ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ಐವರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಜುಂಜುನುವಿನಲ್ಲಿ ಪ್ರಧಾನಿ ರ್ಯಾಲಿಗೆ ತೆರಳುತ್ತಿದ್ದ ವೇಳೆ ಕಾರು ಅಪಘಾತ ಸಂಭವಿಸಿದೆ. ವರದಿಗಳ ಪ್ರಕಾರ, ಪೊಲೀಸರ ಶವಗಳು ಕಾರಿನೊಳಗೆ ಸಿಲುಕಿಕೊಂಡಿವೆ.
ಅಪಘಾತದಲ್ಲಿ ಮೂವರು ಪೊಲೀಸರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ದಾರುಣ ಘಟನೆ ನಗೌರ್ ಜಿಲ್ಲೆಯ ಕಣುತ ಗ್ರಾಮದ ಬಳಿ ನಡೆದಿದೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.
ನಾಗೌರ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪ್ರಾಣಹಾನಿಯಾಗಿರುವ ಬಗ್ಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಚುರುವಿನ ಸುಜನ್‌ಗಢ್ ಸದರ್ ಪ್ರದೇಶದಲ್ಲಿ ನಡೆದ ಅಪಘಾತ ಸುದ್ದಿ ಕೇಳಿ ತುಂಬಾ ನೋವಾಗಿದೆ, ಅಪಘಾತದಲ್ಲಿ ಮೃತಪಟ್ಟ ಎಲ್ಲಾ ಪೊಲೀಸರ ಕುಟುಂಬಗಳಿಗೆ ದುಃಖವನ್ನು ಮರೆಯುವ ಶಕ್ತಿ ನೀಡಲಿ, ಗಾಯಗೊಂಡಿರುವ ಪೊಲೀಸರು ಬೇಗ ಚೇತರಿಸಿಕೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ.
ಮತ್ತಷ್ಟು ಓದಿ: ಕಾರಿಗೆ ಅಡ್ಡ ಬಂದ ಪ್ರಾಣಿಯನ್ನು ತಪ್ಪಿಸಲು ಹೋಗಿ ಅಪಘಾತ, ಐವರು ಸಾವು
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮಧ್ಯಾಹ್ನ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿಯವರು ಜುಂಜುನುಗೆ ಭೇಟಿ ನೀಡುತ್ತಿರುವುದು ಇದು ಮೂರನೇ ಬಾರಿ. ಸ್ಥಳದಲ್ಲಿ ಭಾರೀ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಪ್ರಧಾನಿ ಮೋದಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಭೆಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ ತಾರಾನಗರದಿಂದ ಜುಂಜುನುಗೆ ಆಗಮಿಸಲಿದ್ದಾರೆ. ಇದಕ್ಕೂ ಮುನ್ನ ರಾಷ್ಟ್ರೀಯ ಕಾರ್ಯದರ್ಶಿ ಓಂಪ್ರಕಾಶ್ ಧಂಖರ್ ಕೂಡ ಪ್ರಧಾನಿ ಮೋದಿಯವರ ಸಭೆಯ ಸ್ಥಳವನ್ನು ಪರಿಶೀಲಿಸಲು ಜುಂಜುನು ತಲುಪಿದ್ದರು. ಪ್ರಸ್ತುತ ಹೆಚ್ಚುವರಿ ಎಸ್ಪಿ, ಡಿಎಸ್ಪಿ ಸೇರಿದಂತೆ ಜಿಲ್ಲೆಯ ಎಲ್ಲ ಉನ್ನತ ಅಧಿಕಾರಿಗಳು ಸ್ಥಳದಲ್ಲಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ