Accident: ಕೇರಳದಲ್ಲಿ ಕಾರು ಲಾರಿಗೆ ಡಿಕ್ಕಿ; 5 ಜನ ಸಾವು

ಕೇರಳದ ಅಲಪ್ಪುಳ ಜಿಲ್ಲೆಯ ಅಂಬಲಪುಳ ಬಳಿ ಸೋಮವಾರ ನಸುಕಿನ ವೇಳೆ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Accident: ಕೇರಳದಲ್ಲಿ ಕಾರು ಲಾರಿಗೆ ಡಿಕ್ಕಿ; 5 ಜನ ಸಾವು
ಸಾಂದರ್ಭಿಕ ಚಿತ್ರ Image Credit source: google image
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Jan 23, 2023 | 11:48 AM

ಅಲಪ್ಪುಳ: ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಕೇರಳದ ( Kerala) ಅಲಪ್ಪುಳ (Alappuzha) ಜಿಲ್ಲೆಯ ಅಂಬಲಪುಳ ಬಳಿ ಸೋಮವಾರ ನಸುಕಿನ ವೇಳೆ ನಡೆದಿದೆ. ಇವರಲ್ಲಿ ನಾಲ್ವರು ತಿರುವನಂತಪುರಂ ಮೂಲದವರಾಗಿದ್ದು, ನಗರದ ಇಸ್ರೋ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ 1.30ರ ಸುಮಾರಿಗೆ ಈ ಘಟನೆ ನಡೆದಿದೆ. ಆಂಧ್ರಪ್ರದೇಶದಿಂದ ಅಕ್ಕಿ ಸಾಗಿಸುತ್ತಿದ್ದ ಲಾರಿ ಹಾಗೂ ಐವರು ಪ್ರಯಾಣಿಸುತ್ತಿದ್ದ ಕಾರು ಪರಸ್ಪರ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡಿದ್ದ ಮತ್ತೊಬ್ಬರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇದನ್ನು ಓದಿ:Odisha Bus Accident: ಆಯತಪ್ಪಿ ಸೇತುವೆಯಿಂದ ಕೆಳಗೆ ಹಾರಿದ ಬಸ್​, ಇಬ್ಬರು ಸಾವು, ಹಲವರಿಗೆ ಗಾಯ

ಅಂಬಲಪುಳ ಪೊಲೀಸರ ಪ್ರಕಾರ, ಐವರು ಕಾರಿನಲ್ಲಿದ್ದರು. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರು ಇಸ್ರೋ ಕ್ಯಾಂಟೀನ್ ನಡೆಸುತ್ತಿದ್ದು, ಅವರಲ್ಲಿ ನಾಲ್ವರು ತಿರುವನಂತಪುರಂ ಮೂಲದವರು ಮತ್ತು ಒಬ್ಬರು ಕೇರಳದ ಕೊಲ್ಲಂ ಜಿಲ್ಲೆಯವರು. ಮೃತರನ್ನು ಪ್ರಸಾದ್, ಶಿಜು, ಅಮಲ್, ಸಚಿನ್ ಮತ್ತು ಸುಮೋದ್ ಎಂದು ಗುರುತಿಸಲಾಗಿದೆ. ಹೆಚ್ಚಿನ ತನಿಖೆಗಳು ನಡೆಯುತ್ತಿದ್ದು, ಘಟನೆ ಮತ್ತು ತೆಗೆದುಕೊಂಡ ಕ್ರಮದ ಬಗ್ಗೆ ಪೊಲೀಸರು ಹೆಚ್ಚಿನ ವಿವರಗಳನ್ನು ನೀಡಬೇಕಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:47 am, Mon, 23 January 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ