ಪಂಜಾಬ್​​​​ನಲ್ಲಿ ಭೀಕರ ಅಪಘಾತ; ಕಾರು-ಟ್ರಕ್ ಡಿಕ್ಕಿ, ನಾಲ್ವರ ದುರ್ಮರಣ

|

Updated on: Jan 27, 2024 | 7:41 AM

ಹೋಶಿಯಾರ್‌ಪುರದ ಮುಕೇರಿಯನ್ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ವೇಗವಾಗಿ ಬಂದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

ಪಂಜಾಬ್​​​​ನಲ್ಲಿ ಭೀಕರ ಅಪಘಾತ; ಕಾರು-ಟ್ರಕ್ ಡಿಕ್ಕಿ, ನಾಲ್ವರ ದುರ್ಮರಣ
ಪಂಜಾಬ್​​​​ನಲ್ಲಿ ಭೀಕರ ಅಪಘಾತ
Follow us on

ಚಂಡಿಗಢ, ಜ.27: ಪಂಜಾಬ್‌ನ ಹೋಶಿಯಾರ್‌ಪುರ ಜಿಲ್ಲೆಯಲ್ಲಿ ಶುಕ್ರವಾರ ಕಾರೊಂದು ಟ್ರಕ್‌ಗೆ ಡಿಕ್ಕಿ (Accident) ಹೊಡೆದು ಬೆಂಕಿ ಹೊತ್ತಿಕೊಂಡಿದ್ದು ಈ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ (Death). ಹಾಗೂ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಪೊಲೀಸರ ಪ್ರಕಾರ, ಹೋಶಿಯಾರ್‌ಪುರದ ಮುಕೇರಿಯನ್ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ವೇಗವಾಗಿ ಬಂದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.

ಘಟನೆ ನಡೆಯುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಸ್ಥಳೀಯರ ಸಹಾಯದಿಂದ ಕಾರಿನಲ್ಲಿ ಸಿಲುಕಿದ್ದ ಜನರನ್ನು ಹೊರತೆಗೆದು ಅವರನ್ನು ಮುಕೇರಿಯನ್ ಸಿವಿಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಓರ್ವನ ಸ್ಥಿತಿ ಚಿಂತಾಜನಕವಾಗಿದೆ.

ಅಗ್ನಿಶಾಮಕ ದಳದವರು ಕಾರಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಪೊಲೀಸರು ಶವವನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಈ ಅಪಘಾತದ ಬಗ್ಗೆ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ದಕ್ಷಿಣಕ್ಕೆ ಎದುರಾಗಿರುವ ಮನೆಯನ್ನು ಏಕೆ ದುರಾದೃಷ್ಟ ಎಂದು ಪರಿಗಣಿಸಲಾಗುತ್ತದೆ?

ಮೃತರನ್ನು ಇನ್ನೂ ಗುರುತಿಸಲಾಗಿಲ್ಲ, ಆದರೆ ಅಪಘಾತಕ್ಕೀಡಾದ ವಾಹನದ ನಂಬರ್ ಪ್ಲೇಟ್ ಜಲಂಧರ್‌ನದ್ದಾಗಿರುವುದರಿಂದ ಅವರು ಜಲಂಧರ್ ನಿವಾಸಿಗಳಾಗಿರಬಹುದು ಎಂದು ಊಹಿಸಲಾಗಿದೆ.

ಕಳೆದ ವರ್ಷದ ಆರಂಭದಲ್ಲಿ ಪಂಜಾಬ್‌ನ ಸಂಗ್ರೂರ್ ಜಿಲ್ಲೆಯಲ್ಲಿ ಎರಡು ಟ್ರಾಕ್ಟರ್ ಟ್ರಾಲಿಗಳಿಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದರು. ಮರ್ದ್ಖೇರಾ ಗ್ರಾಮದ ಬಳಿ ಸುನಮ್-ಪಟಿಯಾಲ ರಸ್ತೆಯಲ್ಲಿ ಅಪಘಾತ ಸಂಭವಿಸಿತ್ತು. ನೀರಜ್ ಸಿಂಗ್ಲಾ ಅವರು ಮಲೇರ್‌ಕೋಟ್ಲಾದಿಂದ ಸುನಮ್ ಪಟ್ಟಣದ ಕಡೆಗೆ ಚಲಾಯಿಸುತ್ತಿದ್ದ ಕಾರು ಮರ್ದಖೇರಾ ಗ್ರಾಮದಿಂದ ಬರುತ್ತಿದ್ದ ಎರಡು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಡಿಕ್ಕಿ ಹೊಡೆದಿತ್ತು.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ