Accident: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಬಸ್‌ಗೆ ಕಾರು ಡಿಕ್ಕಿ, 4 ಸಾವು

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ದಹಾನು ಪ್ರದೇಶದಲ್ಲಿ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಕಾರೊಂದು ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ.

Accident: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಬಸ್‌ಗೆ ಕಾರು ಡಿಕ್ಕಿ, 4 ಸಾವು
ಪ್ರಾತಿನಿಧಿಕ ಚಿತ್ರ
Image Credit source: indianexpress.com

Updated on: Jan 31, 2023 | 10:59 AM

ದಹಾನು: ಮಹಾರಾಷ್ಟ್ರ(maharashtra) ಪಾಲ್ಘರ್ ಜಿಲ್ಲೆಯ ದಹಾನು ಪ್ರದೇಶದಲ್ಲಿ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಕಾರೊಂದು ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಕಾರು ಗುಜರಾತ್‌ನಿಂದ ಮುಂಬೈಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಾರು ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡು ಬಸ್‌ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪಾಲ್ಘರ್ ಪೊಲೀಸರು ತಿಳಿಸಿದ್ದಾರೆ. ಕಾರು ಮತ್ತು ಬಸ್ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನು ಓದಿ:Road Accident: ಖಾಸಗಿ ಬಸ್ ಡಿಕ್ಕಿಯಾಗಿ ಸ್ವಗ್ರಾಮದಿಂದ ಬೆಂಗಳೂರಿಗೆ ಮರಳುತ್ತಿದ್ದ ತಂದೆ-ಮಗಳು ದುರಂತ ಸಾವು

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಮತ್ತು ಪೊಲೀಸರ ನಡುವಿನ ಗುಂಡಿನ ಚಕಮಕಿ

ಸೋಮವಾರ ತಡರಾತ್ರಿ ರಾಜಸ್ಥಾನದ ಜೈಪುರದಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಶೂಟರ್‌ಗಳು ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ. ಬಂಧನದ ನಂತರ ದುಷ್ಕರ್ಮಿಗಳನ್ನು ಆಗ್ರಾದಿಂದ ಕರೆತರುತ್ತಿದ್ದಾಗ ಈ ಘಟನೆ ವರದಿಯಾಗಿದೆ. ದುಷ್ಕರ್ಮಿಗಳು ಕಾವಲುಗಾರರ ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:59 am, Tue, 31 January 23