Mukesh Ambani | ಮುಕೇಶ್ ಅಂಬಾನಿ ನಿವಾಸದ ಬಳಿ ಕಾರಿನಲ್ಲಿ ಜಿಲೆಟಿನ್ ಕಡ್ಡಿಗಳು​ ಪತ್ತೆ

ಮುಕೇಶ್ ಅಂಬಾನಿ ನಿವಾಸದ ಬಳಿ ಕಾರಿನಲ್ಲಿ ಜಿಲೆಟಿನ್​ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮಹಾರಾಷ್ಟ್ರದ ಮುಂಬೈನಲ್ಲಿರುವ ಮುಕೇಶ್ ಅಂಬಾನಿ ನಿವಾಸದ ಬಳಿ ಅನುಮಾನಾಸ್ಪದವಾಗಿ ಕಾರು ಪತ್ತೆಯಾಗಿದೆ.

Mukesh Ambani | ಮುಕೇಶ್ ಅಂಬಾನಿ ನಿವಾಸದ ಬಳಿ ಕಾರಿನಲ್ಲಿ ಜಿಲೆಟಿನ್ ಕಡ್ಡಿಗಳು​ ಪತ್ತೆ
ಮುಕೇಶ್ ಅಂಬಾನಿ (ಸಂಗ್ರಹ ಚಿತ್ರ)
Follow us
KUSHAL V
| Updated By: Digi Tech Desk

Updated on:Jun 23, 2021 | 1:36 PM

ಮುಂಬೈ: ಮುಕೇಶ್ ಅಂಬಾನಿ ನಿವಾಸದ ಬಳಿ ಕಾರಿನಲ್ಲಿ ಜಿಲೆಟಿನ್​ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮಹಾರಾಷ್ಟ್ರದ ಮುಂಬೈನಲ್ಲಿರುವ ಮುಕೇಶ್ ಅಂಬಾನಿ ನಿವಾಸದ ಬಳಿ ಅನುಮಾನಾಸ್ಪದವಾಗಿ ಕಾರು ಪತ್ತೆಯಾಗಿದೆ. ಸ್ಕಾರ್ಪಿಯೊ ಕಾರಿನಲ್ಲಿ 20 ಜಿಲೆಟಿನ್​ ಕಡ್ಡಿಗಳು ಪತ್ತೆಯಾಗಿದೆ. ಸ್ಥಳಕ್ಕೆ ಎಟಿಎಸ್​, ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಭೇಟಿ ಕೊಟ್ಟಿದ್ದಾರೆ. ಶ್ವಾನ ದಳ, ಬಾಂಬ್ ಪತ್ತೆ & ನಿಷ್ಕ್ರಿಯ ದಳದ ತಜ್ಞರು ದೌಡಾಯಿಸಿದ್ದಾರೆ.

ಮುಕೇಶ್ ಅಂಬಾನಿಯವರ ಅಂತಿಲ್ಲಾ ನಿವಾಸದ ಬಳಿ ಸ್ಕಾರ್ಪಿಯೊ ವಾಹನವೊಂದು ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ ಅಲ್ಲಿನ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಕರೆ ಮಾಡಿದ್ದಾರೆ. ಈ ವೇಳೆ, ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ಜೆಲೆಟಿನ್​ ಕಡ್ಡಿಗಳು ಇರುವುದು ಕಂಡುಬಂದಿದೆ.

ಇನ್ನು, ಈ ಕುರಿತು ಪ್ರತಿಕ್ರಿಯಿಸಿದ ಮುಂಬೈ ಪೊಲೀಸ್​ ವಕ್ತಾರ DCP ಚೈತನ್ಯ ವಾಹನದಲ್ಲಿ ಸ್ಫೋಟಕ ಜಿಲೆಟಿನ್​ ಕಡ್ಡಿಗಳು ಇರುವುದು ಪತ್ತೆಯಾಗಿದೆ. ಆದರೆ, ಇದು ಬಾಂಬ್​ ಮಾದರಿಯಲ್ಲಿ ರೂಪಿಸಿರುವುದಾಗಿ ಸದ್ಯಕ್ಕೆ ಕಂಡುಬಂದಿಲ್ಲ. ಸದ್ಯ, ತನಿಖೆ ಮುಂದುವರಿದಿದೆ ಎಂದು ತಿಳಿಸಿದರು.

ಅಂದ ಹಾಗೆ, ಈ ಸ್ಕಾರ್ಪಿಯೊ ವಾಹನದ ನೋಂದಣಿ ಸಂಖ್ಯೆ ಉದ್ಯಮಿಯ ಭದ್ರತಾ ಸಿಬ್ಬಂದಿ ಬಳಸುವ ವಾಹನಗಳಿಗೆ ಹೋಲುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಜೊತೆಗೆ, ವಾಹನದಿಂದ ಪತ್ರವೊಂದು ಸಹ ದೊರೆತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

explosives-car-near-mukesh-ambani-house-compressed-768x432

ಮುಕೇಶ್ ಅಂಬಾನಿ ನಿವಾಸದ ಬಳಿ ಬಾಂಬ್ ಪತ್ತೆ & ನಿಷ್ಕ್ರಿಯ ದಳದ ತಜ್ಞರು

explosives-car-near-mukesh-ambani-house-3-compressed-768x432

ಮುಕೇಶ್ ಅಂಬಾನಿ ನಿವಾಸದ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರು

Published On - 8:40 pm, Thu, 25 February 21

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ