AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪು ಕೋಟೆ ಬಳಿ ಕಾರು ಸ್ಫೋಟವಾಗಿ 8 ಜನ ಸಾವು; ದೆಹಲಿಯಲ್ಲಿ ಹೈ ಅಲರ್ಟ್

ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಬಳಿ ಕಾರು ಸ್ಫೋಟವಾಗಿದೆ. ಈ ಘಟನೆಯಿಂದ ಹತ್ತಿರದ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಈ ದುರಂತದಲ್ಲಿ 8 ಜನರು ವ್ಯಕ್ತಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿ ಆರಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಕೆಂಪು ಕೋಟೆ ಬಳಿ ಕಾರು ಸ್ಫೋಟವಾಗಿ 8 ಜನ ಸಾವು; ದೆಹಲಿಯಲ್ಲಿ ಹೈ ಅಲರ್ಟ್
Car Blast Near Red Fort
ಸುಷ್ಮಾ ಚಕ್ರೆ
|

Updated on:Nov 10, 2025 | 8:08 PM

Share

ನವದೆಹಲಿ, ನವೆಂಬರ್ 10: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ಸಂಜೆ ಭಾರೀ ಸ್ಫೋಟ ಉಂಟಾಗಿದೆ. ಕೆಂಪು ಕೋಟೆ (Red Fort) ಬಳಿಯ ಮೆಟ್ರೋ ನಿಲ್ದಾಣದ ಗೇಟ್ ಬಳಿ ನಿಲ್ಲಿಸಿದ್ದ ಕಾರು ಸ್ಫೋಟವಾಗಿದೆ. ಇದರಿಂದ 8 ಜನರು ಮೃತಪಟ್ಟಿದ್ದಾರೆ. ಸುತ್ತಲೂ ಬೆಂಕಿ ಆವರಿಸಿದ್ದರಿಂದ ಹಲವು ಜನರು ಗಾಯಗೊಂಡಿದ್ದಾರೆ. ಇದರಿಂದ ದೆಹಲಿಯಲ್ಲಿ (Delhi) ಆತಂಕದ ಪರಿಸ್ಥಿತಿ ನಿರ್ಮಾಣವಾಗಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.

ದೆಹಲಿಯ ಸಂಸತ್ ಭವನ, ಇಂಡಿಯಾ ಗೇಟ್ ಸುತ್ತ ಹೈ ಅಲರ್ಟ್ ಘೋಷಿಸಲಾಗಿದೆ. ಚಾಂದನಿಚೌಕ್ ಮಾರ್ಕೆಟ್, ಕೆಂಪು ಕೋಟೆ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳನ್ನು ದೆಹಲಿ ಪೊಲೀಸರು ಬಂದ್​ ಮಾಡಿದ್ದಾರೆ.

ಇಂದು ಸಂಜೆ 6.55ರ ಸುಮಾರಿಗೆ ಕಾರು ಸ್ಫೋಟವಾಗಿದೆ ಎಂಬ ಮಾಹಿತಿ ಲಭ್ಯವಾಯಿತು. ಇದಾದ ನಂತರ 7 ಅಗ್ನಿಶಾಮಕ ದಳದ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಯನ್ನು ಶೀಘ್ರದಲ್ಲೇ ನಿಯಂತ್ರಣಕ್ಕೆ ತರಲಾಯಿತು.

ಇದನ್ನೂ ಓದಿ: ಒಂದು ಸೇಡಿನ ಕತೆ; ಯುಪಿಎಸ್​ಸಿ ಆಕಾಂಕ್ಷಿಯನ್ನು ಕೊಂದು, ತುಪ್ಪ, ಆಲ್ಕೋಹಾಲ್ ಸುರಿದು ಬೆಂಕಿ ಹಚ್ಚಿದ ಪ್ರೇಯಸಿ

ದೆಹಲಿ ಅಗ್ನಿಶಾಮಕ ಇಲಾಖೆಯ ಪ್ರಕಾರ, ನಿಲ್ಲಿಸಿದ್ದ ಕಾರಿನಲ್ಲಿ ಸ್ಫೋಟ ಸಂಭವಿಸಿದೆ ಎಂದು ಕರೆ ಬಂದಿದ್ದು, ನಂತರ ಹತ್ತಿರದ 3ರಿಂದ 4 ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿಯನ್ನು ನಿಯಂತ್ರಿಸಲು ತಕ್ಷಣವೇ ಹಲವಾರು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.

ಅಗ್ನಿಶಾಮಕ ದಳದ ಅಧಿಕಾರಿಗಳು ಸಿಎನ್‌ಜಿ ಸಿಲಿಂಡರ್ ಸ್ಫೋಟದ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ದೃಢಪಟ್ಟಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:51 pm, Mon, 10 November 25

ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ವಿಧಾನಸಭೆ ಚುನಾವಣೆಗೆ ತಾನು ಈ ಕ್ಷೇತ್ರದ ಟಿಕೆಟ್​​ ಆಕಾಂಕ್ಷಿ ಎಂದ ಪ್ರತಾಪ್​
ವಿಧಾನಸಭೆ ಚುನಾವಣೆಗೆ ತಾನು ಈ ಕ್ಷೇತ್ರದ ಟಿಕೆಟ್​​ ಆಕಾಂಕ್ಷಿ ಎಂದ ಪ್ರತಾಪ್​
ದರ್ಶನ್ ಗೈರು ಹಾಜರಿ: ಸಂಕ್ರಾಂತಿ ಆಚರಣೆಗೆ ವಿಜಯಲಕ್ಷ್ಮಿ ಮುಂದಾಳತ್ವ
ದರ್ಶನ್ ಗೈರು ಹಾಜರಿ: ಸಂಕ್ರಾಂತಿ ಆಚರಣೆಗೆ ವಿಜಯಲಕ್ಷ್ಮಿ ಮುಂದಾಳತ್ವ