ಆಂಧ್ರಪ್ರದೇಶ: ಪೂರ್ವ ಗೋದಾವರಿಯ ದೇವರಪಲ್ಲಿ ಮಂಡಲದಲ್ಲಿ ಕಾರು ಡಿಕ್ಕಿ; ಮೂವರು ಸಾವು

| Updated By: ರಶ್ಮಿ ಕಲ್ಲಕಟ್ಟ

Updated on: Jan 03, 2024 | 8:07 PM

ಗಾಯಗೊಂಡ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಕೂಡಲೇ ದೇವರಪಲ್ಲಿ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯ ವೈದ್ಯರು ಇನ್ನೊಬ್ಬ ಮಹಿಳೆಯ ಸಾವನ್ನು ದೃಢಪಡಿಸಿದ್ದು ಮೂವರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಂಧ್ರಪ್ರದೇಶ: ಪೂರ್ವ ಗೋದಾವರಿಯ ದೇವರಪಲ್ಲಿ ಮಂಡಲದಲ್ಲಿ ಕಾರು ಡಿಕ್ಕಿ; ಮೂವರು ಸಾವು
ಪ್ರಾತಿನಿಧಿಕ ಚಿತ್ರ
Follow us on

ಪೂರ್ವ ಗೋದಾವರಿ (ಆಂಧ್ರಪ್ರದೇಶ) ಜನವರಿ 03: ಆಂಧ್ರಪ್ರದೇಶದ (Andhra Pradesh) ಪೂರ್ವ ಗೋದಾವರಿಯ ದೇವರಪಲ್ಲಿ ಮಂಡಲದಲ್ಲಿ (Devarapalli Mandal) ಮಂಗಳವಾರ ಕಾರೊಂದು ನಿಯಂತ್ರಣ ತಪ್ಪಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಮೂವರು ಮೃತಪಟ್ಟಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ದೇವರಪಲ್ಲಿ ಮಂಡಲದ ಬಂಡಪುರಂ ಮೇಲ್ಸೇತುವೆ ಬಳಿ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ನಂತರ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಗುದ್ದಿ ಅಪಘಾತ ಸಂಭವಿಸಿದೆ.

ಈ ಅಪಘಾತದಲ್ಲಿ ಮೂವರು ಸಾವಿಗೀಡಾಗಿದ್ದು ಐವರು ಗಾಯಗೊಂಡಿದ್ದಾರೆ.

ಗಾಯಗೊಂಡ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಕೂಡಲೇ ದೇವರಪಲ್ಲಿ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯ ವೈದ್ಯರು ಇನ್ನೊಬ್ಬ ಮಹಿಳೆಯ ಸಾವನ್ನು ದೃಢಪಡಿಸಿದ್ದು ಮೂವರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳೀಯ ಅಧಿಕಾರಿಗಳು ಮತ್ತು ತುರ್ತು ಸೇವೆಗಳು ಅಪಘಾತದ ಸ್ಥಳಕ್ಕೆ ತ್ವರಿತವಾಗಿ ಸ್ಪಂದಿಸಿದ್ದು, ತಕ್ಷಣದ ವೈದ್ಯಕೀಯ ನೆರವು ಮತ್ತು ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ವರ್ಗಾಯಿಸಲಾಯಿತು.

ಇದನ್ನೂ ಓದಿ: ಬೆಂಗಳೂರು: ಕಳೆದ 10 ವರ್ಷಗಳಲ್ಲೇ 2023ರಲ್ಲಿ ಅತಿಹೆಚ್ಚು ಮಾರಣಾಂತಿಕ ಅಪಘಾತ, ವರದಿ

ಘರ್ಷಣೆಗೆ ಕಾರಣವಾದ ಸಂದರ್ಭಗಳ ಬಗ್ಗೆ ತನಿಖೆ ನಡೆಸಲಾಗುವುದು. ಸಂತ್ರಸ್ತರ ಗುರುತುಗಳು ಮತ್ತು ಅಪಘಾತದ ಕಾರಣಕ್ಕೆ ಸಂಬಂಧಿಸಿದ ವಿವರಗಳನ್ನು ಪ್ರಸ್ತುತ ಕಾನೂನು ಜಾರಿ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ದೇವರಪಲ್ಲಿ ಸಬ್ ಇನ್ಸ್‌ಪೆಕ್ಟರ್ ಶ್ರೀ ಹರಿ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ