ಗೋವಾ: ಪಟಾಕಿ ಸಿಡಿದು ಗಾಯಗೊಂಡ ಇಟಲಿ ರಾಯಭಾರಿ ಪತ್ನಿ, ರೆಸಾರ್ಟ್ ಮಾಲೀಕನ ವಿರುದ್ಧ ಎಫ್‌ಐಆರ್
ಇಟಲಿಯ ರಾಯಭಾರಿ ಪತ್ನಿಯ ತಲೆಗೆ ಪಟಾಕಿ ಸಿಡಿದು ಗಂಭೀರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ರೆಸಾರ್ಟ್ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹೊಸ ವರ್ಷದ ಆಚರಣೆ ಸಮಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 338 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಇಟಲಿ ರಾಯಭಾರಿ ಪತ್ನಿಗೆ ಪಟಾಕಿ ಸಿಡಿದ ಹಿನ್ನೆಲೆಯಲ್ಲಿ ಬೀಚ್ ರೆಸಾರ್ಟ್ ಮಾಲೀಕನ ವಿರುದ್ಧ ಗೋವಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಉತ್ತರ ಗೋವಾದ ಅಶ್ವೆಮ್ ಬೀಚ್‌ನಲ್ಲಿ ಜನವರಿ 1 ರಂದು ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಗೋವಾದಲ್ಲಿರುವ ಇಟಲಿಯ ಗೌರವ ಉಪ ರಾಯಭಾರಿ ಶ್ರೀನಿವಾಸ್ ಡೆಂಪೊ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಶನಿವಾರ(ಫೆಬ್ರವರಿ 3) ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 338 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಎಫ್‌ಐಆರ್‌ನಲ್ಲಿ ಆರೋಪಿಗಳು ತರಾತುರಿಯಲ್ಲಿ ರೆಸಾರ್ಟ್ ಆವರಣದಲ್ಲಿ ಪಟಾಕಿ ಸಿಡಿಸಲು ಅನುಮತಿ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಭಾರತ ಮತ್ತು ನೇಪಾಳದಲ್ಲಿರುವ ಇಟಲಿಯ ರಾಯಭಾರಿ ವಿನ್ಸೆಂಜೊ ಡಿ ಲುಕಾ ಅವರ ಪತ್ನಿ ಪಾವೊಲಾ ಫೆರ್ರಿ ಅವರ ತಲೆಗೆ ಪಟಾಕಿ ಸಿಡಿದು ಗಾಯಗೊಂಡಿದ್ದರು.
ಮತ್ತಷ್ಟು ಓದಿ: ವೇಣೂರು ದುರಂತ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಟಾಕಿ ತಯಾರಿಕ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ
ನಾವು ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತೇವೆ ಮತ್ತು ಮುಂದಿನ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತೇವೆ. ನಾವು ರೆಸಾರ್ಟ್ನ ಮಾಲೀಕರನ್ನು ಇನ್ನೂ ಬಂಧಿಸಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ