾರೆ. ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮೋದಿ ಅವರು, ಭಾರತದ ಮಹಿಳಾ ಪೈಲಟ್​​ಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಕುರಿತು ಜೋಯಾ ಅಗರ್ವಾಲ್ ಅವರ ಪ್ರತಿಕ್ರಿಯೆಯ ವಿಡಿಯೋವನ್ನು ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಪಿಐಬಿ ಅಧಿಕೃತ ಟ್ವಿಟರ್ ಖಾತೆಯಿಂದ ವೀಡಿಯೊವನ್ನು ಟ್ವೀಟ್ ಮಾಡಲಾಗಿದೆ.

‘ಭಾರತದ ಮಗಳಿಂದ ನಿಮಗೆಲ್ಲ ಶುಭಾಶಯಗಳು. 77 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಭಾರತದ ಎಲ್ಲಾ ನಾಗರೀಕರಿಗೆ ಅಭಿನಂದನೆಗಳು. ಈ ಸ್ವಾತಂತ್ರ್ಯ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯ ಆವರಣದಿಂದ ಮಾತನಾಡುತ್ತಾ, ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ನಮ್ಮ ದೇಶವು ಗರಿಷ್ಠ ಸಂಖ್ಯೆಯ ಮಹಿಳಾ ಪೈಲಟ್‌ಗಳನ್ನು ಹೊಂದಿದೆ ಎಂದು ಹೇಳಿರುವುದು ನನಗೆ ತುಂಬಾ ಹೆಮ್ಮೆ ತಂದಿದೆ. ಇದು ಪ್ರಪಂಚದಾದ್ಯಂತದ ಹೆಣ್ಣುಮಕ್ಕಳು ಮತ್ತು ಮಹಿಳೆಯರಿಗೆ ಅವರು ಕನಸು ಕಂಡಿದ್ದನ್ನು ಸಾಧಿಸಲು ಪ್ರೇರೇಪಿಸುತ್ತದೆ ಎಂದು ಭಾವಿಸುತ್ತೇನೆ’ ಎಂದು ಸ್ಯಾನ್ ಫ್ರಾನ್ಸಿಸ್ಕೋ ಮತ್ತು ಬೆಂಗಳೂರು ನಡುವೆ ವಿಶ್ವದ ಅತಿ ಉದ್ದದ ವಾಯು ಮಾರ್ಗಗಳಲ್ಲಿ ಒಂದರಲ್ಲಿ ವಿಮಾನ ಹಾರಾಟ ನಡೆಸಿದ ಮೊದಲ ಮಹಿಳಾ ಕಮಾಂಡರ್ ಅಗರ್ವಾಲ್ ಅವರು ವೀಡಿಯೋದಲ್ಲಿ ಹೇಳಿದ್ದಾರೆ.

ಜೋಯಾ ಅಗರ್ವಾಲ್ ಮಾತು (ಪಿಐಬಿ ಟ್ವೀಟ್)

ಜೋಯಾ ಅಗರ್ವಾಲ್ ಬಗ್ಗೆ ನೀವು ತಿಳಿದುಕೊಳ್ಳಬೇಕಾದದ್ದು

ವಿಶ್ವದ ಅತಿ ಉದ್ದದ ವಿಮಾನ ಮಾರ್ಗವಾಗಿರುವ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಿಂದ ಭಾರತದ ಬೆಂಗಳೂರಿಗೆ ಜೋಯಾ ಅಗರ್ವಾಲ್ ಅವರು 2021 ರಿಂದ ವಿಮಾನ ಸಂಚಾರ ನಡೆಸುತ್ತಿದ್ದಾರೆ. ಅವರು 2013 ರಲ್ಲಿ ಬೋಯಿಂಗ್ 777 ಅನ್ನು ಹಾರಾಟ ಮಾಡಲು ಪ್ರಾರಂಭಿಸಿದ್ದರು. ಅಲ್ಲದೆ, ವಿಮಾನ ಹಾರಾಟ ನಡೆಸಿದ ಅತ್ಯಂತ ಕಿರಿಯ ಮಹಿಳೆಯಾಗಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: PM Modi Speech: ಸ್ವಾತಂತ್ರ್ಯ ದಿನ: ಶಾಂತಿಯಿಂದಲೇ ಸಮಾಧಾನದ ಮಾರ್ಗ ತೆರೆಯುವುದು, ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಮೋದಿ ಮಾತು

ಅಗರ್ವಾಲ್ ಅವರು ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಮೇ 2020 ರಲ್ಲಿ ಭಾರತೀಯರನ್ನು ವಂದೇ ಭಾರತ್ ಮಿಷನ್ ಅಡಿಯಲ್ಲಿ ಸ್ವದೇಶಕ್ಕೆ ಕರೆತಂದ ಮೊದಲ ವಿಮಾನದ ಸಹ-ಪೈಲಟ್ ಆಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?