ತೆಲಂಗಾಣ: ಸಿದ್ದಿಪೇಟ್ ಜಿಲ್ಲೆಯಲ್ಲಿ ಕಾಲುವೆಗೆ ಕಾರು ಬಿದ್ದು 5 ಸಾವು
ಮೃತದೇಹಗಳನ್ನು ಕಾಲುವೆಯಿಂದ ಹೊರತೆಗೆಯಲಾಗಿದೆ. ಅವರ ಗುರುತು ಇನ್ನೂ ತಿಳಿದುಬಂದಿಲ್ಲ ಆದರೆ ತನಿಖೆ ನಡೆಯುತ್ತಿದೆ ಎಂದು ಸಿದ್ದಿಪೇಟೆ ಸಿಪಿ ಶ್ವೇತಾ ತಿಳಿಸಿದ್ದಾರೆ.
ತೆಲಂಗಾಣದ (Telangana) ಸಿದ್ದಿಪೇಟ್ ಜಿಲ್ಲೆಯ ಜಗದೇವಪುರದಲ್ಲಿ ಕಾರೊಂದು ಕಾಲುವೆಗೆ ಬಿದ್ದು 5 ಮಂದಿ ಸಾವಿಗೀಡಾಗಿದ್ದು,ಒಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೃತದೇಹಗಳನ್ನು ಕಾಲುವೆಯಿಂದ ಹೊರತೆಗೆಯಲಾಗಿದೆ. ಅವರ ಗುರುತು ಇನ್ನೂ ತಿಳಿದುಬಂದಿಲ್ಲ ಆದರೆ ತನಿಖೆ ನಡೆಯುತ್ತಿದೆ ಎಂದು ಸಿದ್ದಿಪೇಟೆ ಸಿಪಿ ಶ್ವೇತಾ ತಿಳಿಸಿದ್ದಾರೆ. ಅಪಘಾತ ಸಂಭವಿಸಿದಾಗ ಕಾರಿನಲ್ಲಿ ಆರು ಮಂದಿ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪೋಲೀಸರ ಪ್ರಕಾರ, ಕಾರು ರಸ್ತೆಯಲ್ಲಿ ಚಲಿಸುತ್ತಿದ್ದಾಗ ಮೋರಿಗೆ ಡಿಕ್ಕಿ ಹೊಡೆದು ಕಾಲುವೆಗೆ ಜಾರಿತು. ಐವರು ಸ್ಥಳದಲ್ಲೇ ಮೃತಪಟ್ಟರೆ, ಆರನೆಯವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Telangana | 5 dead & 1 injured after a car fell into a canal in the Jagadevpur, Siddipet district. The injured person was sent to a hospital for treatment & bodies were recovered from the canal. Their identities have not been known yet but the probe is underway: SiddipetCP Swetha pic.twitter.com/4TV5BOep8E
— ANI (@ANI) January 10, 2023
ಜಗದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಕಾರು ಮತ್ತು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿದ್ದಿಪೇಟೆ ಪೊಲೀಸ್ ಕಮಿಷನರ್ ಶ್ವೇತಾ ತಿಳಿಸಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:31 pm, Tue, 10 January 23