
ನವದೆಹಲಿ, ನವೆಂಬರ್ 10: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ಸಂಜೆ ಭಾರೀ ಸ್ಫೋಟ ಉಂಟಾಗಿದೆ. ಕೆಂಪು ಕೋಟೆ (Red Fort) ಬಳಿಯ ಮೆಟ್ರೋ ನಿಲ್ದಾಣದ ಗೇಟ್ ಬಳಿ ನಿಲ್ಲಿಸಿದ್ದ ಕಾರು ಸ್ಫೋಟವಾಗಿದೆ. ಇದರಿಂದ 8 ಜನರು ಮೃತಪಟ್ಟಿದ್ದಾರೆ. ಸುತ್ತಲೂ ಬೆಂಕಿ ಆವರಿಸಿದ್ದರಿಂದ ಹಲವು ಜನರು ಗಾಯಗೊಂಡಿದ್ದಾರೆ. ಇದರಿಂದ ದೆಹಲಿಯಲ್ಲಿ (Delhi) ಆತಂಕದ ಪರಿಸ್ಥಿತಿ ನಿರ್ಮಾಣವಾಗಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.
ದೆಹಲಿಯ ಸಂಸತ್ ಭವನ, ಇಂಡಿಯಾ ಗೇಟ್ ಸುತ್ತ ಹೈ ಅಲರ್ಟ್ ಘೋಷಿಸಲಾಗಿದೆ. ಚಾಂದನಿಚೌಕ್ ಮಾರ್ಕೆಟ್, ಕೆಂಪು ಕೋಟೆ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳನ್ನು ದೆಹಲಿ ಪೊಲೀಸರು ಬಂದ್ ಮಾಡಿದ್ದಾರೆ.
ಇಂದು ಸಂಜೆ 6.55ರ ಸುಮಾರಿಗೆ ಕಾರು ಸ್ಫೋಟವಾಗಿದೆ ಎಂಬ ಮಾಹಿತಿ ಲಭ್ಯವಾಯಿತು. ಇದಾದ ನಂತರ 7 ಅಗ್ನಿಶಾಮಕ ದಳದ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಯನ್ನು ಶೀಘ್ರದಲ್ಲೇ ನಿಯಂತ್ರಣಕ್ಕೆ ತರಲಾಯಿತು.
#WATCH | Delhi: Fire tenders, ambulances, and senior police officials at the spot after a call was received regarding an explosion in a car near Gate No. 1 of the Red Fort Metro Station, after which three to four vehicles also caught fire and sustained damage
Multiple casualties… pic.twitter.com/GaWKizw7MN
— ANI (@ANI) November 10, 2025
ಇದನ್ನೂ ಓದಿ: ಒಂದು ಸೇಡಿನ ಕತೆ; ಯುಪಿಎಸ್ಸಿ ಆಕಾಂಕ್ಷಿಯನ್ನು ಕೊಂದು, ತುಪ್ಪ, ಆಲ್ಕೋಹಾಲ್ ಸುರಿದು ಬೆಂಕಿ ಹಚ್ಚಿದ ಪ್ರೇಯಸಿ
ದೆಹಲಿ ಅಗ್ನಿಶಾಮಕ ಇಲಾಖೆಯ ಪ್ರಕಾರ, ನಿಲ್ಲಿಸಿದ್ದ ಕಾರಿನಲ್ಲಿ ಸ್ಫೋಟ ಸಂಭವಿಸಿದೆ ಎಂದು ಕರೆ ಬಂದಿದ್ದು, ನಂತರ ಹತ್ತಿರದ 3ರಿಂದ 4 ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿಯನ್ನು ನಿಯಂತ್ರಿಸಲು ತಕ್ಷಣವೇ ಹಲವಾರು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.
#WATCH | A call was received regarding an explosion in a car near Gate No. 1 of the Red Fort Metro Station, after which three to four vehicles also caught fire and sustained damage. A total of 7 fire tenders have reached the spot. A team from the Delhi Police Special Cell has… pic.twitter.com/F7jbepnb4F
— ANI (@ANI) November 10, 2025
ಅಗ್ನಿಶಾಮಕ ದಳದ ಅಧಿಕಾರಿಗಳು ಸಿಎನ್‌ಜಿ ಸಿಲಿಂಡರ್ ಸ್ಫೋಟದ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ದೃಢಪಟ್ಟಿಲ್ಲ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:51 pm, Mon, 10 November 25