AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪತಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಸೋನಿಯಾ ಗಾಂಧಿ ವಿರುದ್ಧ ಉತ್ತರ ಪ್ರದೇಶದಲ್ಲಿ ಪ್ರಕರಣ ದಾಖಲು

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಸಂಕಷ್ಟಎದುರಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ಪೂವರ್ ಲೇಡಿ’ ಎಂದು ಕರೆದಿದ್ದಕ್ಕಾಗಿ ಬಿಹಾರದ ಮುಜಾಫರ್‌ಪುರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಫೆಬ್ರವರಿ 10 ರಂದು ಈ ಪ್ರಕರಣದ ವಿಚಾರಣೆ ನಡೆಯಲಿದೆ. ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣದ ಬಳಿಕ ಪ್ರತಿಕ್ರಿಯೆ ನೀಡಿದ ಸೋನಿಯಾ ಗಾಂಧಿ ಈ ಹೇಳಿಕೆ ನೀಡಿದ್ದರು.

ರಾಷ್ಟ್ರಪತಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಸೋನಿಯಾ ಗಾಂಧಿ ವಿರುದ್ಧ ಉತ್ತರ ಪ್ರದೇಶದಲ್ಲಿ ಪ್ರಕರಣ ದಾಖಲು
ದ್ರೌಪದಿ ಮುರ್ಮು ಹಾಗೂ ಸೋನಿಯಾ ಗಾಂಧಿ
Ganapathi Sharma
|

Updated on:Feb 02, 2025 | 1:08 PM

Share

ನವದೆಹಲಿ, ಫೆಬ್ರವರಿ 2: ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಸಂಕಷ್ಟ ಎದುರಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ಪೂವರ್ ಲೇಡಿ’ ಎಂದು ಕರೆದಿದ್ದಕ್ಕಾಗಿ ಬಿಹಾರದ ಮುಜಾಫರ್‌ಪುರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುಧೀರ್ ಓಜಾ ಎಂಬ ವಕೀಲರು ಶನಿವಾರ ಸಿಜಿಎಂ ನ್ಯಾಯಾಲಯದಲ್ಲಿ ಈ ದೂರು ನೀಡಿದ್ದಾರೆ. ನ್ಯಾಯಾಲಯ ಅದನ್ನು ಅಂಗೀಕರಿಸಿದ್ದು, ಫೆಬ್ರವರಿ 10 ರಂದು ಪ್ರಕರಣದ ವಿಚಾರಣೆ ನಿಗದಿಪಡಿಸಿದೆ.

ಅರ್ಜಿದಾರರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಸಹ ಆರೋಪಿಗಳೆಂದು ಹೆಸರಿಸಿದ್ದಾರೆ ಮತ್ತು ಅವರ ವಿರುದ್ಧವೂ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.

ದ್ರೌಪದಿ ಮುರ್ಮು ಅವರನ್ನು ಸೋನಿಯಾ ಗಾಂಧಿ ಅವಮಾನಿಸಿದ್ದಾರೆ ಎಂದು ಅರ್ಜಿದಾರ ಸುಧೀರ್ ಹೇಳಿದ್ದಾರೆ. ಬಜೆಟ್ ಅಧಿವೇಶನದ ವೇಳೆ ರಾಷ್ಟ್ರಪತಿ ಭಾಷಣದ ನಂತರ ಸೋನಿಯಾ ಗಾಂಧಿ ಅವರು ನೀಡಿದ ಹೇಳಿಕೆ ಅತ್ಯಂತ ಆಕ್ಷೇಪಾರ್ಹವಾಗಿದೆ. ರಾಷ್ಟ್ರಪತಿ ಮಹಿಳೆಯಾಗಿದ್ದಾರೆ ಮತ್ತು ಬುಡಕಟ್ಟು ಸಮುದಾಯದಿಂದ ಬಂದವರು. ಅವರ ವಿರುದ್ಧ ಈ ಹೇಳಿಕೆ ಆಕ್ಷೇಪಾರ್ಹ ಎಂದು ಓಜಾ ಪ್ರತಿಪಾದಿಸಿದ್ದಾರೆ.

ಸೋನಿಯಾ ಗಾಂಧಿ ಹೇಳಿದ್ದೇನು?

ದ್ರೌಪದಿ ಮುರ್ಮು ಅವರ ಭಾಷಣದ ನಂತರ ಪತ್ರಕರ್ತರ ಬಳಿ ಪ್ರತಿಕ್ರಿಯಿಸಿದ ಸೋನಿಯಾ ಗಾಂಧಿ, ರಾಷ್ಟ್ರಪತಿಗಳ ಭಾಷಣ ಬೋರಿಂಗ್ ಆಗಿತ್ತು. ಭಾಷಣದ ಕೊನೆಯಲ್ಲಿ ‘ಪೂವರ್ ಲೇಡಿ’ ದಣಿದಿದ್ದರು ಎಂದಿದ್ದರು. ಸೋನಿಯಾ ಗಾಂಧಿ ಈ ಹೇಳಿಕೆ ನೀಡುವ ವೇಳೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಕೂಡ ಹಾಜರಿದ್ದರು.

ಸೋನಿಯಾ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದು ದುರದೃಷ್ಟಕರ ಮತ್ತು ಅವಮಾನಕರ ಹೇಳಿಕೆ ಎಂದು ರಾಷ್ಟ್ರಪತಿ ಭವನ ಕೂಡ ಹೇಳಿದೆ.

ಕಾಂಗ್ರೆಸ್ ರಾಜಮನೆತನದ ದುರಹಂಕಾರ: ಮೋದಿ

ಸೋನಿಯಾ ಗಾಂಧಿಯವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಇಂದು ದೇಶವು ಮತ್ತೆ ಕಾಂಗ್ರೆಸ್ ರಾಜಮನೆತನದ ದುರಹಂಕಾರವನ್ನು ನೋಡಿದೆ ಎಂದು ಹೇಳಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನಲ್ಲಿ ಮಾತನಾಡಿದರು. ಅಭಿವೃದ್ಧಿ ಹೊಂದಿದ ಭಾರತದ ಸಾಧನೆಗಳು ಮತ್ತು ದೂರದೃಷ್ಟಿಯ ಬಗ್ಗೆ ದೇಶವಾಸಿಗಳಿಗೆ ತಿಳಿಸಿದರು. ಹಿಂದಿ ಅವರ ಮಾತೃಭಾಷೆಯಲ್ಲ, ಆದರೂ ಅವರು ಅತ್ಯುತ್ತಮ ಭಾಷಣ ಮಾಡಿದರು. ಆದರೆ ಕಾಂಗ್ರೆಸ್​ನ ರಾಜಮನೆತನದವರು ಅವರನ್ನು ಅವಮಾನಿಸಿದರು ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: 900 ಇಲಿಗಳನ್ನು ತಿಂದ ನಂತರ ಬೆಕ್ಕು ಹಜ್‌ಗೆ ಹೋಯ್ತು: ಗಾದೆ ಮೂಲಕ ಬಜೆಟ್​ ವ್ಯಂಗ್ಯವಾಡಿದ ಖರ್ಗೆ

ಕಾಂಗ್ರೆಸ್​​ನವರು ರಾಷ್ಟ್ರಪತಿಗಳನ್ನು ಪೂವರ್ ಲೇಡಿ ಎಂದು ಕರೆದಿದ್ದಾರೆ. ದಣಿದವರು ಎಂದು ಜರೆದಿದ್ದಾರೆ. ಇದು ದೇಶದ ಆದಿವಾಸಿ ಸಹೋದರ ಸಹೋದರಿಯರಿಗೆ ಮಾಡಿದ ಅವಮಾನ ಎಂದು ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:07 pm, Sun, 2 February 25

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ