ಹರ್ಯಾಣದಲ್ಲೂ ಪ್ರತಿಭಟನಾ ನಿರತ ರೈತರತ್ತ ನುಗ್ಗಿದ ಕಾರು; ಪೊಲೀಸರಿಗೆ ದೂರು ನೀಡಿದ ಗಾಯಾಳು ರೈತ

ಗಾಯಗೊಂಡ ರೈತನಿಗೆ ನರೈಂಗರ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಂತ ದೊಡ್ಡಮಟ್ಟದ ಗಾಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಹಾಗೇ, ಘಟನೆಗೆ ಸಂಬಂಧಪಟ್ಟಂತೆ ಯಾವುದೇ ಎಫ್​ಐಆರ್​ ಇನ್ನೂ ದಾಖಲಾಗಿಲ್ಲ. 

ಹರ್ಯಾಣದಲ್ಲೂ ಪ್ರತಿಭಟನಾ ನಿರತ ರೈತರತ್ತ ನುಗ್ಗಿದ ಕಾರು; ಪೊಲೀಸರಿಗೆ ದೂರು ನೀಡಿದ ಗಾಯಾಳು ರೈತ
ಲಖಿಂಪುರ ಖೇರಿ ಹಿಂಸಾಚಾರದ ದೃಶ್ಯ
Follow us
TV9 Web
| Updated By: Lakshmi Hegde

Updated on:Oct 07, 2021 | 5:01 PM

ಹರ್ಯಾಣದ ನರೈಂಗರ್​ ಎಂಬಲ್ಲಿಯೂ ಕೂಡ ಲಖಿಂಪುರ ಖೇರಿಯಲ್ಲಿ ನಡೆದ ಘಟನೆಯಂಥದ್ದೇ ಘಟನೆ ನಡೆದಿದ್ದು, ವರದಿಯಾಗಿದೆ. ಇಲ್ಲಿ ಬಿಜೆಪಿ ಶಾಸಕ ಸಂದೀಪ್​ ಸಿಂಗ್​ ಅವರ ಸನ್ಮಾನ ಕಾರ್ಯಕ್ರಮದ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರತ್ತ ಕಾರು ಹರಿದಿದೆ, ಈ ಘಟನೆಯಲ್ಲಿ ಒಬ್ಬ ರೈತ ಗಾಯಗೊಂಡಿದ್ದಾರೆ ಎಂದು ಆ ಸಮಯದಲ್ಲಿ ಸ್ಥಳದಲ್ಲಿದ್ದ ರೈತರಗೊಬ್ಬರು ಆರೋಪ ಮಾಡಿದ್ದಾರೆ. ಇಂದು ಬೆಳಗ್ಗೆ 11ಗಂಟೆ ಹೊತ್ತಿಗೆ ಘಟನೆ ನಡೆದಿದೆ ಎಂದೂ ಅವರು ತಿಳಿಸಿದ್ದಾರೆ.  

ಇಂದು ಹರ್ಯಾಣದ ನರೈಂಗರ್​​ನ ಸೈನಿ ಭವನದಲ್ಲಿ ಬಿಜೆಪಿ ಶಾಸಕ ಸಂದೀಪ್​ ಸಿಂಗ್​​ಗೆ ಸನ್ಮಾನ ಕಾರ್ಯಕ್ರಮವಿತ್ತು. ಇದರಲ್ಲಿ ಕುರುಕ್ಷೇತ್ರ ಸಂಸದ ನಯಾಬ್​ ಸೈನಿ ಮತ್ತಿತರ ಬಿಜೆಪಿ ನಾಯಕರು ಪಾಲ್ಗೊಂಡಿದ್ದರು. ಅಲ್ಲೇ ಸಮೀಪದಲ್ಲಿ ರೈತರು, ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದರು. ಕಾರ್ಯಕ್ರಮ ಮುಕ್ತಾಯವಾಗುತ್ತಿದ್ದಂತೆ  ಸಂಸದ ನಯಾಬ್​ ಅವರ ಬೆಂಗಾವಲು ವಾಹನವೊಂದು ರೈತರತ್ತ ನುಗ್ಗಿದೆ ಎಂದು ಗಾಯಗೊಂಡ ರೈತ ಭವನ್​ ಪ್ರೀತ್​ ಸಿಂಗ್​ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಗಾಯಗೊಂಡ ರೈತನಿಗೆ ನರೈಂಗರ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಂತ ದೊಡ್ಡಮಟ್ಟದ ಗಾಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಹಾಗೇ, ಘಟನೆಗೆ ಸಂಬಂಧಪಟ್ಟಂತೆ ಯಾವುದೇ ಎಫ್​ಐಆರ್​ ಇನ್ನೂ ದಾಖಲಾಗಿಲ್ಲ.  ಆದರೆ ರೈತರತ್ತ ನುಗ್ಗಿದ ಕಾರಿನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಪ್ರತಿಭಟನಾ ನಿರತ ರೈತರು ಆಗ್ರಹಿಸುತ್ತಿದ್ದಾರೆ. ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ರೈತರತ್ತ ಕಾರು ನುಗ್ಗಿ ದೊಡ್ಡ ಮಟ್ಟದ ಹಿಂಸಾಚಾರ ನಡೆದ ಬೆನ್ನಲ್ಲೇ ಹರ್ಯಾಣದಿಂದಲೂ ಇಂಥದ್ದೇ ಘಟನೆ ವರದಿಯಾಗಿದೆ. ಲಖಿಂಪುರ ಖೇರಿಯಲ್ಲಿ ನಡೆದ ಘಟನೆಯಲ್ಲಿ ಬಿಜೆಪಿ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ವಿರುದ್ಧ ಆರೋಪ ಕೇಳಿಬಂದಿದ್ದರೆ, ಇಲ್ಲಿ ಬಿಜೆಪಿ ಸಂಸದನ ಬೆಂಗಾವಲು ವಾಹನದ ವಿರುದ್ಧ ರೈತರು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ‘ಶೀಘ್ರವೇ ಮಹತ್ವದ ಘೋಷಣೆ ಮಾಡುತ್ತೇನೆ ಎಂದ ಕಾಜಲ್ ಅಗರ್​​ವಾಲ್​’​; ನಟಿ ಪ್ರೆಗ್ನೆಂಟ್​ ಎಂದ ಅಭಿಮಾನಿಗಳು

ಧೈರ್ಯ ಇದ್ದರೆ ನನ್ನ ಮುಂದೆ ಬನ್ನಿ, ಚರ್ಚಿಸೋಣ; ಉಗ್ರರಿಗೆ ಸವಾಲು ಹಾಕಿದ ಶ್ರದ್ಧಾ ಬಿಂದ್ರೂ

Published On - 4:41 pm, Thu, 7 October 21

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ