ಜಮ್ಮು ಮತ್ತು ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಕಾರು, 4 ವರ್ಷದ ಬಾಲಕಿ ಸಮೇತ ಐವರು ಸಾವು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಕಾರೊಂದು ರಸ್ತೆಯಿಂದ ಆಯತಪ್ಪಿ ಆಳವಾದ ಕಂದಕಕ್ಕೆ ಬಿದ್ದ ಪರಿಣಾಮ 4 ವರ್ಷದ ಬಾಲಕಿ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಕಾರು,  4 ವರ್ಷದ ಬಾಲಕಿ ಸಮೇತ ಐವರು ಸಾವು
ಜಮ್ಮು ಮತ್ತು ಕಾಶ್ಮೀರImage Credit source: India Today
Follow us
ನಯನಾ ರಾಜೀವ್
|

Updated on: Apr 14, 2024 | 8:40 AM

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಕಾರೊಂದು ರಸ್ತೆಯಿಂದ ಆಯತಪ್ಪಿ ಆಳವಾದ ಕಂದಕಕ್ಕೆ ಬಿದ್ದ ಪರಿಣಾಮ 4 ವರ್ಷದ ಬಾಲಕಿ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಅಪಘಾತದಲ್ಲಿ ಜೀವಹಾನಿಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಸಂತ್ರಸ್ತ ವ್ಯಕ್ತಿಗಳಿಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಲು ಜಿಲ್ಲಾಡಳಿತಕ್ಕೆ ಸೂಚನೆಗಳನ್ನು ನೀಡಿದ್ದಾರೆ.

ವಾಹನವು ಥಾತ್ರಿಯಿಂದ ಕಥಾವಾಕ್ಕೆ ತೆರಳುತ್ತಿದ್ದಾಗ ಖಾನ್ಪುರದಲ್ಲಿ ಸಂಜೆ 7 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ಥಾತ್ರಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಸುರೇಶ್ ಗೌತಮ್, ಅಪಘಾತದಲ್ಲಿ ಮಹಿಳೆ ಮತ್ತು ನಾಲ್ಕು ವರ್ಷದ ಬಾಲಕಿ ಸೇರಿದಂತೆ ಐವರು ಸಾವನ್ನಪ್ಪಿದ್ದು, ಐವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಂತಾಜನಕರಾಗಿದ್ದಾರೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಎಲೆಕ್ಷನ್‌ ಡ್ಯೂಟಿಗೆ ಹೋಗುತ್ತಿದ್ದಾಗ ಅಪಘಾತ; ಕರ್ನಾಟಕ ಪೊಲೀಸ್‌ ಸೇರಿ ಇಬ್ಬರ ಸಾವು

ಗಾಯಗೊಂಡಿರುವ ಐವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು, ಅಪಘಾತದಲ್ಲಿ ವಾಹನಕ್ಕೆ ವ್ಯಾಪಕ ಹಾನಿಯಾಗಿದೆ. ಮೃತ ನಾಲ್ವರನ್ನು ಮುಖ್ತಿಯಾರ್ ಅಹ್ಮದ್, ರಿಯಾಜ್ ಅಹ್ಮದ್, ಮೊಹಮ್ಮದ್ ರಫಿ, ಇರೀನಾ ಬೇಗಂ ಎಂದು ಪೊಲೀಸರು ಗುರುತಿಸಿದ್ದಾರೆ.

ನಾಲ್ಕು ವರ್ಷದ ಬಾಲಕಿ ಮೊಹಮ್ಮದ್ ಅಮೀರ್ ಮತ್ತು ಸೈಮಾ ದಂಪತಿಯ ಪುತ್ರಿಯಾಗಿದ್ದು, ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡ ಇತರರಲ್ಲಿ ಸೂಫಿಯಾನ್ ಶೇಖ್ ಮತ್ತು ಇಬ್ಬರು ಹುಡುಗಿಯರು ಸೇರಿದ್ದಾರೆ ಎಂದು ಅವರು ಹೇಳಿದರು. ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಕ್ಷದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಅವರು ಅಪಘಾತದಲ್ಲಿ ಜೀವಹಾನಿಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಚೆನಾಬ್ ಕಣಿವೆ ಪ್ರದೇಶದಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯಲು ತೀವ್ರತರವಾದ ಕ್ರಮಗಳನ್ನು ಒತ್ತಾಯಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ