
ಹೈದರಾಬಾದ್: ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೆಲಂಗಾಣ ರಾಜ್ಯದ ನಲ್ಗೊಂಡ ಜಿಲ್ಲೆಯ ಚಿಟ್ಯಾಲ ಬಳಿ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ನಡೆದಿದೆ.
ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೂರ್ವ ಗೋದಾವರಿ ಜಿಲ್ಲಾ ಕೊತ್ತಪಲ್ಲಿಯಿಂದ ಹೈದರಾಬಾದ್ಗೆ ಹೋಗುತ್ತಿರುವಾಗ ಈ ಘಟನೆ ಸಂಭವಿಸಿದೆ. ಈ ವೇಳೆ 8 ಜನರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಮೃತರನ್ನು ಗೀತಲಕ್ಷ್ಮಿ, ಶ್ರೀನಿವಾಸ, ಲಕ್ಷ್ಮಿ ಚಂದ್ರ ಎಂದು ಗುರುತಿಸಲಾಗಿದೆ.
Published On - 8:28 am, Thu, 21 May 20