AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ ವಲಸಿಗರ ಮೇಲಿನ ದಾಳಿ ವದಂತಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು

ತಮಿಳುನಾಡು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಕೆ.ಅಣ್ಣಾಮಲೈ ರಾಜ್ಯದಲ್ಲಿ ವಲಸೆ ಕಾರ್ಮಿಕರ ಮೇಲೆ ನಡೆಯುತ್ತಿರುವ ಆಪಾದಿತ ದಾಳಿಗೆ ಆಡಳಿತಾರೂಢ ಡಿಎಂಕೆ ಪಕ್ಷವನ್ನು ಹೊಣೆಗಾರರನ್ನಾಗಿ ಮಾಡಿದ ಹಿನ್ನೆಲೆಯಲ್ಲಿ ತಮಿಳುನಾಡು ಪೊಲೀಸರು ಅವರ ವಿರುದ್ಧ ಗುಂಪುಗಳ ನಡುವೆ ಹಿಂಸಾಚಾರ ಪ್ರಚೋದನೆ ಹಾಗೂ ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಬಿಹಾರ ವಲಸಿಗರ ಮೇಲಿನ ದಾಳಿ ವದಂತಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು
ಕೆ ಅಣ್ಣಾಮಲೈ
ನಯನಾ ರಾಜೀವ್
|

Updated on:Mar 05, 2023 | 2:15 PM

Share

ತಮಿಳುನಾಡು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಕೆ.ಅಣ್ಣಾಮಲೈ ರಾಜ್ಯದಲ್ಲಿ ವಲಸೆ ಕಾರ್ಮಿಕರ ಮೇಲೆ ನಡೆಯುತ್ತಿರುವ ಆಪಾದಿತ ದಾಳಿಗೆ ಆಡಳಿತಾರೂಢ ಡಿಎಂಕೆ ಪಕ್ಷವನ್ನು ಹೊಣೆಗಾರರನ್ನಾಗಿ ಮಾಡಿದ ಹಿನ್ನೆಲೆಯಲ್ಲಿ ತಮಿಳುನಾಡು ಪೊಲೀಸರು ಅವರ ವಿರುದ್ಧ ಗುಂಪುಗಳ ನಡುವೆ ಹಿಂಸಾಚಾರ ಪ್ರಚೋದನೆ ಹಾಗೂ ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಸೈಬರ್ ಕ್ರೈಂ ವಿಭಾಗವು ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥರ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಮತ್ತು ಇತರ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಸೆಕ್ಷನ್‌ಗಳಲ್ಲಿ ಪ್ರಕರಣ ದಾಖಲಿಸಿದೆ. ಅಧಿಕಾರಿಗಳ ಪ್ರಕಾರ, ಘಟನೆಯ ಬಗ್ಗೆ ಬಿಜೆಪಿ ಬಿಹಾರ ಟ್ವಿಟರ್ ಖಾತೆದಾರರ ವಿರುದ್ಧವೂ ಪ್ರಕರಣ ದಾಖಲಾಗಿದೆ.

ವಲಸೆ ಕಾರ್ಮಿಕರ ಸಮಸ್ಯೆಯ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿದ್ದ ಅಣ್ಣಾಮಲೈ, ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರು ಸುರಕ್ಷಿತವಾಗಿದ್ದಾರೆ ಆದರೆ ಮುಖ್ಯಮಂತ್ರಿ ಸ್ಟಾಲಿನ್ ನೇತೃತ್ವದ ಡಿಎಂಕೆ ಹಾಗೂ ಅದರ ಮೈತ್ರಿ ಪಕ್ಷದ ನಾಯಕರು ಅವರ ಮೇಲಿನ ದ್ವೇಷಕ್ಕೆ ಕಾರಣವಾಗುತ್ತಿದ್ದಾರೆ ಎಂದು ಆರೋಪಿಸಿದ್ದರು.

ಅಣ್ಣಾಮಲೈ ಸರಣಿ ಟ್ವೀಟ್ ಮಾಡಿ, ಸರ್ಕಾರದ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದರು, ಉತ್ತರ ಭಾರತೀಯರ ಬಗ್ಗೆ ಡಿಎಂಕೆ ಸಂಸದರ ನೀಚ ಕಾಮೆಂಟ್​ಗಳು, ಡಿಎಂಕೆ ಸಚಿವರು ಅವರನ್ನು ಪಾನಿಪೂರಿವಾಲಾ ಎಂದು ಕರೆಯುವುದು ಮತ್ತು ಅವರ ಮೈತ್ರಿಕೂಟದ ಸದಸ್ಯರು ಅವರ ವಲಸೆಗೆ ಒತ್ತಾಯಿಸುತ್ತಿರುವುದರ ಪರಿಣಾಮವನ್ನು ನಾವು ನೋಡುತ್ತಿದ್ದೇವೆ ಎಂದಿದ್ದಾರೆ.

ನಾವು ತಮಿಳರು ಜಗತ್ತು ಒಂದೇ ಎನ್ನುವ ಪರಿಕಲ್ಪನೆಯನ್ನು ನಂಬುತ್ತೇವೆ, ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲಿನ ದಾಳಿಗಳ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿರುವ ನಕಲಿ ಸುದ್ದಿಗಳನ್ನು ನೋಡುವುದು ನಿರಾಶಾದಾಯಕವಾಗಿದೆ. ನಾವು ಉತ್ತರದ ವಿರುದ್ಧ ಪ್ರತ್ಯೇಕತೆ ಮನೋಭಾವ ಅಥವಾ ದ್ವೇಷವನ್ನು ಯಾವತ್ತೂ ಹರಡುವುದಿಲ್ಲ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:13 pm, Sun, 5 March 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ